Hardik Pandya: ಏಕದಿನ ಮತ್ತು ಟಿ-20ಗೆ ಹಾರ್ದಿಕ್ ಪಾಂಡ್ಯ ನಾಯಕತ್ವ ವಹಿಸಿಕೊಳ್ಳುವ ಸಾಧ್ಯತೆ

Team India: ಶೀಘ್ರವೇ ಬಿಸಿಸಿಐ ಹೊಸ ಆಯ್ಕೆ ಸಮಿತಿಯನ್ನು ನೇಮಿಸಿ ನಿರ್ಧಾರ  ಅಧಿಕೃತಗೊಳಿಸಲಿದೆ. ರೋಹಿತ್ ಶರ್ಮಾ 2023ರ ವಿಶ್ವಕಪ್‍ವರೆಗೆ ಏಕದಿನ ಮತ್ತು ಟೆಸ್ಟ್ ತಂಡಕ್ಕೆ ನಾಯಕರಾಗಿ ಮುಂದುವರೆಯಲಿದ್ದಾರೆ.

Written by - Puttaraj K Alur | Last Updated : Dec 22, 2022, 01:14 PM IST
  • ಗಾಯ ಮತ್ತು ಫಿಟ್ನೇಸ್ ಸಮಸ್ಯೆಯಿಂದ ಬಳಲುತ್ತಿರುವ ರೋಹಿತ್ ಶರ್ಮಾ
  • ಟಿ-20 ಮತ್ತು ಏಕದಿನ ನಾಯಕತ್ವ ವಹಿಸಿಕೊಳ್ಳುವಂತೆ ಹಾರ್ದಿಕ್ ಪಾಂಡ್ಯಗೆ ಸೂಚನೆ
  • ಶೀಘ್ರವೇ ಬಿಸಿಸಿಐ ಹೊಸ ಆಯ್ಕೆ ಸಮಿತಿಯನ್ನು ನೇಮಿಸಿ ನಿರ್ಧಾರ ಅಧಿಕೃತಗೊಳಿಸಲಿದೆ
Hardik Pandya: ಏಕದಿನ ಮತ್ತು ಟಿ-20ಗೆ ಹಾರ್ದಿಕ್ ಪಾಂಡ್ಯ ನಾಯಕತ್ವ ವಹಿಸಿಕೊಳ್ಳುವ ಸಾಧ್ಯತೆ title=
ಟಿ-20 & ಏಕದಿನಕ್ಕೆ ಪಾಂಡ್ಯ ನಾಯಕ?

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದಲ್ಲಿ ಶೀಘ್ರವೇ ಮತ್ತೊಂದು ಪ್ರಮುಖ ಬದಲಾವಣೆಯಾಗಲಿದೆ. ಏಕದಿನ ಮತ್ತು ಟಿ-20 ತಂಡಗಳ ನಾಯಕನಾಗಿ ಹಾರ್ದಿಕ್ ಪಾಂಡ್ಯ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆಯಿದೆ. ಕಳೆದೊಂದು ವರ್ಷದಿಂದ ಹಿಟ್‍ಮ್ಯಾನ್ ರೋಹಿತ್ ಶರ್ಮಾರ ಫಿಟ್ನೆಸ್ ಕಳವಳಕಾರಿಯಾಗಿದೆ. ಹೀಗಾಗಿ ಅವರ ಸ್ಥಾನವನ್ನು ಹಾರ್ದಿಕ್ ಪಾಂಡ್ಯ ತುಂಬಲಿದ್ದಾರೆ ಎನ್ನಲಾಗುತ್ತಿದೆ.  

