Gautam Gambhir hugging Virat Kohli: ಬಾಂಗ್ಲಾದೇಶ ವಿರುದ್ಧದ ಎರಡು ಟೆಸ್ಟ್‌ಗಳ ಸರಣಿಯನ್ನು ಟೀಂ ಇಂಡಿಯಾ 2-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ. ಕಾನ್ಪುರದಲ್ಲಿ ನಡೆದ ಎರಡನೇ ಟೆಸ್ಟ್ ನಲ್ಲಿ ಅಸಾಮಾನ್ಯ ಪ್ರದರ್ಶನ ತೋರಿದ ಭಾರತ 7 ವಿಕೆಟ್ ಗಳ ಜಯ ಸಾಧಿಸಿದೆ. ಫಲಿತಾಂಶ ಅಸಾಧ್ಯವೆನಿಸಿದ ಈ ಪಂದ್ಯದಲ್ಲಿ ಟೀಂ ಇಂಡಿಯಾ ಆಕ್ರಮಣಕಾರಿ ಆಟ ಪ್ರದರ್ಶಿಸುವ ಮೂಲಕ ಪಂದ್ಯವನ್ನು ಗೆದ್ದುಕೊಂಡಿದೆ. 


COMMERCIAL BREAK
SCROLL TO CONTINUE READING

ಸರಣಿ ಗೆಲುವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2025 ಪಾಯಿಂಟ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ. ಈ ಗೆಲುವಿಗೆ ಭಾರತದ ಆಟಗಾರರು ಸಂತಸ ವ್ಯಕ್ತಪಡಿಸಿದ್ದಾರೆ. ಪಂದ್ಯ ಮುಗಿದ ಕ್ಷಣವೇ ಒಬ್ಬರನ್ನೊಬ್ಬರು ಅಪ್ಪಿಕೊಂಡು ಗೆಲುವನ್ನು ಸಂಭ್ರಮಿಸಿದ್ದಾರೆ. ಟೀಂ ಇಂಡಿಯಾದ ನೂತನ ಮುಖ್ಯ ಕೋಚ್ ಗೌತಮ್ ಗಂಭೀರ್ ಕೊಹ್ಲಿಯನ್ನು ಅಪ್ಪಿಕೊಂಡು ಅಭಿನಂದನೆ ಸಲ್ಲಿಸಿದ್ದಾರೆ. ಈ ದೃಶ್ಯ ನೆಟ್ಟಿಗರನ್ನು ಆಕರ್ಷಿಸಿದೆ.


ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಹಿಂದೆ ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ಮೈದಾನದಲ್ಲಿ ಹಲವು ಬಾರಿ ಜಗಳ ಮಾಡಿಕೊಂಡಿದ್ದರು,  ಜೊತೆಗೆ ಸಮಯ ಸಿಕ್ಕಾಗಲೆಲ್ಲಾ ಗಂಭೀರ್ ಕೊಹ್ಲಿಯನ್ನು ಟೀಕಿಸುತ್ತಿದ್ದರು. ಐಪಿಎಲ್ 2023 ರ ಸೀಸನ್‌ನಲ್ಲಿ ಲಕ್ನೋ ಸೂಪರ್‌ಜೈಂಟ್ಸ್‌ನ ಮೆಂಟರ್ ಆಗಿದ್ದ ಗಂಭೀರ್, ಮೈದಾನದಲ್ಲಿ ವಿರಾಟ್ ಕೊಹ್ಲಿಯೊಂದಿಗೆ ಜಗಳವಾಡಿದ್ದರು.


ಒಂದು ವರ್ಷದ ನಂತರ ಗಂಭೀರೆ ಈ ಜಗಳವನ್ನು ಕೊನೆಗೊಳಿಸಿದರು. ಐಪಿಎಲ್ 2024 ರ ಸೀಸನ್ ಸಂದರ್ಭದಲ್ಲಿ, ಅವರು ವಿರಾಟ್ ಕೊಹ್ಲಿಯನ್ನು ವಿಶೇಷ ರೀತಿಯಲ್ಲಿ ಅಭಿನಂದಿಸಿದ್ದರು, ಕೊಹ್ಲಿ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದರಿಂದ ಈ ಇಬ್ಬರು ತಮ್ಮ ಹಳೆಯ ಜಗಳ ಮರೆತು ಆತ್ಮೀಯ ಗೆಳೆಯರಾಗಿ ಮುಂದುವರೆದಿದ್ದಾರೆ.


95 ರನ್‌ಗಳ ಅಲ್ಪ ಗುರಿಯೊಂದಿಗೆ ಕಣಕ್ಕೆ ಇಳಿದ ಭಾರತ ಎರಡನೇ ಇನಿಂಗ್ಸ್‌ನಲ್ಲಿ 3 ವಿಕೆಟ್‌ಗೆ 96 ರನ್ ಗಳಿಸಿ ಜಯ ಸಾಧಿಸಿತು. ನಾಯಕ ರೋಹಿತ್ ಶರ್ಮಾ (8) ಮತ್ತು ಶುಭಮನ್ ಗಿಲ್ (6) ವಿಫಲರಾದರು.. ಯಶಸ್ವಿ ಜೈಸ್ವಾಲ್ (45 ಎಸೆತಗಳಲ್ಲಿ 8 ಬೌಂಡರಿ, 51 ಸಿಕ್ಸರ್) ಅರ್ಧಶತಕದೊಂದಿಗೆ ಮಿಂಚಿದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