IND vs NZ: ನ್ಯೂಜಿಲೆಂಡ್ ವಿರುದ್ಧ ಸರಣಿ ಗೆಲ್ಲಬೇಕೆಂದರೆ ಹಾರ್ದಿಕ್ ಈ ಆಟಗಾರನನ್ನು ಪಂದ್ಯದಿಂದ ಹೊರಗಿಡಲೇಬೇಕು!!

India vs New Zealand 3rd T20: ನ್ಯೂಜಿಲೆಂಡ್ ವಿರುದ್ಧದ ಮೊದಲ ಎರಡು ಟಿ20 ಪಂದ್ಯಗಳಲ್ಲಿ ಶುಭಮನ್ ಗಿಲ್ ಕಳಪೆಯಾಗಿ ಸೋತಿದ್ದಾರೆ. ಅವರ ಬ್ಯಾಟ್‌ನಿಂದ ರನ್‌ಗಳನ್ನು ಪಡೆಯುವುದು ಕಷ್ಟಕರವಾಗಿದೆ. ಕಿವೀಸ್ ತಂಡದ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ 7 ರನ್, ಎರಡನೇ ಟಿ20 ಪಂದ್ಯದಲ್ಲಿ 11 ರನ್ ಗಳಿಸಿದರು. ನ್ಯೂಜಿಲೆಂಡ್ ಹೊರತುಪಡಿಸಿ, ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಶುಭಮನ್ ಗಿಲ್ ವಿಫಲರಾಗಿದ್ದರು. ಇಂತಹ ಪರಿಸ್ಥಿತಿಯಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ಮೂರನೇ ಟಿ20 ಪಂದ್ಯದಿಂದ ಹೊರಗಿಡಬಹುದು.

Written by - Bhavishya Shetty | Last Updated : Jan 30, 2023, 03:39 PM IST
    • ಟೀಂ ಇಂಡಿಯಾದ ಬೌಲರ್‌ಗಳು ಅದ್ಭುತ ಆಟ ಪ್ರದರ್ಶಿಸಿ ಎಲ್ಲರ ಮನ ಗೆದ್ದಿದ್ದಾರೆ
    • ಟೀಂ ಇಂಡಿಯಾದ ಸ್ಟಾರ್ ಆಟಗಾರನು ಅತ್ಯಂತ ಕಳಪೆ ಆಟ ಪ್ರದರ್ಶಿಸಿದ್ದಾನೆ
    • T20 ಕ್ರಿಕೆಟ್‌ನಲ್ಲಿ ತನ್ನ ಹೆಸರಿಗೆ ತಕ್ಕಂತೆ ಪ್ರದರ್ಶನ ನೀಡಲು ಸಾಧ್ಯವಾಗುತ್ತಿಲ್ಲ
IND vs NZ: ನ್ಯೂಜಿಲೆಂಡ್ ವಿರುದ್ಧ ಸರಣಿ ಗೆಲ್ಲಬೇಕೆಂದರೆ ಹಾರ್ದಿಕ್ ಈ ಆಟಗಾರನನ್ನು ಪಂದ್ಯದಿಂದ ಹೊರಗಿಡಲೇಬೇಕು!! title=
India New Zealand T20

India vs New Zealand 3rd T20: ಭಾರತ ತಂಡ ಎರಡನೇ ಟಿ20 ಪಂದ್ಯವನ್ನು ಕೊನೆಯ ಓವರ್‌ನಲ್ಲಿ 6 ವಿಕೆಟ್‌ಗಳಿಂದ ಗೆದ್ದುಕೊಂಡಿತು. ಟೀಂ ಇಂಡಿಯಾದ ಬೌಲರ್‌ಗಳು ಅದ್ಭುತ ಆಟ ಪ್ರದರ್ಶಿಸಿ ಎಲ್ಲರ ಮನ ಗೆದ್ದಿದ್ದಾರೆ. ಅದೇ ಸಮಯದಲ್ಲಿ, ಟೀಂ ಇಂಡಿಯಾದ ಸ್ಟಾರ್ ಆಟಗಾರನು ಅತ್ಯಂತ ಕಳಪೆ ಆಟ ಪ್ರದರ್ಶಿಸಿದ್ದಾನೆ. ಇದೇ ಆಟಗಾರ ಏಕದಿನ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಆದರೆ T20 ಕ್ರಿಕೆಟ್‌ನಲ್ಲಿ ತನ್ನ ಹೆಸರಿಗೆ ತಕ್ಕಂತೆ ಪ್ರದರ್ಶನ ನೀಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ಮೂರನೇ ಟಿ20 ಪಂದ್ಯದಿಂದ ಈ ಆಟಗಾರನನ್ನು ಹೊರಗಿಡುವುದು ಸೂಕ್ತ ಎಂದನಿಸುತ್ತಿದೆ.

