Indian Cricket Team: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿದೆ. ಇದಾದ ಬಳಿಕ ತಂಡ ಏಷ್ಯಾಕಪ್ ಆಡಬೇಕು ಮತ್ತು ವರ್ಷಾಂತ್ಯದಲ್ಲಿ ಭಾರತದಲ್ಲಿಯೇ ಏಕದಿನ ವಿಶ್ವಕಪ್ ನಡೆಯಲಿದೆ. ಬಹಳ ದಿನಗಳಿಂದ ಟೀಂ ಇಂಡಿಯಾದಿಂದ ಹೊರಗುಳಿದಿದ್ದ ಭಯಂಕರ ಆಟಗಾರನೊಬ್ಬ ತಂಡಕ್ಕೆ ಮರಳುತ್ತಿದ್ದಾನೆ. ಈ ಆಟಗಾರ ಯಾವಾಗ ಮೈದಾನಕ್ಕೆ ಮರಳುತ್ತಾನೆ ಎಂದು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು. ಇದೀಗ ಶುಭ ಸುದ್ದಿ ಸಿಕ್ಕಂತಾಗಿದೆ.
ಇದನ್ನೂ ಓದಿ: ODI World Cup: ಅಹಮದಾಬಾದ್ ಅಲ್ಲ… ಈ ಮೈದಾನದಲ್ಲಿ ನಡೆಯಲಿದೆ IND vs PAK ಘರ್ಷಣೆ! ಹೊರಬಿತ್ತು ಬಿಗ್ ಅಪ್ಡೇಟ್
ದೀರ್ಘಕಾಲದವರೆಗೆ ಟೀಂ ಇಂಡಿಯಾದಿಂದ ಹೊರಗುಳಿದಿರುವ ತಂಡದ ಭಯಾನಕ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಶೀಘ್ರದಲ್ಲೇ ಮೈದಾನಕ್ಕೆ ಮರಳಲಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಕಾಮೆಂಟ್ ಮಾಡುತ್ತಿರುವ ಭಾರತೀಯ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಅವರು ಈ ಬಗ್ಗೆ ಬಿಗ್ ಅಪ್ಡೇಟ್ ನೀಡಿದ್ದಾರೆ.
ಬುಮ್ರಾ ಮರಳುವಿಕೆ ಕುರಿತು ಮಾತನಾಡಿದ ದಿನೇಶ್ ಕಾರ್ತಿಕ್ ಅವರು, “ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಟೀಂ ಇಂಡಿಯಾಗೆ ಮರಳುವುದನ್ನು ಕಾಣಬಹುದು” ಎಂದು ಹೇಳಿದರು. ಅವರ ಫಿಟ್ನೆಸ್ನಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಶೀಘ್ರದಲ್ಲೇ ಮೈದಾನದಲ್ಲಿ ಆಡುವುದನ್ನು ನೋಡಬಹುದು ಎಂದು ಹೇಳಿದರು..
ಕ್ರಿಕೆಟ್ ನಿಂದ ಬಹಳ ಕಾಲ ದೂರ!
ಜಸ್ಪ್ರೀತ್ ಬುಮ್ರಾ ಅವರು ಸೆಪ್ಟೆಂಬರ್ 2021 ರಿಂದ ಅಂತರಾಷ್ಟ್ರೀಯ ಕ್ರಿಕೆಟ್ ನಿಂದ ದೂರವಿದ್ದಾರೆ. ಬೆನ್ನುನೋವಿನಿಂದ ಬುಮ್ರಾ ಮೈದಾನದಿಂದ ಹೊರಗುಳಿಯಬೇಕಾದ ಪರಿಸ್ಥಿತಿ ಬಂದಿತ್ತು. ಇದಾದ ಬಳಿಕ ಶಸ್ತ್ರಚಿಕಿತ್ಸೆಗೆ ಸಹ ಒಳಗಾಗಬೇಕಾಯಿತು. ಈ ಗಾಯದಿಂದಾಗಿ ಕಳೆದ ವರ್ಷದ ಟಿ20 ವಿಶ್ವಕಪ್ ನಲ್ಲೂ ಅವರು ತಂಡದ ಭಾಗವಾಗಲು ಸಾಧ್ಯವಾಗಲಿಲ್ಲ. ಇತ್ತೀಚೆಗಷ್ಟೇ ಮುಕ್ತಾಯಗೊಂಡ ಐಪಿಎಲ್ ನ 16ನೇ ಸೀಸನ್ ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡಲು ಸಾಧ್ಯವಾಗಲಿಲ್ಲ. ಆದರೆ, ತಂಡವನ್ನು ಬೆಂಬಲಿಸಲು ಅವರು ಕ್ರೀಡಾಂಗಣಕ್ಕೆ ಬಂದಿದ್ದರು.
ಇದನ್ನೂ ಓದಿ: ಧೋನಿಯಂತೇ ವಿಕೆಟ್ ಕೀಪಿಂಗ್… DRS ತೆಗೆದುಕೊಳ್ಳವಲ್ಲೂ ಮಾಹಿಗೆ ಸರಿಸಮಾನ! ಇನ್ಮುಂದೆ ಈ ಆಟಗಾರ ODIಗೆ ಫಿಕ್ಸ್!
ಭಾರತ ತಂಡ ಕೊನೆಯ ಬಾರಿಗೆ 2011ರಲ್ಲಿ ಏಕದಿನ ವಿಶ್ವಕಪ್ ಗೆದ್ದಿತ್ತು. ಆಗ ಮಹೇಂದ್ರ ಸಿಂಗ್ ಧೋನಿ ಟೀಂ ಇಂಡಿಯಾ ನಾಯಕರಾಗಿದ್ದರು. 2011 ರಿಂದ, ಚಾಂಪಿಯನ್ಸ್ ಟ್ರೋಫಿ 2013 ಹೊರತುಪಡಿಸಿ ಯಾವುದೇ ಐಸಿಸಿ ಟ್ರೋಫಿಯನ್ನು ಟೀಮ್ ಇಂಡಿಯಾ ಗೆಲ್ಲಲು ಸಾಧ್ಯವಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಈ ಬಾರಿ ಟೀಂ ಇಂಡಿಯಾಗೆ ತವರಿನಲ್ಲಿ ವಿಶ್ವಕಪ್ ಗೆಲ್ಲುವ ಸುವರ್ಣಾವಕಾಶವಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.