CSK ವಿರುದ್ಧ ಅಬ್ಬರದ ಶತಕದಾಟವಾಡಿದ್ರೂ ಶುಭ್ಮನ್ ಗಿಲ್ ವಿರುದ್ಧ ಕಠಿಣ ಕ್ರಮ ಕೈಗೊಂಡ BCCI! ಮಾಡಿದ ತಪ್ಪಾದ್ರೂ ಏನು?
Shubman Gill Fined: ಶುಭಮನ್ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ 24 ಲಕ್ಷ ರೂ. ದಂಡ ವಿಧಿಸಲಾಗಿದ್ದು, ಇದು ಐಪಿಎಲ್ 2024 ರ ಋತುವಿನಲ್ಲಿ ಶುಭಮನ್ ಅವರ ಎರಡನೇ ತಪ್ಪಾಗಿದೆ.
Shubman Gill Fined: ಶುಕ್ರವಾರ ನಡೆದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್’ಗಳಿಂದ ಜಯ ಸಾಧಿಸಿದೆ. ಗೆಲುವಿನ ಸಂಭ್ರಮದ ನಡುವೆಯೇ ಗುಜರಾತ್ ಟೈಟಾನ್ಸ್ ನಾಯಕ ಶುಭಮನ್ ಗಿಲ್’ಗೆ ಬಿಸಿಸಿಐ 24 ಲಕ್ಷ ರೂಪಾಯಿ ದಂಡ ವಿಧಿಸಿ ಶಾಕ್ ನೀಡಿದೆ.
ಇದನ್ನೂ ಓದಿ: KL Rahul: ಒಂದು ನಿಮಿಷದ ಪಂದ್ಯ ನೋಡಿ ಟೀಕಿಸುತ್ತಾರೆ - ಕೆಎಲ್ ರಾಹುಲ್ ಬೆಂಬಲಕ್ಕೆ ನಿಂತ ಗೌತಮ್ ಗಂಭೀರ್
ಶುಭಮನ್ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ 24 ಲಕ್ಷ ರೂ. ದಂಡ ವಿಧಿಸಲಾಗಿದ್ದು, ಇದು ಐಪಿಎಲ್ 2024 ರ ಋತುವಿನಲ್ಲಿ ಶುಭಮನ್ ಅವರ ಎರಡನೇ ತಪ್ಪಾಗಿದೆ.
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್’ನಲ್ಲಿ ತಪ್ಪಿತಸ್ಥರೆಂದು ಸಾಬೀತಾದ ಹಿನ್ನೆಲೆಯಲ್ಲಿ ಶುಭಮನ್ ಗಿಲ್ ಅವರಿಗೆ ಬಿಸಿಸಿಐ ಈ ಶಿಕ್ಷೆ ನೀಡಿದೆ. ಗುಜರಾತ್ ಟೈಟಾನ್ಸ್ ತನ್ನ 20 ಓವರ್’ಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಲು ವಿಫಲವಾಗಿತ್ತು. ಐಪಿಎಲ್ 2024 ರ ಋತುವಿನಲ್ಲಿ ಮತ್ತೊಮ್ಮೆ ಸ್ಲೋ ಓವರ್ ರೇಟ್’ನಲ್ಲಿ ಶುಬ್ಮಾನ್ ಗಿಲ್ ತಪ್ಪಿತಸ್ಥರೆಂದು ಕಂಡುಬಂದರೆ, ನಂತರ ಅವರನ್ನು ಒಂದು ಐಪಿಎಲ್ ಪಂದ್ಯಕ್ಕೆ ನಿಷೇಧಿಸಬಹುದು ಮತ್ತು ರೂ 30 ಲಕ್ಷ ದಂಡ ವಿಧಿಸಬಹುದು.
ಐಪಿಎಲ್ ಪತ್ರಿಕಾ ಪ್ರಕಟಣೆಯ ಪ್ರಕಾರ, ಮೇ 10 ರಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ಗಾಗಿ ಗುಜರಾತ್ ಟೈಟಾನ್ಸ್ ನಾಯಕ ಶುಭಮನ್ ಗಿಲ್ ಅವರಿಗೆ 24 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಇನ್ನೊಂದೆಡೆ ಟೈಟಾನ್ಸ್’ನ ಆಡುವ ಹನ್ನೊಂದರ ಇಂಪಾಕ್ಟ್ ಪ್ಲೇಯರ್ ಮತ್ತು ಇತರ ಆಟಗಾರರಿಗೆ ತಲಾ ರೂ 6 ಲಕ್ಷ ಅಥವಾ ಅವರ ಪಂದ್ಯ ಶುಲ್ಕದ 25% ದಂಡ ವಿಧಿಸಲಾಗಿದೆ.
ನಿಯಮಗಳ ಪ್ರಕಾರ, ಐಪಿಎಲ್ ಸೀಸನ್’ನಲ್ಲಿ ಮೂರನೇ ಬಾರಿಗೆ ಸ್ಲೋ ಓವರ್ ರೇಟ್’ಗೆ ನಾಯಕ ತಪ್ಪಿತಸ್ಥರೆಂದು ಕಂಡುಬಂದರೆ, 30 ಲಕ್ಷ ರೂಪಾಯಿ ದಂಡದ ಹೊರತಾಗಿ, ನಾಯಕನಿಗೆ ಒಂದು ಐಪಿಎಲ್ ಪಂದ್ಯಕ್ಕೆ ನಿಷೇಧ ಹೇರಲಾಗುತ್ತದೆ. ಜೊತೆಗೆ, ಇಂಪಾಕ್ಟ್ ಪ್ಲೇಯರ್ ಸೇರಿದಂತೆ ಆಡುವ ಹನ್ನೊಂದರ ಇತರ ಆಟಗಾರರಿಗೆ ತಲಾ 12 ಲಕ್ಷ ರೂ. ಅಥವಾ ಪಂದ್ಯ ಶುಲ್ಕದ 50% ದಂಡವನ್ನು ವಿಧಿಸಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