ಇದನ್ನೂ ಓದಿ: Ultraviolette F77- 307 ಕಿಮೀ ಮೈಲೇಜ್ ನೀಡಬಲ್ಲ ಭಾರತದ ಅತ್ಯಂತ ವೇಗದ ಎಲೆಕ್ಟ್ರಿಕ್ ಮೋಟಾರ್‌ಸೈಕಲ್

ನ್ಯೂಜಿಲೆಂಡ್ ವಿರುದ್ಧದ ಮೊದಲ ಎರಡು ಟಿ20 ಪಂದ್ಯಗಳಲ್ಲಿ ಶುಭಮನ್ ಗಿಲ್ ಕಳಪೆಯಾಗಿ ಸೋತಿದ್ದಾರೆ. ಅವರ ಬ್ಯಾಟ್‌ನಿಂದ ರನ್‌ಗಳನ್ನು ಪಡೆಯುವುದು ಕಷ್ಟಕರವಾಗಿದೆ. ಕಿವೀಸ್ ತಂಡದ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ 7 ರನ್, ಎರಡನೇ ಟಿ20 ಪಂದ್ಯದಲ್ಲಿ 11 ರನ್ ಗಳಿಸಿದರು. ನ್ಯೂಜಿಲೆಂಡ್ ಹೊರತುಪಡಿಸಿ, ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಶುಭಮನ್ ಗಿಲ್ ವಿಫಲರಾಗಿದ್ದರು. ಇಂತಹ ಪರಿಸ್ಥಿತಿಯಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ಮೂರನೇ ಟಿ20 ಪಂದ್ಯದಿಂದ ಹೊರಗಿಡಬಹುದು.

ಶುಭಮನ್ ಗಿಲ್ ಐಪಿಎಲ್‌ನಲ್ಲಿ ಗುಜರಾತ್ ಟೈಟಾನ್ಸ್‌ ಪರವಾಗಿ ಆಡುತ್ತಿದ್ದಾರೆ. ಆ ತಂಡದ ನಾಯಕ ಕೂಡ ಹಾರ್ದಿಕ್ ಪಾಂಡ್ಯ. ಮೂರನೇ ಟಿ20ಯಲ್ಲಿ ನಾಯಕ ಹಾರ್ದಿಕ್ ಗಿಲ್ ಬದಲಿಗೆ ಯುವ ಆಟಗಾರ ಪೃಥ್ವಿ ಶಾಗೆ ಅವಕಾಶ ನೀಡಬಹುದು.

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಶುಭಮನ್ ಗಿಲ್ ಅತಿ ಹೆಚ್ಚು ರನ್ ಗಳಿಸಿದ್ದರು. ಆದರೆ T20 ಕ್ರಿಕೆಟ್‌ನಲ್ಲಿ ಸಂಪೂರ್ಣವಾಗಿ ನಿಷ್ಪರಿಣಾಮಕಾರಿಯಾಗಿದ್ದಾರೆ. ಟೀಂ ಇಂಡಿಯಾಗೆ ದೊಡ್ಡ ಆರಂಭವನ್ನು ನೀಡುವ ಪ್ರಮುಖ ಜವಾಬ್ದಾರಿಯನ್ನು ಅವರು ಹೊಂದಿದ್ದರೂ ಸಹ ಇದರಲ್ಲಿ ವಿಫಲರಾಗಿದ್ದಾರೆ. ಟೀಂ ಇಂಡಿಯಾ ಪರ 5 ಟಿ20 ಪಂದ್ಯಗಳಲ್ಲಿ ಕೇವಲ 76 ರನ್ ಗಳಿಸಿದ್ದಾರೆ.

ಇದನ್ನೂ ಓದಿ: Team Indiaದ ಈ ಆಟಗಾರನ ಪ್ರೀತಿಯಲ್ಲಿ ಮತ್ತೆ ವಿಘ್ನ: ಬ್ರೇಕಪ್ ಮಾಡಿಕೊಂಡ ಸ್ಟಾರ್ ಜೋಡಿ!!

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಸದ್ಯ ಟಿ20 ಸರಣಿ 1-1ರಲ್ಲಿ ಸಮಬಲಗೊಂಡಿದ್ದು, ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಭಾರತ ತಂಡ ಸರಣಿ ಗೆಲ್ಲಲು ಅಭ್ಯಾಸ ನಡೆಸುತ್ತಿದೆ. ಈ ಎಲ್ಲಾ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಭಾರತದ ಅಗ್ರ ಕ್ರಮಾಂಕದಲ್ಲಿ ದೊಡ್ಡ ಬದಲಾವಣೆಗಳನ್ನು ಮಾಡಬಹುದು ಎಂದನಿಸುತ್ತಿದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News