India vs Sri Lanka T20 Series: ಭಾರತ ತಂಡ ಶ್ರೀಲಂಕಾ ವಿರುದ್ಧದ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿದೆ. ಮೂರನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್, ಶುಭಮನ್ ಗಿಲ್ ಮತ್ತು ಅಕ್ಷರ್ ಪಟೇಲ್ ಅದ್ಭುತ ಆಟ ಪ್ರದರ್ಶಿಸಿದರು. ಈ ಆಟಗಾರರಿಂದಲೇ ಟೀಂ ಇಂಡಿಯಾ ಸರಣಿ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಆದರೆ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಮೊದಲ ಬಾರಿಗೆ ಟೀಂ ಇಂಡಿಯಾ ತಂಡದಲ್ಲಿ ಆಟಗಾರನೊಬ್ಬ ಸ್ಥಾನ ಪಡೆದಿದ್ದಾನೆ. ಆದರೆ ನಾಯಕ ಹಾರ್ದಿಕ್ ಪಾಂಡ್ಯ ಈ ಆಟಗಾರನಿಗೆ ಪ್ಲೇಯಿಂಗ್ 11 ನಲ್ಲಿ ಅವಕಾಶ ನೀಡಲಿಲ್ಲ.
ಇದನ್ನೂ ಓದಿ: Suryakumar Yadav: ಶತಕದ ಜೊತೆ 3 ವಿಶ್ವದಾಖಲೆ ಬರೆದ ‘ಮಿ.360’: ಈ ಸಾಧನೆ ಮಾಡಿದ ಜಗತ್ತಿನ ಮೊದಲ ಬ್ಯಾಟ್ಸ್ ಮನ್ ‘SKY’
ಶ್ರೀಲಂಕಾ ವಿರುದ್ಧದ ಸಂಪೂರ್ಣ ಸರಣಿಯಲ್ಲಿ ಪ್ಲೇಯಿಂಗ್ XI ನಲ್ಲಿ ಸ್ಟಾರ್ ವೇಗದ ಬೌಲರ್ ಮುಖೇಶ್ ಕುಮಾರ್‌ಗೆ ನಾಯಕ ಹಾರ್ದಿಕ್ ಪಾಂಡ್ಯ ಸ್ಥಾನ ನೀಡಿಲ್ಲ. ಮುಖೇಶ್ ಸದ್ಯ ಅತ್ಯುತ್ತಮ ಫಾರ್ಮ್ ನಲ್ಲಿ ಆಟವಾಡುತ್ತಿದ್ದಾರೆ. ಎಂತಹದ್ದೇ ಬ್ಯಾಟಿಂಗ್ ದಾಳಿಯನ್ನು ತಡೆಯುವ ಸಾಮರ್ಥ್ಯ ಅವರಲ್ಲಿದೆ. ಐಪಿಎಲ್ ಮತ್ತು ದೇಶೀಯ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಎಲ್ಲರ ಮನ ಗೆದ್ದಿದ್ದಾರೆ. ಆದರೆ ನಾಯಕ ಹಾರ್ದಿಕ್ ಪಾಂಡ್ಯ ಈ ಆಟಗಾರನಿಗೆ ಅವಕಾಶ ನೀಡಿಲ್ಲ. ಶುಭಮನ್ ಗಿಲ್, ರಾಹುಲ್ ತ್ರಿಪಾಠಿ ಮತ್ತು ಶಿವಂ ಮಾವಿ ಶ್ರೀಲಂಕಾ ವಿರುದ್ಧ ಟಿ20 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದಾರೆ.
2023ರ ಐಪಿಎಲ್ ಹರಾಜಿನಲ್ಲಿ ಮುಕೇಶ್ ಕುಮಾರ್ ಭಾರೀ ಮೊತ್ತವನ್ನು ಪಡೆದಿದ್ದರು. ಡೆಲ್ಲಿ ಕ್ಯಾಪಿಟಲ್ಸ್ ಅವರನ್ನು 5.50 ಕೋಟಿ ರೂ.ಗೆ ಬಿಡ್ ಮಾಡಿ ಖರೀದಿಸಿದೆ. ಅವರ ಮೂಲ ಬೆಲೆ ಕೇವಲ 20 ಲಕ್ಷ ರೂಪಾಯಿಗಳಾಗಿದ್ದರೆ, ಅವರ ಮೂಲ ಬೆಲೆಗಿಂತ ಸುಮಾರು 28 ಪಟ್ಟು ಹೆಚ್ಚು ಬೆಲೆ ಮಾರಾಟವಾಗಿದ್ದಾರೆ. ಅವರು ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಜನಿಸಿದ್ದು, ಅವರು ಸಾಮಾನ್ಯ ಕುಟುಂಬಕ್ಕೆ ಸೇರಿದವರಾಗಿದ್ದಾರೆ.
ಈ ವರ್ಷ ರಣಜಿ ಟ್ರೋಫಿಯಲ್ಲಿ ಮುಖೇಶ್ ಕುಮಾರ್ 20ಕ್ಕೂ ಹೆಚ್ಚು ವಿಕೆಟ್ ಕಬಳಿಸಿದ್ದಾರೆ. ಇತ್ತೀಚೆಗೆ ನ್ಯೂಜಿಲೆಂಡ್ ಎ ವಿರುದ್ಧ ಆಡಿದ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ. ಟೀಮ್ ಇಂಡಿಯಾದಲ್ಲಿ ಶಾರ್ಟ್ ಬೌಲರ್ ಆಗಿಯೂ ತೊಡಗಿಸಿಕೊಂಡಿದ್ದಾರೆ.
ಇದನ್ನೂ ಓದಿ: IND vs SL : ಸೂರ್ಯಕುಮಾರ್ ಬ್ಯಾಟಿಂಗ್ ಅಬ್ಬರ : ಟೀಂ ಇಂಡಿಯಾಗೆ ಟಿ20 ಸರಣಿ ಭರ್ಜರಿ ಗೆಲವು!
ಮುಖೇಶ್ ಕುಮಾರ್ 33 ಪ್ರಥಮ ದರ್ಜೆ ಪಂದ್ಯಗಳಲ್ಲಿ 123 ವಿಕೆಟ್ ಪಡೆದಿದ್ದಾರೆ. 24 ಲಿಸ್ಟ್ ಎ ಪಂದ್ಯಗಳಲ್ಲಿ 26 ವಿಕೆಟ್ ಪಡೆದಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಮುಖೇಶ್ 23 ಪಂದ್ಯಗಳಲ್ಲಿ 25 ವಿಕೆಟ್ ಪಡೆದಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.