ಫಿಟ್‌ನೆಸ್ ಸಮಸ್ಯೆಯಿಂದಾಗಿ ರೋಹಿತ್ ಶರ್ಮಾ ಅನೇಕ ಪಂದ್ಯಗಳಿಂದ ಹೊರಬಿದ್ದಿದ್ದಾರೆ. ಬಾಂಗ್ಲಾದೇಶದ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲೂ ಭಾಗವಹಿಸಿಲ್ಲ. ಡಿಸೆಂಬರ್ 21ರಂದು ನಡೆದ ಅಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಯಾವುದೇ ಅಧಿಕೃತ ನಿರ್ಧಾರ ತೆಗೆದುಕೊಂಡಿಲ್ಲ. ಆದರೆ ಹಾರ್ದಿಕ್ ಪಾಂಡ್ಯರನ್ನು ಸಂಪರ್ಕಿಸಿರುವ ಬಿಸಿಸಿಐನ ಉನ್ನತ ಅಧಿಕಾರಿಗಳು ಏಕದಿನ ಮತ್ತು ಟಿ-20 ತಂಡದ ನಾಯಕತ್ವ ವಹಿಸಿಕೊಳ್ಳುವಂತೆ ಕೇಳಿದ್ದಾರೆ. ಇದಕ್ಕುತ್ತರಿಸಿರುವ ಪಾಂಡ್ಯ ಯೋಚಿಸಲು ತಮಗೆ ಸಮಯ ಬೇಕು ಅಂತಾ ಹೇಳಿದ್ದಾರಂತೆ.

ಇದನ್ನೂ ಓದಿ: IND vs BAN : ಟೀಂ ಇಂಡಿಯಾಗೆ ಬಿಗ್ ಶಾಕ್ : ಎರಡನೇ ಟೆಸ್ಟ್ ಆಡೋದಿಲ್ಲ ಕೆಎಲ್ ರಾಹುಲ್!

ಶೀಘ್ರವೇ ಬಿಸಿಸಿಐ ಹೊಸ ಆಯ್ಕೆ ಸಮಿತಿಯನ್ನು ನೇಮಿಸಿ ನಿರ್ಧಾರ  ಅಧಿಕೃತಗೊಳಿಸಲಿದೆ. ರೋಹಿತ್ ಶರ್ಮಾ 2023ರ ವಿಶ್ವಕಪ್‍ವರೆಗೆ ಏಕದಿನ ಮತ್ತು ಟೆಸ್ಟ್ ತಂಡಕ್ಕೆ ನಾಯಕರಾಗಿ ಮುಂದುವರೆಯಲಿದ್ದಾರೆ. ಭಾರತ ಟಿ-20 ತಂಡಕ್ಕೆ ನಾಯಕನ ಬದಲಾವಣೆ ಮಾಡುವ ಯೋಜನೆ ಹೊಂದಿದ್ದೇವೆ. ಹಾರ್ದಿಕ್ ಪಾಂಡ್ಯರ ಜೊತೆ ಈ ಬಗ್ಗೆ ಚರ್ಚಿಸಲಾಗಿದೆ. ಈ ಬಗ್ಗೆ ತಮ್ಮ ನಿರ್ಧಾರ ತಿಳಿಸಲು ಪಾಂಡ್ಯ ಕೆಲ ದಿನಗಳ ಸಮಯ ಕೇಳಿದ್ದಾರೆ. ಹೀಗಾಗಿ ನಾವು ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಸದ್ಯ ಟಿ-20 ನಾಯಕತ್ವವನ್ನು ವಹಿಸಿಕೊಳ್ಳುವಂತೆ ನಾವು ಪಾಂಡ್ಯರಿಗೆ ಕೇಳಿದ್ದೇವೆ’ ಅಂತಾ ಬಿಸಿಸಿಐನ ಅಧಿಕಾರಿಗಳು ತಿಳಿಸಿದ್ದಾರೆ.  

