India vs West Indies: ಸುದೀರ್ಘ ವಿರಾಮದ ನಂತರ ಟೀಂ ಇಂಡಿಯಾದ ಮೊದಲ ಬ್ಯಾಚ್ ಇದೀಗ ವೆಸ್ಟ್ ಇಂಡೀಸ್ ತಲುಪಿದೆ. ಈ ಪ್ರವಾಸವು 2 ಪಂದ್ಯಗಳ ಟೆಸ್ಟ್ ಸರಣಿಯೊಂದಿಗೆ ಆರಂಭವಾಗಲಿದೆ. ಈ ಟೆಸ್ಟ್ ಸರಣಿಯೊಂದಿಗೆ, ಭಾರತ ತಂಡವು 2023-2025 ICC ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅನ್ನು ಪ್ರಾರಂಭಿಸುತ್ತದೆ. ಈ ಸರಣಿಗಾಗಿ ಭಾರತ ಟೆಸ್ಟ್ ತಂಡದಲ್ಲಿ ಕೆಲವು ಯುವ ಆಟಗಾರರನ್ನು ಕೂಡ ಸೇರಿಸಿಕೊಳ್ಳಲಾಗಿದೆ. ಆದರೆ ವಿಂಡೀಸ್ ವಿರುದ್ಧ 96ರ ಸರಾಸರಿಯಲ್ಲಿ ಸ್ಕೋರ್ ಮಾಡಿದ ಈ ಆಟಗಾರ ಮಾತ್ರ ಸ್ಥಾನ ಪಡೆದಿಲ್ಲ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Side Effects Of Raw Egg: ಹಸಿ ಮೊಟ್ಟೆ ಸೇವನೆಯಿಂದ ಆರೋಗ್ಯಕ್ಕೆ ಒಳ್ಳೆಯದೇ?


ಟೀಂ ಇಂಡಿಯಾ ಕೊನೆಯ ಬಾರಿಗೆ 2019 ರಲ್ಲಿ ವೆಸ್ಟ್ ಇಂಡೀಸ್‌ ಗೆ ಟೆಸ್ಟ್ ಸರಣಿಗಾಗಿ ಹೋಗಿತ್ತು. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಈ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ವಶಪಡಿಸಿಕೊಂಡಿತ್ತು. 29ರ ಹರೆಯದ ಹನುಮ ವಿಹಾರಿ ತಂಡದ ಗೆಲುವಿನ ದೊಡ್ಡ ಹೀರೋ ಎನಿಸಿಕೊಂಡರು. ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಹನುಮ ವಿಹಾರಿ 2 ಪಂದ್ಯಗಳ 4 ಇನ್ನಿಂಗ್ಸ್‌ ಗಳಲ್ಲಿ 96.33 ಸರಾಸರಿಯಲ್ಲಿ 289 ರನ್ ಗಳಿಸಿದ್ದರು. ಈ ವೇಳೆ ಒಂದು ಶತಕ ಮತ್ತು ಎರಡು ಅರ್ಧ ಶತಕಗಳು ಕೂಡ ಹೊರಹೊಮ್ಮಿದವು. ಆದರೆ ಈ ಬಾರಿ ಹನುಮ ವಿಹಾರಿ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.


ಹನುಮ ವಿಹಾರಿ ಕಳೆದ ವರ್ಷ ಜುಲೈನಲ್ಲಿ ಇಂಗ್ಲೆಂಡ್ ವಿರುದ್ಧ ಬರ್ಮಿಂಗ್ಹ್ಯಾಮ್‌ ನಲ್ಲಿ ಭಾರತಕ್ಕಾಗಿ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದರು. ಹನುಮ ವಿಹಾರಿ ಈ ಪಂದ್ಯದಲ್ಲಿ ಸೋಲು ಕಂಡಿದ್ದರು. ಇಂಗ್ಲೆಂಡ್ ವಿರುದ್ಧ ಬರ್ಮಿಂಗ್‌ ಹ್ಯಾಮ್‌ ನಲ್ಲಿ ಹನುಮ ವಿಹಾರಿ ಮೊದಲ ಇನ್ನಿಂಗ್ಸ್‌ ನಲ್ಲಿ ಕೇವಲ 20 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 11 ರನ್ ಗಳಿಸಲು ಶಕ್ತರಾದರು. ಇದೇ ಕಾರಣದಿಂದ ಈ ಬಾರಿ ವಿಂಡೀಸ್ ಪ್ರವಾಸದಲ್ಲಿ ಸ್ಥಾನ ಪಡೆದಿಲ್ಲ ಎಂದು ಹೇಳಲಾಗುತ್ತಿದೆ. ವಿಹಾರಿ ಇದುವರೆಗೆ ಟೀಂ ಇಂಡಿಯಾ ಪರ 16 ಟೆಸ್ಟ್ ಪಂದ್ಯಗಳಲ್ಲಿ 33.56 ಸರಾಸರಿಯಲ್ಲಿ 839 ರನ್ ಗಳಿಸಿದ್ದಾರೆ.


ಹನುಮ ವಿಹಾರಿ ಪ್ರಸ್ತುತ ದುಲೀಪ್ ಟ್ರೋಫಿಯಲ್ಲಿ ದಕ್ಷಿಣ ವಲಯದ ನಾಯಕರಾಗಿದ್ದಾರೆ. ಟೀಂ ಇಂಡಿಯಾಗೆ ಮರಳುವ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಈ ಋತುವಿನಲ್ಲಿ ಹೊಸ ತಂಡದೊಂದಿಗೆ ರಣಜಿ ಟ್ರೋಫಿಯನ್ನು ಆಡಲಿದ್ದಾರೆ. ಹನುಮ ವಿಹಾರಿ ಇದುವರೆಗೆ ಆಂಧ್ರಪ್ರದೇಶ ತಂಡದಿಂದ ದೇಶಿ ಕ್ರಿಕೆಟ್ ಆಡುತ್ತಿದ್ದರು. ಆದರೆ ಇದೀಹ ದೇಶೀಯ ಋತುವಿನಲ್ಲಿ ಮಧ್ಯಪ್ರದೇಶ ತಂಡದೊಂದಿಗೆ ಆಡಲು ಸಿದ್ಧರಾಗಿದ್ದಾರೆ.


ಇದನ್ನೂ ಓದಿ: Love Feeling: ಪ್ರೀತಿಯಲ್ಲಿ ಕಚಗುಳಿ ಇಟ್ಟ ಅನುಭವ ಏಕೆ ಆಗುತ್ತದೆ? 'ಕುಚ್-ಕುಚ್ ಹೋತಾ ಹೈ' ಹಿಂದಿನ ವಿಜ್ಞಾನ ನಿಮಗೆ ಗೊತ್ತಾ?


ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತದ ಟೆಸ್ಟ್ ತಂಡ:


ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ರಿತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್ ಮತ್ತು ನವದೀಪ್ ಸೈನಿ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.