Hardik Pandya: ಅಂತಿಮವಾಗಿ, ರೋಹಿತ್ ಶರ್ಮಾ ಟಿ 20 ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಇದರೊಂದಿಗೆ ಭಾರತ ತಂಡದ ಮುಂದೆ ಸವಾಲು ಕೂಡ ಉದ್ಭವಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Virat Kohli Retirement: ಟೀಮ್‌ ಇಂಡಿಯಾದಲ್ಲಿ ವಿರಾಟ್‌ ಕೊಹ್ಲಿ ಸ್ಥಾನಕ್ಕೆ ಈ ಆಟಗಾರ ಎಂಟ್ರಿ !?


ರೋಹಿತ್ ಶರ್ಮಾ ವಿಶ್ವದ ಅತ್ಯುತ್ತಮ ನಾಯಕರಲ್ಲಿ ಒಬ್ಬರು ಎಂಬುದರಲ್ಲಿ ಸಂದೇಹವಿಲ್ಲ. ಇದೀಗ ಅವರು ಟಿ20 ಮಾದರಿಯಿಂದ ನಿವೃತ್ತಿ ಪಡೆದಿದ್ದು, ಹಾರ್ದಿಕ್ ಪಾಂಡ್ಯ ಭಾರತ ತಂಡದ ಮುಂದಿನ ನಾಯಕರಾಗುವ ಎಲ್ಲಾ ಸಾಧ್ಯತೆಗಳಿವೆ.


ಹಾರ್ದಿಕ್ ಪಾಂಡ್ಯ 2022ರಲ್ಲಿ ಐಪಿಎಲ್‌’ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಚಾಂಪಿಯನ್ ಆಗಿ ಮಾಡಿದ್ದರು. ಇದಲ್ಲದೆ, 2023 ರಲ್ಲಿ ಗುಜರಾತ್ ಫೈನಲ್’ಗೆ ಪ್ರವೇಶಿಸಿ ಉತ್ತಮ ಪ್ರದರ್ಶನ ನೀಡಿತ್ತು. ಆದರೆ, ಪ್ರಶಸ್ತಿ ಗೆಲ್ಲುವ ಅವಕಾಶ ಕಳೆದುಕೊಂಡರು.


T20 ವಿಶ್ವಕಪ್ 2024 ರಲ್ಲಿ ಪಾಂಡ್ಯ ಪ್ರದರ್ಶನ


2024ರ ಟಿ20 ವಿಶ್ವಕಪ್‌’ನಲ್ಲಿ ಹಾರ್ದಿಕ್ ಪಾಂಡ್ಯ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಟೂರ್ನಿಯಲ್ಲಿ ತಮ್ಮ ತಂಡದ ಪರ ಒಟ್ಟು 8 ಪಂದ್ಯಗಳನ್ನು ಆಡಿದ್ದಾರೆ. ಈ ಮಧ್ಯೆ 6 ಇನ್ನಿಂಗ್ಸ್‌’ಗಳಲ್ಲಿ 144 ರನ್ ಗಳಿಸುವಲ್ಲಿ ಯಶಸ್ವಿಯಾದರು. ವಿಶೇಷವೆಂದರೆ ಬ್ಯಾಟಿಂಗ್ ಮಾಡುವಾಗ ಟೂರ್ನಿಯಲ್ಲಿ ಮೂರು ಬಾರಿ ಅಜೇಯರಾಗಿ ಉಳಿದಿದ್ದರು.


ಇದನ್ನೂ ಓದಿ: T20 World Cup 2024: ಟೀಂ ಇಂಡಿಯಾ ಆಟಗಾರರಿಗೆ ಪ್ರಧಾನಿ ಮೋದಿ ಶ್ಲಾಘನೆ..!


ಪಾಂಡ್ಯ T20 ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನ


ಹಾರ್ದಿಕ್ ಪಾಂಡ್ಯ ಭಾರತ ತಂಡದ ಪರ ಇದುವರೆಗೆ ಒಟ್ಟು 100 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ತಮ್ಮ ಬ್ಯಾಟಿಂಗ್‌ ಮೂಲಕ 77 ಇನ್ನಿಂಗ್ಸ್‌ಗಳಲ್ಲಿ 26.64 ಸರಾಸರಿಯಲ್ಲಿ 1492 ರನ್ ಗಳಿಸಿದ್ದಾರೆ. ಬೌಲಿಂಗ್’ನಲ್ಲಿ 89 ಇನ್ನಿಂಗ್ಸ್‌ಗಳಲ್ಲಿ 25.49 ಸರಾಸರಿಯಲ್ಲಿ 84 ವಿಕೆಟ್ ಕಬಳಿಸಿದ್ದಾರೆ.


 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.