IND vs WI : ದಾಖಲೆ ಬರೆದ ಹಾರ್ದಿಕ್ ಪಾಂಡ್ಯ : ಟಿ20 ನಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ!

ಮಂಗಳವಾರ (ಆಗಸ್ಟ್ 2) ಸೇಂಟ್ ಕಿಟ್ಸ್‌ನ ವಾರ್ನರ್ ಪಾರ್ಕ್‌ನಲ್ಲಿ ವಿಂಡೀಸ್ ವಿರುದ್ಧ ನಡೆದ ಮೂರನೇ ಟಿ20 ಪಂದ್ಯದಲ್ಲೂ ಹಾರ್ದಿಕ್ ಪಾಂಡ್ಯ ದೊಡ್ಡ ದಾಖಲೆಯೊಂದನ್ನು ಬರೆದಿದ್ದಾರೆ. ಈ ಪಂದ್ಯದಲ್ಲಿ ಭಾರತದ ಯಾವೊಬ್ಬ ಆಟಗಾರನೂ ಮಾಡದ ಸಾಧನೆಯನ್ನು ಹಾರ್ದಿಕ್ ಪಾಂಡ್ಯ ಮಾಡಿದ್ದಾರೆ.

Written by - Channabasava A Kashinakunti | Last Updated : Aug 3, 2022, 04:28 PM IST
  • ಇತಿಹಾಸ ನಿರ್ಮಿಸಿದ ಹಾರ್ದಿಕ್ ಪಾಂಡ್ಯ
  • ಟಿ20ಯಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್
  • ಪಾಂಡ್ಯ ಅಂತರಾಷ್ಟ್ರೀಯ ಕ್ರಿಕೆಟ್
IND vs WI : ದಾಖಲೆ ಬರೆದ ಹಾರ್ದಿಕ್ ಪಾಂಡ್ಯ : ಟಿ20 ನಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ! title=

Ind vs WI 3rd T20, Hardik Pandya : ಟೀಂ ಇಂಡಿಯಾದ ಸ್ಫೋಟಕ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಸದ್ಯಕ್ಕೆ ಉತ್ತಮ ಫಾರ್ಮ್‌ನಲ್ಲಿ ಪ್ರದರ್ಶನ ನೀಡುತ್ತಿದ್ದಾರೆ. ಐಪಿಎಲ್ 2022 ರಿಂದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ದಾಖಲೆ ಮುರಿಯುವ ಪ್ರದರ್ಶನ ಮುಂದುವರೆದಿದೆ. ಮಂಗಳವಾರ (ಆಗಸ್ಟ್ 2) ಸೇಂಟ್ ಕಿಟ್ಸ್‌ನ ವಾರ್ನರ್ ಪಾರ್ಕ್‌ನಲ್ಲಿ ವಿಂಡೀಸ್ ವಿರುದ್ಧ ನಡೆದ ಮೂರನೇ ಟಿ20 ಪಂದ್ಯದಲ್ಲೂ ಹಾರ್ದಿಕ್ ಪಾಂಡ್ಯ ದೊಡ್ಡ ದಾಖಲೆಯೊಂದನ್ನು ಬರೆದಿದ್ದಾರೆ. ಈ ಪಂದ್ಯದಲ್ಲಿ ಭಾರತದ ಯಾವೊಬ್ಬ ಆಟಗಾರನೂ ಮಾಡದ ಸಾಧನೆಯನ್ನು ಹಾರ್ದಿಕ್ ಪಾಂಡ್ಯ ಮಾಡಿದ್ದಾರೆ.

