olympics 2024: ವಿಶ್ವದ ಅತಿ ದೊಡ್ಡ ಕ್ರೀಡಾಕೂಟವೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಒಲಿಂಪಿಕ್ ಕ್ರೀಡಾಕೂಟ ಇತ್ತೀಚೆಗೆ ಮುಕ್ತಾಯಗೊಂಡಿದೆ. ಪ್ರಪಂಚದಾದ್ಯಂತದ ಕ್ರೀಡಾಪಟುಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿದರು. ಆದರೆ ಭಾರತದ ವಿಷಯಕ್ಕೆ ಬಂದರೆ ಒಬ್ಬ ಅಥ್ಲೀಟ್ ಕೂಡ ಚಿನ್ನದ ಪದಕ ಗೆದ್ದಿಲ್ಲ. ಆದರೆ ಒಲಂಪಿಕ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಕ್ರೀಡಾಪಟುವಿಗೆ ಎಷ್ಟು ಹಣ ಸಿಗುತ್ತದೆ? ಅವರಿಗೆ ಭಾರತ ಸರ್ಕಾರದಿಂದ ಯಾವ ಸೌಲಭ್ಯಗಳನ್ನು ನೀಡಲಾಗುತ್ತದೆ? ಈ ಪ್ರಶ್ನೆಗಳನ್ನು ಅನೇಕರು ಕೇಳುತ್ತಾರೆ. ಇಂದು ನಾವು ಈ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದೇವೆ..
ಒಲಿಂಪಿಕ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಕ್ರೀಡಾಪಟುಗಳಿಗೆ ಐಒಸಿ ಯಾವುದೇ ಆರ್ಥಿಕ ಬಹುಮಾನ ನೀಡುವುದಿಲ್ಲ. ಭಾರತ ಸರ್ಕಾರವು ಚಿನ್ನದ ಪದಕ ವಿಜೇತ ಕ್ರೀಡಾಪಟುವಿಗೆ ಬಹುಮಾನದ ಹಣವನ್ನು ನೀಡುತ್ತದೆ. ಜೊತೆಗೆ ಇನ್ನೂ ಅನೇಕ ಸೌಲಭ್ಯಗಳನ್ನು ಒದಗಿಸಲಾಗಿದೆ.. ಈ ಬಗ್ಗೆ ಮಾಹಿತಿ ನೀಡಿದ ಅಶುತೋಷ್ ಕುಮಾರ್ ಸಿಂಗ್ "ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆಲ್ಲುವುದು ಯಾವುದೇ ಕ್ರೀಡಾಪಟುವಿಗೆ ದೊಡ್ಡ ಗೌರವ. ಹೀಗಾಗಿ ಇದಕ್ಕೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದಿಂದ ದೊಡ್ಡ ಪ್ರಶಸ್ತಿಗಳು ಮತ್ತು ಬಹುಮಾನಗಳನ್ನು ಸಹ ನೀಡಲಾಗುತ್ತದೆ. ಭಾರತದಲ್ಲಿ ಒಲಿಂಪಿಕ್ ವಿಜೇತರಿಗೆ ಕೋಟ್ಯಂತರ ರೂಪಾಯಿ ನಗದು ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ತಮ್ಮ ವಿಜೇತರಿಗೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಮತ್ತು ಇತರ ಪ್ರಯೋಜನಗಳನ್ನು ನೀಡುತ್ತವೆ ಎಂದು ಹೇಳಿದ್ದಾರೆ..
ಇದನ್ನೂ ಓದಿ-ಗರ್ಲ್ ಫ್ರೆಂಡ್ ಬಗ್ಗೆ ಮಾತನಾಡಿದ ನೀರಜ್ ಚೋಪ್ರಾ : ಮಗನ ಮದುವೆ ಯಾವಾಗ ಎನ್ನುವುದನ್ನು ಸ್ಪಷ್ಟವಾಗಿ ಹೇಳಿದ ತಂದೆ
ಅಲ್ಲದೇ "ಭಾರತದಲ್ಲಿ ಒಲಿಂಪಿಕ್ ಚಿನ್ನದ ಪದಕ ವಿಜೇತರಿಗೆ 75 ಲಕ್ಷದಿಂದ 3 ಕೋಟಿ ರೂಪಾಯಿ ನೀಡಲಾಗುತ್ತದೆ... ಇದರೊಂದಿಗೆ ಕ್ರೀಡಾಪಟುಗಳಿಗೆ ಕೇಂದ್ರ ಮತ್ತು ರಾಜ್ಯದಲ್ಲಿ ಸರ್ಕಾರಿ ಉದ್ಯೋಗವನ್ನೂ ನೀಡಲಾಗುತ್ತದೆ. ಸರ್ಕಾರವು ಆಟಗಾರರಿಗೆ ಉಚಿತ ವಸತಿ, ಕೃಷಿ ಭೂಮಿ ಮತ್ತು ಇತರ ಸೌಲಭ್ಯಗಳನ್ನು ನೀಡುತ್ತದೆ. ಈ ಪ್ರಶಸ್ತಿಗಳಲ್ಲದೆ, ವಿಜೇತರಿಗೆ ಜೀವನಪರ್ಯಂತ ಪಿಂಚಣಿಯನ್ನೂ ನೀಡಲಾಗುತ್ತದೆ" ಎಂದು ಅಶುತೋಷ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.