Virat Kohli: ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಆರಂಭಿಕ ಪಂದ್ಯಗಳಲ್ಲಿ  ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಆಡುತ್ತಿಲ್ಲ. ಅವರ ವೈಯಕ್ತಿಕ ಕಾರಣಗಳಿಂದಾಗಿ ವಿರಾಟ್ ಸದ್ಯ ವಿರಾಮ ತೆಗೆದುಕೊಳ್ಳುತ್ತಿದ್ದಾರೆ ಎಂದು ವರದಿಯಾಗಿತ್ತು. ಏತನ್ಮಧ್ಯೆ, ವೈಯಕ್ತಿಕ ಕಾರಣಗಳಿಂದ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್‌ಗಳಿಂದ ಹಿಂದೆ ಸರಿದಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಕಟಿಸಿತ್ತು. 


COMMERCIAL BREAK
SCROLL TO CONTINUE READING

ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಸರಣಿಯ ಆರಂಭಿಕ ಪಂದ್ಯಗಳಿಂದ ಬ್ರೇಕ್ ತೆಗೆದುಕೊಂಡಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ, ವಿರಾಟ್ ಪತ್ನಿ ಅನುಷ್ಕಾ ಶರ್ಮಾ ಗರ್ಭಿಣಿ ಎಂಬ ಕಾರಣಕ್ಕೆ ಕ್ರಿಕೆಟ್‌ನಿಂದ ವಿರಾಮ ತೆಗೆದುಕೊಂಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ವೈರಲ್ ಆಗಿತ್ತು. ಇದಲ್ಲದೆ, ಕಿಂಗ್ ಕೊಹ್ಲಿ ಅವರ ತಾಯಿಯ ಆನಾರೋಗ್ಯದ ಸುದ್ದಿ ಹೆಚ್ಚು ಸಂಚಲನ ಮೂಡಿಸಿತ್ತು.  ಆದರೆ, ವಿರಾಟ್ ಕೊಹ್ಲಿ ಕ್ರಿಕೆಟ್‌ನಿಂದ ವಿರಾಮ ತೆಗೆದುಕೊಳ್ಳಲು ಅವರ ತಾಯಿಯ ಅನಾರೋಗ್ಯವೇ ಕಾರಣವೇ? ವಿರಾಟ್ ತಾಯಿ ನಿಜಕ್ಕೂ ಅನಾರೋಗ್ಯದಿಂದ ಬಳಲುತ್ತಿದ್ದಾರಾ? ಈ ಬಗ್ಗೆ ವಿರಾಟ್ ಸಹೋದರ ವಿಕಾಸ್ ಕೊಹ್ಲಿ ಮಾಹಿತಿ ನೀಡಿದ್ದಾರೆ. 


ಇದನ್ನೂ ಓದಿ- IND vs ENG: 'ರೋಹಿತ್ ಬದಲು ಈತ ನಾಯಕನಾಗಿದ್ರೆ, ಭಾರತ ಟೆಸ್ಟ್’ನಲ್ಲಿ ಸೋಲುತ್ತಿರಲಿಲ್ಲ'! ಇಂಗ್ಲೆಂಡ್ ಕ್ರಿಕೆಟರ್ ಹೇಳಿದ್ದು ಯಾರ ಬಗ್ಗೆ?


ಈ ಕುರಿತಂತೆ ಸಾಮಾಜಿಕ ಮಾಧ್ಯಮದ ಮೂಲಕ ಬುಧವಾರ (ಜನವರಿ 31, 2024)  ಮಾಹಿತಿ ಹಂಚಿಕೊಂಡಿರುವ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅವರ ಸಹೋದರ ವಿಕಾಸ್ ಕೊಹ್ಲಿ, ತಮ್ಮ ತಾಯಿ ಸರೋಜ್ ಕೊಹ್ಲಿ "ಅವರು ಸಂಪೂರ್ಣವಾಗಿ ಫಿಟ್ ಮತ್ತು ಫೈನ್" ಆಗಿದ್ದಾರೆ. ಅವರ ಆರೋಗ್ಯದ ಬಗ್ಗೆ ಹರಡಿರುವುದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದ್ದಾರೆ. 


ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಈ ಕುರಿತಂತೆ ಮಾಹಿತಿ ನೀಡಿರುವ ವಿಕಾಸ್, ತಮ್ಮ ತಾಯಿಯ ಆರೋಗ್ಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಎಲ್ಲಾ ವದಂತಿಗಳನ್ನು ತಳ್ಳಿಹಾಕಿದ್ದಾರೆ. ಯಾವುದೇ "ಸರಿಯಾದ ಮಾಹಿತಿ" ಇಲ್ಲದೆ ಇಂತಹ ಸುದ್ದಿಗಳನ್ನು ಹರಡಬೇಡಿ ಎಂದು ಅವರು ಎಲ್ಲರಿಗೂ ಮನವಿ ಮಾಡಿದ್ದಾರೆ. 


Kohli-Elgar incident: 'ವಿರಾಟ್ ಕೊಹ್ಲಿ ನನ್ನ ಮೇಲೆ ಉಗುಳಿದರು'.. ಸ್ಟಾರ್‌ ಕ್ರಿಕೆಟರ್‌ ನಿಂದ ಗಂಭೀರ ಆರೋಪ


"ಎಲ್ಲರಿಗೂ ನಮಸ್ಕಾರ, ನಮ್ಮ ಅಮ್ಮನ ಆರೋಗ್ಯದ ಬಗ್ಗೆ ಈ ರೀತಿ ಸುಳ್ಳು ಸುದ್ದಿ ಹರಿದಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ನಮ್ಮ ತಾಯಿ ಸಂಪೂರ್ಣವಾಗಿ ಫಿಟ್ ಮತ್ತು ಕ್ಷೇಮವಾಗಿದ್ದಾರೆ ಎಂದು ಸ್ಪಷ್ಟಪಡಿಸುತ್ತೇನೆ. ಅಲ್ಲದೆ, ಸರಿಯಾದ ಮಾಹಿತಿ ಇಲ್ಲದೆ ಇಂತಹ ಸುದ್ದಿಗಳನ್ನು ಹರಡದಂತೆ ನಾನು ಎಲ್ಲರಿಗೂ ಮತ್ತು ಮಾಧ್ಯಮದವರಲ್ಲಿ ವಿನಂತಿಸುತ್ತೇನೆ" ಎಂದು ವಿಕಾಸ್ ಇನ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.