ರೋಹಿತ್ ಶರ್ಮಾ ಮೇಲಿರುವ ನಾಯಕತ್ವದ ಹೊರೆ ಕಡಿಮೆ ಮಾಡಲು ಟಿ-20 ತಂಡಕ್ಕೆ ಪಾಂಡ್ಯರನ್ನು ನಾಯಕರನ್ನಾಗಿ ನೇಮಿಸಲು ನಿರ್ಧಾರಿಸಲಾಗಿದೆ. 2023ರಲ್ಲಿ ಏಕದಿನ ವಿಶ್ವಕಪ್ ಇರುವ ಕಾರಣ ರೋಹಿತ್ ಶರ್ಮಾ ಏಕದಿನ ಮತ್ತು ಟೆಸ್ಟ್ ಮಾದರಿಯತ್ತ ಹೆಚ್ಚಿನ ಗಮನ ಹರಿಸಲಿದ್ದಾರೆ. 2024ರ ಟಿ-20 ವಿಶ್ವಕಪ್‌ಗೆ ಟೀಂ ಇಂಡಿಯಾ ಈಗಿನಿಂದಲೇ ಸಿದ್ಧತೆ ಆರಂಭಿಸಿದ್ದು, ಪಾಂಡ್ಯರನ್ನು ನಾಯಕರನ್ನಾಗಿ ಮಾಡಲು ಮಾಸ್ಟರ್ ಪ್ಲಾನ್ ಮಾಡಲಾಗಿದೆ.

ಇದನ್ನೂ ಓದಿ: Virat Kohli: “ಫಾರ್ಮ್ಗೆ ಬರಲು ವಿರಾಟ್ ಈ ಒಂದು ಕೆಲಸ ಮಾಡ್ತಾರೆ”: ಬ್ಯಾಟಿಂಗ್ ಕೋಚ್ ನಿಂದ ರಹಸ್ಯ ಬಹಿರಂಗ

ಹಾರ್ದಿಕ್ ಪಾಂಡ್ಯ 2022ರ ಐಪಿಎಲ್ ಟೂರ್ನಿಯಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕರಾಗಿ ಯಶಸ್ವಿಯಾಗಿದ್ದಾರೆ. ಅವರು ಆ ಋತುವಿನಲ್ಲಿ 15 ಪಂದ್ಯಗಳಲ್ಲಿ 44.27 ಸರಾಸರಿಯಲ್ಲಿ 487 ರನ್ ಗಳಿಸಿದ್ದರು. ಗುಜರಾತ್‍ಗೆ ಚೊಚ್ಚಲ ಐಪಿಎಲ್ ಟ್ರೋಫಿ ತಂದುಕೊಟ್ಟ ಹಿನ್ನೆಲೆ ಹಾರ್ದಿಕ್‍ರನ್ನು ಟಿ-20 ತಂಡದ ನಾಯಕರನ್ನಾಗಿ ಮಾಡಲು ಬಿಸಿಸಿಐ ನಿರ್ಧರಿಸಿದೆ ಎಂದು ವರದಿಯಾಗಿದೆ. ಗಾಯ ಮತ್ತು ಫಿಟ್ನೇಸ್ ಸಮಸ್ಯೆಯಿಂದ ಬಳಲುತ್ತಿರುವ ರೋಹಿತ್ ಶರ್ಮಾ ಅನೇಕ ಸರಣಿಗಳಲ್ಲಿ ಆಡಿರಲಿಲ್ಲ. ಹೀಗಾಗಿ ಅವರು ಸಂಪೂರ್ಣ ಚೇತರಿಸಿಕೊಂಡು ತಂಡಕ್ಕೆ ಮರಳಬೇಕಾಗಿದೆ. ಅವರ ಮೇಲಿನ ನಾಯಕತ್ವ ಹೊರೆಯನ್ನು ಕಡಿಮೆ ಮಾಡಿ, ಹಾರ್ದಿಕ್ ಪಾಂಡ್ಯರಿಗೆ ಹೊಸ ಜವಾಬ್ದಾರಿ ನೀಡಲು ಬಿಸಿಸಿಐ ಚಿಂತನೆ ನಡೆಸಿದೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News