ಇತಿಹಾಸ ನಿರ್ಮಿಸಿದ ಹಾರ್ದಿಕ್ ಪಾಂಡ್ಯ 

ವೆಸ್ಟ್ ಇಂಡೀಸ್ ವಿರುದ್ಧ ನಡೆದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ 4 ಓವರ್ ಬೌಲಿಂಗ್ ಮಾಡಿ 4.75ರ ಎಕಾನಾಮಿಯಲ್ಲಿ ಕೇವಲ 19 ರನ್ ನೀಡಿ 1 ವಿಕೆಟ್ ಪಡೆದರು. ಹಾರ್ದಿಕ್ ಪಾಂಡ್ಯ ಅವರು ಈ ವಿಕೆಟ್ ಪಡೆದ ತಕ್ಷಣ ಟಿ 20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಮ್ಮ 50 ವಿಕೆಟ್‌ಗಳನ್ನು ಪೂರೈಸಿದರು ಮತ್ತು ಅವರ ಹೆಸರಿನಲ್ಲಿ ಅತ್ಯುತ್ತಮ ದಾಖಲೆಯನ್ನು ಸಹ ಮಾಡಿದರು. ಹಾರ್ದಿಕ್ ಪಾಂಡ್ಯ ಟಿ20 ಕ್ರಿಕೆಟ್‌ನಲ್ಲಿ 500ಕ್ಕೂ ಹೆಚ್ಚು ರನ್ ಮತ್ತು 50 ವಿಕೆಟ್ ಗಳಿಸಿದ ಭಾರತದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ವಿಶೇಷ ಸಾಧನೆ ಮಾಡಿದ ವಿಶ್ವದ 9ನೇ ಆಟಗಾರನಾಗಿ ಹಾರ್ದಿಕ್ ಪಾಂಡ್ಯ ಹೊರಹೊಮ್ಮಿದ್ದಾರೆ.

ಇದನ್ನೂ ಓದಿ : ICC T20 Ranking : ಐಸಿಸಿ ಟಿ20 ರ‍್ಯಾಕಿಂಗ್ ನಲ್ಲಿ ಭಾರತದ ಭರ್ಜರಿ ಬ್ಯಾಟ್ಸ್‌ಮನ್ ಗೆ ಸ್ಥಾನ!

ಟಿ20ಯಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್

ಹಾರ್ದಿಕ್ ಪಾಂಡ್ಯ ಟ್ವೆಂಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತಕ್ಕಾಗಿ 50 ವಿಕೆಟ್‌ಗಳನ್ನು ಪೂರೈಸಿದ 6 ನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು ಯುಜುವೇಂದ್ರ ಚಹಾಲ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಆರ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಈ ಸಾಧನೆ ಮಾಡಿದ್ದಾರೆ. ಮತ್ತೊಂದೆಡೆ, ನಾವು ಭಾರತಕ್ಕಾಗಿ ಟಿ 20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಬಗ್ಗೆ ಮಾತನಾಡಿದರೆ, ಅವರು ಯುಜ್ವೇಂದ್ರ ಚಹಾಲ್. ಭಾರತದ ಪರ 60 ಟಿ20 ಪಂದ್ಯಗಳನ್ನಾಡಿರುವ ಯುಜುವೇಂದ್ರ ಚಹಾಲ್ 79 ವಿಕೆಟ್ ಪಡೆದಿದ್ದಾರೆ.

ಪಾಂಡ್ಯ ಅಂತರಾಷ್ಟ್ರೀಯ ಕ್ರಿಕೆಟ್

ಹಾರ್ದಿಕ್ ಪಾಂಡ್ಯ ಟಿ20 ವಿಶ್ವಕಪ್ 2021 ರಿಂದ ಟೀಂ ಇಂಡಿಯಾದಿಂದ ಹೊರಗುಳಿಯುತ್ತಿದ್ದರು, ಆದರೆ ಅವರು ಮತ್ತೊಮ್ಮೆ ಟೀಂ ಇಂಡಿಯಾದ ಪ್ರಮುಖ ಭಾಗವಾಗಿದ್ದಾರೆ. ಹಾರ್ದಿಕ್ ಪಾಂಡ್ಯ ಭಾರತ ಪರ 66 ಟಿ20 ಪಂದ್ಯಗಳಲ್ಲಿ 23.03 ಸರಾಸರಿಯಲ್ಲಿ 806 ರನ್ ಗಳಿಸಿದ್ದು, 50 ವಿಕೆಟ್ ಪಡೆದಿದ್ದಾರೆ. ಹಾರ್ದಿಕ್ ಪಾಂಡ್ಯ 66 ಏಕದಿನ ಪಂದ್ಯಗಳನ್ನು ಆಡಿದ್ದು, ಇದರಲ್ಲಿ 1386 ರನ್ ಮತ್ತು 63 ವಿಕೆಟ್ ಪಡೆದಿದ್ದಾರೆ. ಪಾಂಡ್ಯ ಅವರು 11 ಟೆಸ್ಟ್‌ಗಳಲ್ಲಿ 532 ರನ್ ಮತ್ತು 17 ವಿಕೆಟ್‌ಗಳನ್ನು ಪಡೆದಿದ್ದಾರೆ.

ಇದನ್ನೂ ಓದಿ : IND vs WI 2022: ತನ್ನ ಆತ್ಮೀಯ ಗೆಳೆಯನಿಗೆ ದೊಡ್ಡ ವಿಲನ್ ಆದ ಸೂರ್ಯಕುಮಾರ್..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News