ಒಬ್ಬಂಟಿಯಾದ ಹಾರ್ದಿಕ್! ಫೋಟೋ ವೈರಲ್ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ವಿರುದ್ಧ ಹರಿಹಾಯ್ದ ಹರ್ಭಜನ್ ಸಿಂಗ್

Hardik Pandya Viral Photo: ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದು ವೈರಲ್ ಆಗುತ್ತಿದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಸೋಲಿನ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ಆಟಗಾರರು ಕೈಕುಲುಕುತ್ತಿರುವ ಫೋಟೋದಲ್ಲಿ ಹಾರ್ದಿಕ್ ಪಾಂಡ್ಯ ಡಗೌಟ್‌ನಲ್ಲಿ ಏಕಾಂಗಿಯಾಗಿ ಕುಳಿತಿದ್ದಾರೆ.

Written by - Bhavishya Shetty | Last Updated : Apr 3, 2024, 03:50 PM IST
    • ಹಾರ್ದಿಕ್ ಪಾಂಡ್ಯ ಮತ್ತು ರೋಹಿತ್ ಶರ್ಮಾ ನಡುವೆ ನಾಯಕತ್ವದ ಬಗ್ಗೆ ವಿವಾದ
    • ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದು ವೈರಲ್ ಆಗುತ್ತಿದೆ
    • ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ಸತತ ಮೂರನೇ ಸೋಲನ್ನು ಎದುರಿಸಿದೆ
ಒಬ್ಬಂಟಿಯಾದ ಹಾರ್ದಿಕ್! ಫೋಟೋ ವೈರಲ್ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ವಿರುದ್ಧ ಹರಿಹಾಯ್ದ ಹರ್ಭಜನ್ ಸಿಂಗ್ title=
Mumbai Indians

Hardik Pandya Viral Photo: ಕಳೆದ ಕೆಲವು ದಿನಗಳಿಂದ ಹಾರ್ದಿಕ್ ಪಾಂಡ್ಯ ಮತ್ತು ರೋಹಿತ್ ಶರ್ಮಾ ನಡುವೆ ನಾಯಕತ್ವದ ಬಗ್ಗೆ ವಿವಾದವಿದೆ ಎಂದು ಹೇಳಲಾಗುತ್ತಿದೆ. ಐಪಿಎಲ್ ಆರಂಭಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಮ್ಯಾನೇಜ್‌ಮೆಂಟ್ ಮಹತ್ವದ ನಿರ್ಧಾರ ತೆಗೆದುಕೊಂಡು, ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯಗೆ ನಾಯಕತ್ವ ನೀಡಲಾಗಿದೆ. ಈ ನಿರ್ಧಾರದಿಂದ ರೋಹಿತ್ ಶರ್ಮಾ ಅಭಿಮಾನಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಂತೆಯೇ ತಂಡದ ಪ್ರದರ್ಶನ ಕೂಡ ಕಳಪೆಯಾಗುತ್ತಿದ್ದು, ಈ ಎಲ್ಲಾ ಬೆಳವಣಿಗೆಗಳಿಂದ ನಾಯಕ ಹಾರ್ದಿಕ್ ಪಾಂಡ್ಯ ಏಕಾಂಗಿಯಾಗಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಭಾರತಕ್ಕೆ ಬಂದ್ರೆ ರಾತ್ರಿ ಮಲಗೋದೆ ಇಲ್ವಂತೆ ಆಂಡ್ರೆ ರಸೆಲ್! ಮಧ್ಯರಾತ್ರಿ ಅದನ್ನೇ ಮಾಡೋದಂತೆ!!

ಹಾರ್ದಿಕ್ ಪಾಂಡ್ಯ ಏಕಾಂಗಿಯೇ?

ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದು ವೈರಲ್ ಆಗುತ್ತಿದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಸೋಲಿನ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ಆಟಗಾರರು ಕೈಕುಲುಕುತ್ತಿರುವ ಫೋಟೋದಲ್ಲಿ ಹಾರ್ದಿಕ್ ಪಾಂಡ್ಯ ಡಗೌಟ್‌ನಲ್ಲಿ ಏಕಾಂಗಿಯಾಗಿ ಕುಳಿತಿದ್ದಾರೆ. ಹೀಗಾಗಿ ಇಡೀ ತಂಡ ಒಂದೆಡೆಯಾದರೆ ಹಾರ್ದಿಕ್ ಪಾಂಡ್ಯ ಮತ್ತೊಂದೆಡೆ ಇದ್ದಾರೆಯೇ ಎಂಬ ಪ್ರಶ್ನೆಯನ್ನು ನೆಟ್ಟಿಗರು ಕೇಳುತ್ತಿದ್ದಾರೆ.

ಈ ಋತುವಿನಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ಸತತ ಮೂರನೇ ಸೋಲನ್ನು ಎದುರಿಸಿದೆ. ಇದಕ್ಕೂ ಮುನ್ನ ಗುಜರಾತ್ ಟೈಟಾನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದ್ದವು. ಅಹಮದಾಬಾದ್ ಮತ್ತು ಹೈದರಾಬಾದ್ ನಂತರ, ಹಾರ್ದಿಕ್ ಪಾಂಡ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋಲು ಕಂಡಿದೆ. ಇದೇ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ಡಗೌಟ್‌’ನಲ್ಲಿ ಏಕಾಂಗಿಯಾಗಿ ಕುಳಿತಿದ್ದರು.

ಇದನ್ನೂ ಓದಿ: ಮಧುಮೇಹಿಗಳು ಎಳನೀರಿಗೆ ಈ ಹಣ್ಣಿನ ರಸ ಬೆರೆಸಿ ಕುಡಿಯಿರಿ! ಬೇಸಿಗೆಯಲ್ಲಿ ಬ್ಲಡ್ ಶುಗರ್ ಕಂಟ್ರೋಲ್ ಮಾಡಲು ಇದಕ್ಕಿಂತ ಬೆಸ್ಟ್ ಬೇರೆಯಿಲ್ಲ

ಹಾರ್ದಿಕ್ ಪಾಂಡ್ಯಗೆ ಭಜ್ಜಿ ಬೆಂಬಲ:

ಟೀಂ ಇಂಡಿಯಾದ ಮಾಜಿ ಸ್ಟಾರ್ ಸ್ಪಿನ್ನರ್ ಹರ್ಭಜನ್ ಸಿಂಗ್, ರಾಜಸ್ಥಾನ ವಿರುದ್ಧದ ಸೋಲಿನ ನಂತರ ಹಾರ್ದಿಕ್ ಪಾಂಡ್ಯ ಬೆಂಬಲಕ್ಕೆ ಬಂದಿದ್ದಾರೆ. "ಇದು ಒಳ್ಳೆಯದಲ್ಲ, ಹಾರ್ದಿಕ್ ಏಕಾಂಗಿ" ಎಂದು ಹೇಳಿದರು. ಯಾರನ್ನೂ ಹೆಸರಿಸದೆ ರೋಹಿತ್ ಶರ್ಮಾ ಸೇರಿದಂತೆ ತಂಡದ ಹಿರಿಯ ಆಟಗಾರರ ಮೇಲೆ ಹರ್ಭಜನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಡ್ರೆಸ್ಸಿಂಗ್ ರೂಂನಲ್ಲಿ ಹಿರಿಯರು ಇದ್ದಾರೆ. ಅವರು ಹಾರ್ದಿಕ್‌ಗೆ ಮುಕ್ತವಾಗಿ ಕೆಲಸ ಮಾಡಲು ಬಿಡುವುದಿಲ್ಲ. ತಂಡದ ಹಲವು ಆಟಗಾರರು ಗೊತ್ತಿದ್ದೋ ಅಥವಾ ತಿಳಿಯದೆಯೋ ಹಾರ್ದಿಕ್ ಅವರನ್ನು ಗೊಂದಲಗೊಳಿಸುತ್ತಾರೆ. ಈ ಪರಿಸ್ಥಿತಿ ತಂಡಕ್ಕೆ ಒಳ್ಳೆಯದಲ್ಲ” ಎಂದು ಹೇಳಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News