ಮುಂಬೈ:  ಇಲ್ಲಿನ ಬ್ರಾಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಟೈಟಾನ್ಸ್ ತಂಡವು ಆರು ವಿಕೆಟ್ ಗಳ ಗೆಲುವನ್ನು ಸಾಧಿಸಿದೆ.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ರಾಯಲ್ ಚಾಲೆಂಜರ್ಸ್ ತಂಡವು ತಂಡದ ಮೊತ್ತ 11 ರನ್ ಗಳಾಗಿದ್ದಾಗ ದುಫ್ಲೆಸಿಸ್ ವಿಕೆಟ್ ಕಳೆದುಕೊಂಡು ಆಘಾತವನ್ನು ಎದುರಿಸಿತು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Rashid Khan : ಧೋನಿಯಂತೆ ಫಿನಿಶರ್ ಆಗಲು ರಶೀದ್ ಖಾನ್​ಗೆ ಈ ವಿಶೇಷ ತರಬೇತಿ!


ಈ ಹಂತದಲ್ಲಿ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ರಜತ್ ಪತಿದಾರ್ ಅವರ ಭರ್ಜರಿ ಅರ್ಧಶತಕದ ನೆರವಿನಿಂದ ತಂಡಕ್ಕೆ ಉತ್ತಮ ಅಡಿಪಾಯವನ್ನು ಹಾಕಿದರು.ವಿರಾಟ್ ಕೊಹ್ಲಿ ಇದೇ ಮೊದಲ ಬಾರಿಗೆ ಈ ಟೂರ್ನಿಯಲ್ಲಿ ಅರ್ಧಶತಕವನ್ನು ಗಳಿಸುವ ಮೂಲಕ ಭರ್ಜರಿ ಫಾರ್ಮ್ ಗೆ ಮರಳಿದರು.ಅವರು 53 ಎಸೆತಗಳಲ್ಲಿ ಆರು ಬೌಂಡರಿ ಹಾಗೂ ಒಂದು ಸಿಕ್ಸರ್ ಗಳಿಸುವ ಮೂಲಕ 58 ರನ್ ಗಳಿಸಿ ಶಮಿಗೆ ವಿಕೆಟ್ ಒಪ್ಪಿಸಿದರು.ಇನ್ನೊಂದೆಡೆಗೆ ರಜತ್ ಅವರು ಆರಂಭದುದ್ದಕ್ಕೂ ಬಿರುಸಿನ ಪ್ರದರ್ಶನವನ್ನು ನೀಡಿದರು. ಅವರು ಕೇವಲ 32 ಎಸೆತಗಳಲ್ಲಿ ಐದು ಬೌಂಡರಿ ಹಾಗೂ ಎರಡು ಸಿಕ್ಸರ್ ಗಳ ನೆರವಿನಿಂದ 52  ರನ್ ಗಳಿಸಿದರು. ತದನಂತರ ಬಂದಂತಹ ಮ್ಯಾಕ್ಸ್ ವೆಲ್ ಅವರು 18 ಎಸೆತಗಳಲ್ಲಿ 33 ರನ್ ಗಳಿಸಿದರು.ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 170 ರನ್ ಗಳಿಸಿತು.Happy Birthday Rohit Sharma: ದ್ವಿಶತಕ ವೀರ ರೋಹಿತ್‌ ಶರ್ಮಾಗೆ ಹುಟ್ಟುಹಬ್ಬದ ಸಂಭ್ರಮ


171 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 19.3 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 174 ರನ್ ಗಳಿಸುವ ಮೂಲಕ ಗೆಲುವಿನ ದಡ ಸೇರಿತು. ಗುಜರಾತ್ ಟೈಟಾನ್ಸ್ ತಂಡದ ಪರವಾಗಿ ಡೇವಿಡ್ ಮಿಲ್ಲರ್ 24 ಎಸೆತಗಳಲ್ಲಿ 39 ಹಾಗೂ ರಾಹುಲ್ ತೇವಾಟಿಯಾ 25 ಎಸೆತಗಳಲ್ಲಿ 43 ರನ್ ಗಳಿಸುವ ಮೂಲಕ ತಂಡದ ಗೆಲುವಿಗೆ ಕಾರಣಕರ್ತರಾದರು.


ಇದನ್ನೂ ಓದಿ : PBKS vs LSG, IPL 2022: ಇಂದು ಬಲಿಷ್ಠ ಲಕ್ನೋಗೆ ಪಂಜಾಬ್ ಸವಾಲು


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.