ಬೆಂಗಳೂರು: ಐಪಿಎಲ್‌ 2022ರ ಆವೃತ್ತಿಯ 29ನೇ ಆಟದಲ್ಲಿ ಇಂದು ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ಗುಜರಾತ್‌ ಟೈಟಾನ್ಸ್‌ ಮುಖಾಮುಖಿಯಾಗಲಿದೆ. ಈಗಾಗಲೇ ಸೋಲಿನ ಸುಳಿಯಲ್ಲಿರುವ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಕ್ಕೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿರುವ ಗುಜರಾತ್‌ ಟೈಟಾನ್ಸ್‌ ತಂಡ ಸವಾಲು ನೀಡಲಿದೆ. 


COMMERCIAL BREAK
SCROLL TO CONTINUE READING

ಇದನ್ನು ಓದಿ: IPL 2022: ಅಬ್ಬರಿಸುತ್ತಿರುವ ಆರ್‌ಸಿಬಿಗೆ ಅಂಕಪಟ್ಟಿಯಲ್ಲಿದೆ ಈ ಸ್ಥಾನ...


ಹಾರ್ದಿಕ್‌ ಪಾಂಡ್ಯ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಗುಜರಾತ್‌ ಟೈಟಾನ್ಸ್‌ ತಂಡ 5 ಪಂದ್ಯಗಳನ್ನಾಡಿದ್ದು, ನಾಲ್ಕರಲ್ಲಿ ಜಯ ಗಳಿಸಿ 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಕಳೆದ ಬಾರಿ ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ವಿರುದ್ಧ ಸೋಲು ಕಂಡಿದ್ದು ಹೊರತಾಗಿ, ಗುಜರಾತ್‌ ಪಡೆ ಈ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನವನ್ನು ನೀಡುತ್ತಿದೆ. 


ಇನ್ನೊಂದೆಡೆ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿರುವ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ರವೀಂದ್ರ ಜಡೇಜ ನೇತೃತ್ವದಲ್ಲಿ ಮುನ್ನಡೆಯುತ್ತಿದೆ. ಐಪಿಎಲ್‌ನ  ಈ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ತೋರುತ್ತಿರುವ ತಂಡ ಆಡಿರುವ 5 ಪಂದ್ಯಗಳಲ್ಲಿ 4ರಲ್ಲಿ ಸೋತು 2 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನ ಪಡೆದುಕೊಂಡಿದೆ. ಇಂದು ನಡೆಯಲಿರುವ ಪಂದ್ಯದಲ್ಲಿ ಯಾವ ತಂಡಕ್ಕೆ ಜಯ ಲಭಿಸಲಿದೆ ಎಂಬುದನ್ನು ಕಾದುನೋಡಬೇಕಿದೆ. 


ಇದನ್ನು ಓದಿ: DC vs RCB: ದಿನೇಶ್ ಕಾರ್ತಿಕ್ ಭರ್ಜರಿ ಪ್ರದರ್ಶನದ ಹಿಂದಿನ ಗುಟ್ಟೇನು ಗೊತ್ತೇ?


‘ರಾಕೆಟ್ ಥ್ರೋ’ ಮೂಲಕ ಸ್ಟಂಪ್ ಮುರಿದ ಹಾರ್ದಿಕ್:
ಈ ಹಿಂದೆ ರಾಜಸ್ಥಾನ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಗುಜರಾತ್‌ ಟೈಟಾನ್ಸ್‌ ನಾಯಕ ಹಾರ್ದಿಕ್‌ ಪಾಂಡ್ಯ ರಾಕೆಟ್ ಥ್ರೋ ಎಸೆಯುವ ಮೂಲಕ ಸಂಜು ಸ್ಯಾಮ್ಸನ್ ಅವರನ್ನು ರನ್ ಔಟ್ ಮಾಡಿದ್ದರು. ಮಾತ್ರವಲ್ಲದೆ ಸ್ಟಂಪ್ ಅನ್ನು ಮುರಿದಿದ್ದರು. ಈ ದೃಶ್ಯವನ್ನು ಕಂಡು ಕ್ರೀಡಾಂಗಣದಲ್ಲಿದ್ದ ಪ್ರೇಕ್ಷಕರೆಲ್ಲರೂ ಪುಳಕಿತರಾದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.