Virat Kohli and Anushka Sharma: ಇನ್ನೇನು ಕೆಲವೇ ದಿನಗಳಲ್ಲಿ ವಿಶ್ವಕಪ್ ಆರಂಭವಾಗುತ್ತಿದೆ. ಈ ಬಾರಿಯ ವಿಶ್ವ ಟೂರ್ನಿ ಭಾರತದಲ್ಲಿ ನಡೆಯಲಿದ್ದು, ಟೀಂ ಇಂಡಿಯಾ ಆಟಗಾರರು ಭರ್ಜರಿ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದಾರೆ, ಇನ್ನು ವಿರಾಟ್ ಕೊಹ್ಲಿಯೂ ಸಹ ಈ ಬಾರಿ ಭಾರತಕ್ಕೆ ವಿಶ್ವಕಪ್ ಗೆದ್ದುಕೊಡಲೇಬೇಕು ಎಂಬ ಪಣತೊಟ್ಟಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ವಿಶ್ವಕಪ್’ಗೂ ಮುನ್ನ ಟೀಂ ಇಂಡಿಯಾಗೆ ವಿಶೇಷ ಸಲಹೆ ನೀಡಿದ ಯುವರಾಜ್ ಸಿಂಗ್! ಇದು ಗೆಲುವಿನ ಗುರುಮಂತ್ರ


ಈ ಮಧ್ಯೆ ವಿರುಷ್ಕಾ ದಂಪತಿ ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು…ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಮಾಧ್ಯಮ ಮೂಲವೊಂದು ತಮ್ಮ  ವರದಿಯೊಂದರಲ್ಲಿ ಬಹಿರಂಗಪಡಿಸಿದೆ.


ಇದನ್ನೂ ಓದಿ: ಇಂದು ಭಾರತ-ಇಂಗ್ಲೆಂಡ್ ವಿಶ್ವಕಪ್ ಅಭ್ಯಾಸ ಪಂದ್ಯ: ಎಷ್ಟು ಗಂಟೆಗೆ, ಎಲ್ಲಿ, ಉಚಿತ ವೀಕ್ಷಣೆ ಹೇಗೆ?


ಹಿಂದೂಸ್ತಾನ್ ಟೈಮ್ಸ್ ಇಂಗ್ಲಿಷ್ ತಮ್ಮ ವೆಬ್‌ಸೈಟ್’ನಲ್ಲಿ ಮಾಡಿರುವ ಎಕ್ಸ್‌’ಕ್ಲೂಸಿವ್ ವರದಿಯ ಅನುಸಾರ, ವಿರಾಟ್ ಮತ್ತು ಅನುಷ್ಕಾ ದಂಪತಿಗೆ ಎರಡನೇ ಮಗುವಿನ ನಿರೀಕೆಯಲಿದ್ದಾರೆ. ಈಗಾಗಲೇ ಮೂರು ತಿಂಗಳ ಗರ್ಭಿಣಿಯಾಗಿರುವ ಅನುಷ್ಕಾ ಇತ್ತೀಚೆಗೆ ಮುಂಬೈನ ಹೆರಿಗೆ ಆಸ್ಪತ್ರೆಯೊಂದರಲ್ಲಿ ಕಾಣಿಸಿಕೊಂಡಿದ್ದರು. ಆದರೆ ಆ ಫೋಟೋಗಳನ್ನು ಪ್ರಕಟಿಸದಂತೆ ವಿನಂತಿಸಿಕೊಂಡಿದ್ದರು ಎನ್ನಲಾಗಿದೆ. ಅಂದಹಾಗೆ 2021ರಲ್ಲಿ ವಿರುಷ್ಕಾ ದಂಪತಿ ವಾಮಿಕಾ ಎಂಬ ಹೆಣ್ಣು ಮಗುವಿಗೆ ಪೋಷಕರಾಗಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್