ಭಾರತದ ಎರಡನೇ ಸೂಪರ್-8 ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಉತ್ತಮ ಆರಂಭದ ಆಟವನ್ನು  ಆಡುವ ಮೂಲಕ   ಕಿಂಗ್ ಕೊಹ್ಲಿ ವಿಶ್ವಕಪ್ ನಲ್ಲಿ  ಬ್ಯಾಟ್ ಹಿಡಿದು  ಮತ್ತೊಂದು ಸಾಧನೆ ಮಾಡಿದರು. 


COMMERCIAL BREAK
SCROLL TO CONTINUE READING

T20 ವಿಶ್ವಕಪ್ 2024 ರ 47 ನೇ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶವನ್ನು ಎದುರಿಸಿತು. ಈ ಪಂದ್ಯದಲ್ಲಿ ಭಾರತ ತಂಡದ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಉತ್ತಮ ಆರಂಭ ನೀಡಿದರು. ಈ ಮೂಲಕ ವಿರಾಟ್ ಕೊಹ್ಲಿ ವಿಶ್ವಕಪ್ ನಲ್ಲಿ ಮತ್ತೊಂದು ಸಾಧನೆ ಮಾಡಿದರು.


ಇದನ್ನು ಓದಿ :  ಟೀಂ ಇಂಡಿಯಾದ ಮುಂದಿನ ನಾಯಕ ಈ ಸ್ಫೋಟಕ ಬ್ಯಾಟರ್: ರೋಹಿತ್ ಬಳಿಕ ಮತ್ತೆ ಆರಂಭಿಕನಿಗೆ ಕ್ಯಾಪ್ಟನ್ಸಿ ನೀಡಿದ BCCI!


ಈ ಪಂದ್ಯದಲ್ಲಿ ಬಾಂಗ್ಲಾದೇಶ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು, ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ, ಆರಂಭಿಕ ಆಟಗಾರರಾದ ಕೊಹ್ಲಿ-ರೋಹಿತ್ ಶರ್ಮಾ ಜೋಡಿ ಭಾರತ ತಂಡಕ್ಕೆ ಅದ್ಭುತ ಆರಂಭ ನೀಡಿತು. ಮೊದಲ ಆರಂಭ ಆಟದಲ್ಲಿ  ನಾಲ್ಕನೇ ಓವರ್ ಮುಗಿಯುವ ಮುನ್ನ ಈ ಜೋಡಿ ಮೊದಲ ವಿಕೆಟ್‌ಗೆ 39 ರನ್‌ಗಳ ಜೊತೆಯಾಟವಾಡಿದರು. 


11 ಎಸೆತಗಳಲ್ಲಿ 3 ಬೌಂಡರಿ ಹಾಗೂ ಒಂದು ಸಿಕ್ಸರ್ ಹೊಡೆದು ರೋಹಿತ್ ಶರ್ಮಾ  23 ರನ್ ಗಳಿಸಿ ಔಟಾದರು,  ಕೊಹ್ಲಿ 37 ರನ್‌ಗಳ ಇನ್ನಿಂಗ್ಸ್‌ನಲ್ಲಿ 1 ಬೌಂಡರಿ ಮತ್ತು 3 ಸಿಕ್ಸರ್‌ಗಳನ್ನು ಹೊಡೆದರು ಈ ಮೂಲಕ ವಿಶ್ವಕಪ್‌ನಲ್ಲಿ ಮತ್ತೊಂದು ದಾಖಲೆ ಬರೆದರು. ಟಿ20 ಮತ್ತು ಏಕದಿನ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡು, 3000 ರನ್ ಗಳಿಸಿದ ಮೊದಲ ಆಟಗಾರ ಎಂಬ ದಾಖಲೆ ನಿರ್ಮಿಸಿದರು.


ಇದನ್ನು ಓದಿ : ಕಾಲಿಗೆ ನಮಸ್ಕರಿಸಿದ ಸಿಟಿ ರವಿ ಕಿವಿ ಹಿಂಡಿ, ಬೆನ್ನು ತಟ್ಟಿ ಆಶೀರ್ವಾದ ಮಾಡಿದ ಸಿಎಂ ಸಿದ್ದರಾಮಯ್ಯ


ICC T20-ODI ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಲ್ಲಿ ಮೊದಲ ಸ್ಥಾನದಲ್ಲಿ ವಿರಾಟ್ ಕೊಹ್ಲಿ 3000+ ರನ್ , ರೋಹಿತ್ ಶರ್ಮಾ  2637 ರನ್, ಡೇವಿಡ್ ವಾರ್ನರ್  2502, ಸಚಿನ್ ತೆಂಡೂಲ್ಕರ್ 2278,  ಕುಮಾರ್ ಸಂಗಕ್ಕಾರ  2193 ಕ್ರಮವಾಗಿ 5 ಸ್ಥಾನಗಳಲ್ಲಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.