Fastest 50 in T20 Internationals : ಏಷ್ಯನ್ ಗೇಮ್ಸ್ 2023ರ ಪುರುಷರ ಕ್ರಿಕೆಟ್‌ನ ಮೊದಲ ಪಂದ್ಯದಲ್ಲಿ ನೇಪಾಳದ ಆಟಗಾರನೊಬ್ಬ  ಹೊಸ ದಾಖಲೆ ಬರೆದಿದ್ದಾರೆ. ಟಿ20ಯಲ್ಲಿ ಅತ್ಯಂತ ವೇಗದ ಅರ್ಧಶತಕ ಪೂರೈಸುವ ಮೂಲಕ ಯುವರಾಜ್ ಸಿಂಗ್ ವಿಶ್ವ ದಾಖಲೆಯನ್ನು ಮುರಿದಿದ್ದಾರೆ. ಭಾರತದ ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ 12 ಎಸೆತಗಳಲ್ಲಿ ಅರ್ಧ ಶತಕ ಸಿಡಿಸಿ ಇತಿಹಾಸ ನಿರ್ಮಿಸಿದ್ದರು. ಆದರೆ ಈ ಆಟಗಾರ ಕೇವಲ 9 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಯುವರಾಜ್ ಸಿಂಗ್ ವಿಶ್ವ ದಾಖಲೆ ಮುರಿದ ದೀಪೇಂದ್ರ ಸಿಂಗ್ ಐರಿ : 
ಭಾರತದ ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ 2007ರ ಟಿ20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧ 12 ಎಸೆತಗಳಲ್ಲಿ ಅರ್ಧಶತಕ  ಸಿಡಿಸಿದ್ದರು. ಅದೇ ಪಂದ್ಯದಲ್ಲಿ ಯುವರಾಜ್ ಸ್ಟುವರ್ಟ್ ಬ್ರಾಡ್ ಅವರ ಒಂದು ಓವರ್ ನಲ್ಲಿ 6 ಸಿಕ್ಸರ್ ಸಿಡಿಸಿದ್ದರು. ಇದೀಗ ನೇಪಾಳದ ದೀಪೇಂದ್ರ ಸಿಂಗ್ ಐರಿ ಯುವಿಯ ಈ ದಾಖಲೆ ಮುರಿದಿದ್ದಾರೆ. ದೀಪೇಂದ್ರ ಸಿಂಗ್ ಕೇವಲ 9 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದಾರೆ.  ಪಂದ್ಯದಲ್ಲಿ ದೀಪೇಂದ್ರ ಸಿಂಗ್ 10 ಎಸೆತಗಳಲ್ಲಿ 8 ಸಿಕ್ಸರ್ ಬಾರಿಸುವ ಮೂಲಕ ಅಜೇಯ 52 ರನ್ ಗಳಿಸಿದರು. ಇನ್ನು ದೀಪೇಂದ್ರ ತಮ್ಮ ಮೊದಲ 6 ಎಸೆತಗಳಲ್ಲಿ 6 ಸಿಕ್ಸರ್ ಬಾರಿಸಿದ್ದಾರೆ. 


ಇದನ್ನೂ ಓದಿ : ರೋಹಿತ್ ಪಡೆಯಲ್ಲಿ ಯುವಿ ಗಿಂತಲೂ ಸ್ಪೋಟಕ ಬ್ಯಾಟ್ಸ್ ಮ್ಯಾನ್ ! ಭಾರತಕ್ಕೆ ಸುಗಮವಾಗಲಿದೆ ವಿಶ್ವಕಪ್ ಗೆಲ್ಲುವ ಹಾದಿ


ಈ ಆಟಗಾರ ಅತ್ಯಂತ ವೇಗದ ಶತಕ ವೀರ : 
ನೇಪಾಳದ ಬ್ಯಾಟ್ಸ್‌ಮನ್ ಕುಶಾಲ್ ಮಲ್ಲಾ ಕೂಡ ಟಿ20 ಇತಿಹಾಸದಲ್ಲಿ ಅತ್ಯಂತ ವೇಗದ ಶತಕ ಬಾರಿಸ್ವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ 35 ಎಸೆತಗಳಲ್ಲಿ ಶತಕ ಸಿಡಿಸಿದ ಭಾರತದ ನಾಯಕ ರೋಹಿತ್ ಶರ್ಮಾ ಮತ್ತು ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್ ಡೇವಿಡ್ ಮಿಲ್ಲರ್ ಅವರ ದಾಖಲೆಯನ್ನು ಕುಶಾಲ್ ಮಲ್ಲಾ ಮುರಿದಿದ್ದಾರೆ. ಕುಶಾಲ್ ಮಲ್ಲಾ ಮಂಗೋಲಿಯಾ ತಂಡದ ವಿರುದ್ಧ ಕೇವಲ 34 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ. ಮಲ್ಲ 50 ಎಸೆತಗಳಲ್ಲಿ 8 ಬೌಂಡರಿ ಹಾಗೂ 12 ಸಿಕ್ಸರ್‌ಗಳ ನೆರವಿನಿಂದ 137 ರನ್ ಗಳಿಸಿದರು.


ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಮೊದಲ ಬಾರಿಗೆ 300 ರನ್  : 
ಈ ಪಂದ್ಯದಲ್ಲಿ ಮಂಗೋಲಿಯಾ ತಂಡ ಟಾಸ್ ಗೆದ್ದು ಬೌಲಿಂಗ್ ಮಾಡಲು ನಿರ್ಧರಿಸಿತು. ಮಂಗೋಲಿಯಾ ವಿರುದ್ಧ ಮೊದಲು ಬ್ಯಾಟ್ ಮಾಡಿದ ನೇಪಾಳ ತಂಡ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 314 ರನ್ ಗಳಿಸಿತು. ಇದು ಅಂತರಾಷ್ಟ್ರೀಯ ಟಿ20 ಇತಿಹಾಸದಲ್ಲಿ ಅತೀ ದೊಡ್ಡ ಸ್ಕೋರ್ ಆಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಟಿ20ಯಲ್ಲಿ 300 ರನ್‌ಗಳ ಗಡಿ ದಾಟಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.


ಇದನ್ನೂ ಓದಿ : IND VS AUS ಸರಣಿಯ ನಡುವೆ ಶಾಕಿಂಗ್ ನ್ಯೂಸ್, ಈ ಆಟಗಾರನಿಗೆ ಎರಡು ಪಂದ್ಯಗಳಿಗೆ ನಿಷೇಧ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.