Team India ICC Test Ranking: ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟೆಸ್ಟ್ ತಂಡದ ಇತ್ತೀಚಿನ ಶ್ರೇಯಾಂಕಗಳನ್ನು ಬಿಡುಗಡೆ ಮಾಡಿದೆ. ಈ ಟೆಸ್ಟ್ ಶ್ರೇಯಾಂಕದಲ್ಲಿ ಟೀಂ ಇಂಡಿಯಾ ದೊಡ್ಡ ಲಾಭ ಪಡೆದಿದೆ. ಬಾಂಗ್ಲಾದೇಶ ವಿರುದ್ಧದ 2 ಟೆಸ್ಟ್‌ಗಳ ಸರಣಿಯನ್ನು ಭಾರತ ಗೆದ್ದುಕೊಂಡಿತ್ತು. ಈ ಕಾರಣದಿಂದಾಗಿ ಟೀಂ ಇಂಡಿಯಾ ಇತ್ತೀಚಿನ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ನಂಬರ್ 1 ತಂಡವಾಗಿದೆ. ಟೀಮ್ ಇಂಡಿಯಾ ಮೊದಲು ಆಸ್ಟ್ರೇಲಿಯಾ ನಂಬರ್ ಒನ್ ಸ್ಥಾನದಲ್ಲಿತ್ತು. ಇತ್ತೀಚಿನ ಶ್ರೇಯಾಂಕದಲ್ಲಿ ಭಾರತ 3690 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Ranji Trophy 2023: ಸ್ಟಾರ್ ಕ್ರಿಕೆಟಿಗನಿಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು: ಹೊಸ ಕ್ಯಾಪ್ಟನ್ ಘೋಷಣೆ!


ಟಿ-20 ನಂತರ ಟೆಸ್ಟ್ ನಲ್ಲಿ ನಂಬರ್-1:


ಸದ್ಯ ಭಾರತ ತಂಡ ಟಿ20 ಹಾಗೂ ಟೆಸ್ಟ್ ನಲ್ಲಿ ನಂಬರ್ 1 ಎನಿಸಿಕೊಂಡಿದೆ. ಟೀಮ್ ಇಂಡಿಯಾ ಪ್ರಸ್ತುತ ಏಕದಿನ ರ್ಯಾಂಕಿಂಗ್‌ನಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಇತ್ತೀಚಿನ ಟೆಸ್ಟ್ ಶ್ರೇಯಾಂಕದಲ್ಲಿ ಟೀಂ ಇಂಡಿಯಾ 3,690 ಅಂಕಗಳು ಮತ್ತು 115 ರೇಟಿಂಗ್‌ನೊಂದಿಗೆ ಅಗ್ರಸ್ಥಾನದಲ್ಲಿದೆ. ಆಸ್ಟ್ರೇಲಿಯ ತಂಡ 3,231 ಅಂಕಗಳೊಂದಿಗೆ 111 ರೇಟಿಂಗ್‌ನೊಂದಿಗೆ ಎರಡನೇ ಸ್ಥಾನದಲ್ಲಿದೆ. ಇದಲ್ಲದೇ ಇಂಗ್ಲೆಂಡ್ 106 ಅಂಕಗಳೊಂದಿಗೆ ಮೂರನೇ ಹಾಗೂ ನ್ಯೂಜಿಲೆಂಡ್ 100 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.


ಏಕದಿನ ರ‍್ಯಾಂಕಿಂಗ್‌ನಲ್ಲೂ ನಂಬರ್-1 ಆಗುವ ಅವಕಾಶ:


ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯು ಜನವರಿ 18 ರಂದು ಹೈದರಾಬಾದ್‌ನಲ್ಲಿ ನಡೆಯಲಿದೆ. ಈ ಸರಣಿಯಲ್ಲಿ ನ್ಯೂಜಿಲೆಂಡ್ ತಂಡವನ್ನು 3-0 ಅಂತರದಿಂದ ಸೋಲಿಸಿದರೆ, ಟೀಂ ಇಂಡಿಯಾ ಐಸಿಸಿ ಏಕದಿನ ರ‍್ಯಾಂಕಿಂಗ್‌ನಲ್ಲಿ ನಂಬರ್ ಒನ್ ಆಗುವ ಸುವರ್ಣಾವಕಾಶವನ್ನು ಹೊಂದಿದೆ. ಸದ್ಯ ಏಕದಿನ ಶ್ರೇಯಾಂಕದಲ್ಲಿ ನ್ಯೂಜಿಲೆಂಡ್ ತಂಡ 117 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಟೀಂ ಇಂಡಿಯಾ 110 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಈ ಸರಣಿಯನ್ನು ಟೀಂ ಇಂಡಿಯಾ ಕ್ಲೀನ್ ಸ್ವೀಪ್ ಮಾಡಿದರೆ 114 ಅಂಕಗಳನ್ನು ಪಡೆದು ನ್ಯೂಜಿಲೆಂಡ್ ತಂಡ 111 ಅಂಕಗಳಿಗೆ ಕುಸಿಯಲಿದೆ.


ಇದನ್ನೂ ಓದಿ: IND vs NZ: ಟೀಂ ಇಂಡಿಯಾಗೆ ಹಠಾತ್ ಎಂಟ್ರಿಕೊಟ್ಟ ಈ ಅಪಾಯಕಾರಿ ಬ್ಯಾಟ್ಸ್‌ಮನ್‌! 


ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ತನ್ನ ಕೊನೆಯ ಟೆಸ್ಟ್ ಸರಣಿಯನ್ನು ಆಡಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶವನ್ನು 2-0 ಅಂತರದಿಂದ ಸೋಲಿಸಿತ್ತು. ನಾಯಕ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ಈ ಸರಣಿಯಲ್ಲಿ ಟೀಂ ಇಂಡಿಯಾದ ನಾಯಕತ್ವ ವಹಿಸಿದ್ದರು. ಇದೀಗ ಟೀಂ ಇಂಡಿಯಾ ಮುಂದಿನ ಟೆಸ್ಟ್ ಸರಣಿಯನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಈ ಸರಣಿಯನ್ನು ಟೀಂ ಇಂಡಿಯಾ ಗೆದ್ದರೆ, 2023 ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿಯೂ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಲಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.