ನವದೆಹಲಿ: ಜೂನ್ 26 ರಂದು ಪ್ರಾರಂಭವಾಗುವ ಐರ್ಲೆಂಡ್ ವಿರುದ್ಧದ ಮುಂಬರುವ ಎರಡು ಪಂದ್ಯಗಳ ಟಿ20 ಸರಣಿಗೆ ಟೀಮ್ ಇಂಡಿಯಾದ ತಂಡವನ್ನು ಬಿಸಿಸಿಐ ಬುಧವಾರ ಪ್ರಕಟಿಸಿದ್ದು, ಹಾರ್ದಿಕ್ ಪಾಂಡ್ಯ ಅವರನ್ನು ತಂಡದ ನಾಯಕರನ್ನಾಗಿ ಮತ್ತು  ಭುವನೇಶ್ವರ್ ಕುಮಾರ್ ಅವರನ್ನು ಉಪನಾಯಕರನ್ನಾಗಿ ಹೆಸರಿಸಲಾಗಿದೆ.ಇನ್ನೊಂದೆಡೆಗೆ ರಾಹುಲ್ ತ್ರಿಪಾಠಿ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಾರಿ ಐಪಿಎಲ್ ಟೂರ್ನಿಯಲ್ಲಿ ಗುಜರಾತ್ ಟೈಟಾನ್ಸ ತಂಡದ ನಾಯಕತ್ವವನ್ನು ವಹಿಸುವುದರ ಜೊತೆಗೆ 15 ಪಂದ್ಯಗಳಲ್ಲಿ 487 ರನ್ ಗಳಿಸಿದ್ದಲ್ಲದೇ ಎಂಟು ವಿಕೆಟ್‌ಗಳನ್ನು ಪಡೆಯುವ ಮೂಲಕ ರಾಜಸ್ತಾನ್ ರಾಯಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ ತಂಡವು ಮೊದಲ ಯತ್ನದಲ್ಲಿಯೇ ಚೊಚ್ಚಲ ಐಪಿಎಲ್ ಪ್ರಶಸ್ತಿ ಗೆಲ್ಲುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದರು.


ಇದನ್ನೂ ಓದಿ: ಕೆನಡಾದಲ್ಲಿ ಸೋಶಿಯಲ್‌ ಮೀಡಿಯಾ ಗ್ರೂಪ್‌ ರಚಿಸಿದ NRI: ಉದ್ದೇಶ ಕೇಳಿದ್ರೆ ಶಾಕ್‌ ಆಗ್ತೀರಾ!


ಈಗ ಐರ್ಲೆಂಡ್ ವಿರುದ್ಧದ ಟಿ 20 ಸರಣಿಗೆ ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್ ಮತ್ತು ಸಂಜು ಸ್ಯಾಮ್ಸನ್ ಕೂಡ ತಂಡಕ್ಕೆ ಮರಳಲಿದ್ದಾರೆ.ಪ್ರಸ್ತುತ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ಸರಣಿಗೆ ಚೊಚ್ಚಲ ಭಾರತ ಕರೆ ಪಡೆದಿರುವ ಉಮ್ರಾನ್ ಮಲಿಕ್ ಅವರನ್ನೂ ತಂಡದಲ್ಲಿ ಉಳಿಸಿಕೊಳ್ಳಲಾಗಿದೆ.ಭಾರತ ಮತ್ತು ಐರ್ಲೆಂಡ್‌ಗಳು ಕ್ರಮವಾಗಿ ಜೂನ್ 26 ಮತ್ತು ಜೂನ್ 28 ರಂದು ಡಬ್ಲಿನ್‌ನಲ್ಲಿ ಎರಡು ಟಿ20 ಪಂದ್ಯಗಳನ್ನು ಆಡಲಿವೆ.


ಇದನ್ನೂ ಓದಿ: ಈ ಯೋಜನೆಯ ಮೂಲಕ ದೇಶ ಸೇವೆ ಅವಕಾಶ ನೀಡಿದ ಯೋಗಿ ಸರ್ಕಾರ


ಭಾರತ ಟಿ20 ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಭುವನೇಶ್ವರ್ ಕುಮಾರ್ (ಉಪನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಯುಜುವೇಂದ್ರ ಚಾಹಲ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.