ಅಕ್ಟೋಬರ್ 23ರಂದು ಐತಿಹಾಸಿಕ ಪಂದ್ಯ ನಡೆಯಲಿದ್ದು, ಭಾರತ ಪಾಕಿಸ್ತಾನ ಮುಖಾಮುಖಿಯಾಗಲಿವೆ. ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಮೈದಾನ ಈ ಮಹತ್ವದ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. ಆದರೆ ಕಳೆದ ಕೆಲವು ದಿನಗಳಿಂದ ಮೆಲ್ಬೋರ್ನ್‌ನಲ್ಲಿ ಮಳೆಯಾಗುತ್ತಿದ್ದು, ಪಂದ್ಯಕ್ಕೆ ಅಡ್ಡಿಯಾಗುತ್ತದೆಯೋ ಎಂಬ ಆತಂಕ ಎದುರಾಗಿತ್ತು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: T20 World Cup 2022: ಟಿ20 ವಿಶ್ವಕಪ್‌ನಿಂದ ಹೊರಬಿದ್ದ ವೆಸ್ಟ್ ಇಂಡೀಸ್ ಟೀಂ!


ಇನ್ನೊಂದೆಡೆ ಅಕ್ಟೋಬರ್ 23ರಂದು ಮೆಲ್ಬೋರ್ನ್‌ನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಅಲ್ಲಿನ ಹವಾಮಾನ ಇಲಾಖೆ ಎಚ್ಚರಿಕೆ ನೀಡಿತ್ತು. ಇಂಡೋ ಪಾಕ್ ನಡುವಿನ ಪಂದ್ಯಕ್ಕೆ ವರುಣ ಅಡ್ಡಿಯಾಗುತ್ತಾನೆ ಎಂಬ ಭಯ ಕಾಡಿತ್ತು. ಇದರ ಜೊತೆಗೆ ಕೋಟ್ಯಂತರ ಅಭಿಮಾನಿಗಳು ಪಂದ್ಯಕ್ಕೆ ಮಳೆ ಅಡ್ಡಿ ಆಗದಿರಲಿ ಪ್ರಾರ್ಥನೆ ಮಾಡಿದ್ದರು. ಇದೀಗ ಕೊನೆಗೂ ಅಭಿಮಾನಿಗಳ ಪ್ರಾರ್ಥನೆ ಫಲಿಸಿದೆ.


ಆಸ್ಟ್ರೇಲಿಯಾದ MET ಇಲಾಖೆಯು, ಭಾರತ-ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಮಳೆಯಾಗುವ ಸಾಧ್ಯತೆ ಶೇ.60ರಷ್ಟು ಕಡಿಮೆ ಇದೆ ಎಂದು ಊಹಿಸಿತ್ತು. ಆದರೆ ಇಲ್ಲಿಯವರೆಗೆ ಮೆಲ್ಬೋರ್ನ್‌ನಲ್ಲಿ ಹವಾಮಾನವು ಸಂಪೂರ್ಣವಾಗಿ ಉತ್ತಮವಾಗಿದೆ. ಹೀಗಾಗಿ ಯಾವುದೇ ಆತಂಕ ಇಲ್ಲದೆ ಪಂದ್ಯ ಸಂಪೂರ್ಣವಾಗಿ ನಡೆಯಲಿದೆ ಎಂದು ಹೇಳಲಾಗಿದೆ.


ಮೆಲ್ಬೋರ್ನ್ ಕ್ರೀಡಾಂಗಣದಲ್ಲಿ ಒಂದು ಬಾರಿಗೆ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಜನ ಪಂದ್ಯವನ್ನು ವೀಕ್ಷಿಸಬಹುದು. ಈಗಾಗಲೇ ಹೈವೋಲ್ಟೇಜ್ ಪಂದ್ಯವಾದ ಭಾರತ-ಪಾಕಿಸ್ತಾನದ ನಡುವಿನ ಆಟಕ್ಕೆ ಎಲ್ಲಾ ಟಿಕೆಟ್‌ಗಳು ಮಾರಾಟವಾಗಿದ್ದು, ಕ್ರೀಡಾಂಗಣದಲ್ಲಿ ಜನಸ್ತೋಮ ಕಾಣಿಸಿಕೊಳ್ಳಲಿದೆ.


ಭಾರತ : ರೊಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್ , ಯುಜುವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷ್‌ದೀಪ್ ಸಿಂಗ್, ಮೊಹಮ್ಮದ್ ಶಮಿ.ಮೀಸಲು ಆಟಗಾರರು: ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್


ಇದನ್ನೂ ಓದಿ: T20 World Cup: T20 ವಿಶ್ವಕಪ್ ನಲ್ಲಿ ಭಾರತದ ಸೂಪರ್ 12 ವೇಳಾಪಟ್ಟಿಯ ಸಂಪೂರ್ಣ ವಿವರ


ಪಾಕಿಸ್ತಾನ: ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್, ಹೈದರ್ ಅಲಿ, ಶಾನ್ ಮಸೂದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಖುಷ್ದಿಲ್ ಶಾ, ಇಫ್ತಿಕರ್ ಅಹ್ಮದ್, ಆಸಿಫ್ ಅಲಿ, ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಮೊಹಮ್ಮದ್ ಹಸ್ನೈನ್, ಹ್ಯಾರಿಸ್ ರೌಫ್, ಫಖರ್ ಜಮಾನ್, ಶಾಹೀನ್ ಶಾ ಅಫ್ರಿದಿ, ಫಖಾರ್ ಜಮಾನ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.