IMD Weather Update 30 September 2023: ಕರ್ನಾಟಕ, ದಕ್ಷಿಣ ಕೊಂಕಣ ಮತ್ತು ಗೋವಾದ ಉತ್ತರ ಕರಾವಳಿಯ ಸಮೀಪ ಪೂರ್ವ ಮಧ್ಯ ಅರೇಬಿಯನ್ ಸಮುದ್ರದಲ್ಲಿ ವಾಯುಭಾರ ಕುಸಿತಗೊಂಡಿದೆ. ಪರಿಣಾಮವಾಗಿ ಮುಂದಿನ 3 ದಿನಗಳ ಕಾಲ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ಹೇಳಲಾಗಿದೆ.
ಇದನ್ನೂ ಓದಿ: ಒಂದೇ ಒಂದು ವಿಶ್ವಕಪ್ ಗೆಲ್ಲದೆ 300ಕ್ಕೂ ಅಧಿಕ ಏಕದಿನ ಪಂದ್ಯಗಳನ್ನಾಡಿದ ಆಟಗಾರರು ಯಾರು ಗೊತ್ತಾ?
ಇನ್ನು ಮ್ಯಾನ್ಮಾರ್ ಮತ್ತು ಪೂರ್ವ ಮಧ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆಯಿಂದಾಗಿ, ಪೂರ್ವ ಮಧ್ಯ ಬಂಗಾಳ ಕೊಲ್ಲಿಯ ಮೇಲೆ ಕಡಿಮೆ ಒತ್ತಡದ ಪ್ರದೇಶವೂ ರೂಪುಗೊಂಡಿದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕಳೆದ 24 ಗಂಟೆಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಿದೆ. ಗೋವಾ, ಕರಾವಳಿ ಮಹಾರಾಷ್ಟ್ರ ಮತ್ತು ದಕ್ಷಿಣ ಮಧ್ಯ ಮಹಾರಾಷ್ಟ್ರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದ್ದು, ಕೆಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಧ್ಯಪ್ರದೇಶ, ಛತ್ತೀಸ್’ಗಢ, ವಿದರ್ಭ, ಮರಾಠವಾಡ, ಕರಾವಳಿ ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದೆ.
ಇದನ್ನೂ ಓದಿ: ಇಂದು ಭಾರತ-ಇಂಗ್ಲೆಂಡ್ ವಿಶ್ವಕಪ್ ಅಭ್ಯಾಸ ಪಂದ್ಯ: ಎಷ್ಟು ಗಂಟೆಗೆ, ಎಲ್ಲಿ, ಉಚಿತ ವೀಕ್ಷಣೆ ಹೇಗೆ?
ಕರ್ನಾಟಕ ಮಳೆ ಅಪ್ಡೇಟ್:
ರಾಜ್ಯದಲ್ಲಿ ಇಂದಿನಿಂದ 3 ದಿನಗಳ ಕಾಲ ಮಳೆಯಾಗಲಿದ್ದು, ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ಇಂದು ಸಂಜೆಯಿಂದ ಮಳೆಯ ಆರ್ಭಟ ಶುರುವಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ತುಮಕೂರು ಜಿಲ್ಲೆಗಳಿಗೆ 3 ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್