Gautam Gambhir Political Retirement: ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ಕ್ರಿಕೆಟ್’ನಿಂದಾಗಿ ಗಂಭೀರ್ ತಮ್ಮ ರಾಜಕೀಯ ಜವಾಬ್ದಾರಿಯಿಂದ ಮುಕ್ತರಾಗಲು ಬಯಸಿದ್ದಾರೆ. X ನಲ್ಲಿ ಪೋಸ್ಟ್ ಶೇರ್ ಮಾಡಿರುವ ಅವರು, ಕ್ರಿಕೆಟ್ ಕಾರಣದಿಂದ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ.
“ಮುಂಬರುವ ಕ್ರಿಕೆಟ್ ಬದ್ಧತೆಗಳ ಮೇಲೆ ಕೇಂದ್ರೀಕರಿಸುವ ಸಲುವಾಗಿ, ನನ್ನನ್ನು ರಾಜಕೀಯ ಕರ್ತವ್ಯಗಳಿಂದ ಮುಕ್ತಗೊಳಿಸುವಂತೆ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ವಿನಂತಿಸಿದ್ದೇನೆ. ಜನರ ಸೇವೆ ಮಾಡಲು ನನಗೆ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ನನ್ನ ಹೃತ್ಪೂರ್ವಕವಾಗಿ ಧನ್ಯವಾದಗಳು” ಎಂದು ಗೌತಮ್ ಗಂಭೀರ್ ಬರೆದಿದ್ದಾರೆ.
I have requested Hon’ble Party President @JPNadda ji to relieve me of my political duties so that I can focus on my upcoming cricket commitments. I sincerely thank Hon’ble PM @narendramodi ji and Hon’ble HM @AmitShah ji for giving me the opportunity to serve the people. Jai Hind!
— Gautam Gambhir (@GautamGambhir) March 2, 2024
ಪೂರ್ವ ದೆಹಲಿಯ ಬಿಜೆಪಿ ಸಂಸದ ಗೌತಮ್ ಗಂಭೀರ್ 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಬಿಜೆಪಿ ಪಟ್ಟಿ ಬಿಡುಗಡೆ ಮಾಡುವ ಮುನ್ನವೇ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. 2019 ರ ಲೋಕಸಭೆ ಚುನಾವಣೆಯಲ್ಲಿ ಪೂರ್ವ ದೆಹಲಿ ಕ್ಷೇತ್ರದಿಂದ ಬಂಪರ್ ಗೆಲುವು ಸಾಧಿಸಿದ್ದ ಗಂಭೀರ್, ಕ್ರಿಕೆಟ್ ಲೋಕದಲ್ಲೂ ಛಾಪು ಮೂಡಿಸಿದ್ದಾರೆ. 2011 ರ ODI ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದ ಅವರು, ಇದಲ್ಲದೆ 2007ರ T20 ವಿಶ್ವ ಚಾಂಪಿಯನ್ ತಂಡದ ಭಾಗವಾಗಿದ್ದರು.
ಇದನ್ನೂ ಓದಿ: 2 ಮಕ್ಕಳ ತಂದೆಯೊಂದಿಗೆ ಅಫೇರ್, ಖ್ಯಾತ ಕ್ರಿಕೆಟಿಗನ ಪ್ರೇಮಪಾಶಕ್ಕೆ ಬಿದ್ದು ಧರ್ಮವನ್ನೇ ಬದಲಾಯಿಸಿದ ಸ್ಟಾರ್ ನಟಿ!
2004ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಪ್ರವೇಶಿಸಿದ್ದ ಗೌತಮ್ ಗಂಭೀರ್ ನಿವೃತ್ತ ಕ್ರಿಕೆಟಿಗರ ಲೀಗ್’ನಲ್ಲಿ ಆಡುತ್ತಿದ್ದಾರಂತೆ. ಜೊತೆಗೆ ಅಂತರಾಷ್ಟ್ರೀಯ ಕ್ರಿಕೆಟ್’ನಲ್ಲಿ ಕಾಮೆಂಟರಿ ಕೂಡ ಮಾಡುತ್ತಾರೆ. ಈ ಕಾರಣಕ್ಕಾಗಿ ಅವರನ್ನು ಪಾರ್ಟ್ ಟೈಮ್ ಎಂಪಿ ಎಂದು ಕರೆದು ಟ್ರೋಲ್ ಮಾಡಲಾಗುತ್ತಿತ್ತು. ಗಂಭೀರ್ ಭಾರತ ಪರ 58 ಟೆಸ್ಟ್, 147 ODI ಮತ್ತು 37 T20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.