ಏಷ್ಯಾ ಕಪ್ 2022 ಇಂದಿನಿಂದ (ಆಗಸ್ಟ್ 27) ಆರಂಭವಾಗಲಿದೆ. ಏಷ್ಯಾಕಪ್ ನ ಮೊದಲ ಪಂದ್ಯ ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ನಡುವೆ ನಡೆಯಲಿದೆ. ಇನ್ನು ಆಗಸ್ಟ್ 28 ರಂದು ಅಂದರೆ ನಾಳೆ ಭಾರತ ಮತ್ತು ಪಾಕಿಸ್ತಾನದ ನಡುವೆ ಹೈ-ವೋಲ್ಟೇಜ್ ಪಂದ್ಯ ಏರ್ಪಡಲಿದೆ. ಎರಡೂ ದೇಶಗಳ ಜನರು ಸೇರಿದಂತೆ ವಿಶ್ವದಾದ್ಯಂತದ ಕ್ರಿಕೆಟ್ ಅಭಿಮಾನಿಗಳು ಈ ಪಂದ್ಯಕ್ಕಾಗಿ ಕಾಯುತ್ತಿದ್ದಾರೆ. ಎರಡೂ ತಂಡಗಳ ಆಟಗಾರರು ಕೂಡ ಪಂದ್ಯಕ್ಕೆ ಸಂಪೂರ್ಣ ಸಿದ್ಧರಾಗಿದ್ದಾರೆ.


COMMERCIAL BREAK
SCROLL TO CONTINUE READING

ಎರಡೂ ದೇಶಗಳ ಆಟಗಾರರು ಪಂದ್ಯ ಗೆಲ್ಲಲು ಬಿರುಸಿನ ಅಭ್ಯಾಸ ನಡೆಸುತ್ತಿದ್ದಾರೆ. ಈ ಮಧ್ಯೆ, ಭಾರತ Vs ಪಾಕಿಸ್ತಾನ ಪಂದ್ಯವನ್ನು ವೀಕ್ಷಿಸಲು ಬಯಸುವ ಕೆಲವು ಜನರಿಗೆ ಚಾನಲ್ ಅಥವಾ ಅಪ್ಲಿಕೇಶನ್‌ಗಳ ಚಂದಾದಾರಿಕೆ ಬಗ್ಗೆ ತಿಳಿದಿರುವುದಿಲ್ಲ. ಹೀಗಾಗಿ ಈ ಸುದ್ದಿಯಲ್ಲಿ ನೀವು ಭಾರತ ಮತ್ತು ಪಾಕಿಸ್ತಾನ ಪಂದ್ಯವನ್ನು ಹೇಗೆ ಉಚಿತವಾಗಿ ವೀಕ್ಷಿಸಬಹುದು ಎಂಬುದನ್ನು ತಿಳಿಸಿಕೊಡುತ್ತೇವೆ. 


ಇದನ್ನೂ ಓದಿ: Asia Cup 2022 : ರೋಹಿತ್‌ ಜೊತೆ ಓಪನರ್ ಆಗಿ ರಾಹುಲ್ ಅಲ್ಲ ಈ ಆಟಗಾರನಿಗೆ ಚಾನ್ಸ್! 


ಭಾರತ ಮತ್ತು ಪಾಕಿಸ್ತಾನದ ಪಂದ್ಯವನ್ನು ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ. ಭಾರತ ಮತ್ತು ಪಾಕ್ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಭಾನುವಾರ ಸಂಜೆ 7:30ಕ್ಕೆ ಆರಂಭವಾಗಲಿದೆ. ಹಾಟ್‌ಸ್ಟಾರ್ ಆ್ಯಪ್ ಅಥವಾ ಸ್ಟಾರ್ ಸ್ಪೋರ್ಟ್ಸ್‌ಗೆ ಚಂದಾದಾರಿಕೆಯನ್ನು ಹೊಂದಿಲ್ಲದವರು ಉಚಿತ DCH (DD ಫ್ರೀ ಡಿಶ್) ನಲ್ಲಿ DD ಸ್ಪೋರ್ಟ್ಸ್ ಚಾನೆಲ್‌ನಲ್ಲಿ ಭಾರತ Vs ಪಾಕಿಸ್ತಾನ ಪಂದ್ಯವನ್ನು ಉಚಿತವಾಗಿ ವೀಕ್ಷಿಸಬಹುದು.


ಭಾರತ ಮತ್ತು ಪಾಕಿಸ್ತಾನ ಪಂದ್ಯವು ಆಗಸ್ಟ್ 28 ರಂದು ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ರಾತ್ರಿ 7.30 ಕ್ಕೆ ನಡೆಯಲಿದೆ. ಏಷ್ಯಾ ಕಪ್ 2022 ರ ಇಂಡಿಯಾ Vs ಪಾಕ್ ಪಂದ್ಯವನ್ನು ಹಾಟ್‌ಸ್ಟಾರ್, ಸ್ಟಾರ್ ಸ್ಪೋರ್ಟ್ಸ್ ಮತ್ತು ಡಿಡಿ ಸ್ಪೋರ್ಟ್ಸ್‌ನಲ್ಲಿ ನೋಡಬಹುದು.


ಏಷ್ಯಾಕಪ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್ , ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್ 


ಇದನ್ನೂ ಓದಿ: Pro Kabaddi League ಪ್ರಾರಂಭಕ್ಕೆ ಡೇಟ್ ಫಿಕ್ಸ್: ಈ ನಗರಗಳಲ್ಲಿ ನಡೆಯಲಿದೆ ಸೀಸನ್-9 ಪಂದ್ಯಗಳು


ಪಾಕಿಸ್ತಾನ ತಂಡ: ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್ (ಉಪನಾಯಕ), ಆಸಿಫ್ ಅಲಿ, ಫಖರ್ ಜಮಾನ್, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಮೊಹಮ್ಮದ್ ವಾಸಿಮ್ ಜೂನಿಯರ್ ., ನಸೀಮ್ ಶಾ, ಶಹನವಾಜ್ ಧನಿ, ಉಸ್ಮಾನ್ ಖಾದಿರ್ ಮತ್ತು ಮೊಹಮ್ಮದ್ ಹಸ್ನೇನ್. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.