IND vs AUS: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಪಂದ್ಯಗಳ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿ ನಾಳೆಯಿಂದ ಆರಂಭವಾಗಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯ ನಾಳೆ ನಾಗ್ಪುರದಲ್ಲಿ ಬೆಳಗ್ಗೆ 9:30 ರಿಂದ ನಡೆಯಲಿದೆ. ಆಸ್ಟ್ರೇಲಿಯಾ ವಿರುದ್ಧದ ಈ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಟೀಂ ಇಂಡಿಯಾ ಪಾಲಿಗೆ ಬಹಳ ಮುಖ್ಯವಾಗಿದೆ. ಭಾರತ ಈ ವರ್ಷದ ಜೂನ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯವನ್ನು ಆಡಬೇಕಾದರೆ, ಆಸ್ಟ್ರೇಲಿಯ ವಿರುದ್ಧ ಈ ಟೆಸ್ಟ್ ಸರಣಿಯನ್ನು ಶತಾಯ ಗತಾಯ ಗೆಲ್ಲಲೇಬೇಕು. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಯಾವ ಸಮೀಕರಣದ ಮೂಲಕ ಫೈನಲ್ ತಲುಪಬಹುದು ನೋಡೋಣ. 


COMMERCIAL BREAK
SCROLL TO CONTINUE READING

ಭಾರತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌  ಫೈನಲ್‌ ಪ್ರವೇಶ ಹೇಗೆ? :
ಭಾರತ ಈ ವರ್ಷದ ಜೂನ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂತಿಮ ಪಂದ್ಯವನ್ನು ಆಡಬೇಕಾದರೆ, ಆಸ್ಟ್ರೇಲಿಯ ವಿರುದ್ಧ ಈ ಟೆಸ್ಟ್ ಸರಣಿಯನ್ನು ಗೆಲ್ಲಲೇಬೇಕು. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂತಿಮ ಪಂದ್ಯವನ್ನು ಆಡಲು, ಭಾರತವು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯನ್ನು 4-0, 3-0, 3-1 ಅಥವಾ 2-0 ಅಂತರದಿಂದ ಗೆಲ್ಲಬೇಕು. ಟೆಸ್ಟ್ ಮಾದರಿಯಲ್ಲಿ ಆಸ್ಟ್ರೇಲಿಯಾವನ್ನು ಅಪಾಯಕಾರಿ ತಂಡ ಎಂದೇ ಹೇಳಲಾಗುತ್ತದೆ. ಪ್ರಸ್ತುತ ಐಸಿಸಿ ಶ್ರೇಯಾಂಕದಲ್ಲಿ ಆಸ್ಟ್ರೇಲಿಯಾ ವಿಶ್ವದ ನಂ.1 ಟೆಸ್ಟ್ ತಂಡವಾಗಿದ್ದು, ಭಾರತ   2ನೇ ಸ್ಥಾನದಲ್ಲಿದೆ. 


ಇದನ್ನೂ ಓದಿ :  ಟಿ 20 ಕ್ರಿಕೆಟ್ ಗೆ ವಿದಾಯ ಘೋಷಿಸಿದ ಆಸ್ಟ್ರೇಲಿಯಾದ ಈ ಸ್ಟಾರ್ ಆಟಗಾರ..!


ಪೂರ್ಣ ಸಮೀಕರಣ ಇಲ್ಲಿದೆ  :
ಪ್ರಸ್ತುತ ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಪಾಯಿಂಟ್‌ಗಳ ಪಟ್ಟಿಯನ್ನು ನೋಡುವುದಾದರೆ 75.56 ಶೇಕಡಾ ಅಂಕಗಳೊಂದಿಗೆ, ಆಸ್ಟ್ರೇಲಿಯಾ ನಂಬರ್-1 ಸ್ಥಾನದಲ್ಲಿದೆ. ಭಾರತ 58.93 ಶೇಕಡಾ ಅಂಕಗಳೊಂದಿಗೆ 2 ನೇ ಸ್ಥಾನದಲ್ಲಿದೆ. ಆಸ್ಟ್ರೇಲಿಯ ವಿರುದ್ಧದ ಟೆಸ್ಟ್‌ ಸರಣಿಯನ್ನು 4-0, 3-0, 3-1 ಅಥವಾ 2-0 ಅಂತರದಲ್ಲಿ ಗೆದ್ದರೆ ಭಾರತ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ಗೆ ಲಗ್ಗೆ ಇಡಲಿದೆ. ಆದರೆ ಆಸ್ಟ್ರೇಲಿಯಾ ಭಾರತವನ್ನು 2-0, 2-1, 3-0, 3-1, 4-0 ಸೆಟ್‌ಗಳಿಂದ ಸೋಲಿಸಿದರೆ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ ರೇಸ್ ನಿಂದ ಇಂಡಿಯಾ ಹೊರಗುಳಿಯಲಿದೆ.   


ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸರಣಿಯಲ್ಲಿ ಗೆಲುವು ಯಾರಿಗೆ ? 
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಹೋಗಲು ಆಸ್ಟ್ರೇಲಿಯಾ ತಂಡವು ಕನಿಷ್ಠ ಒಂದು ಟೆಸ್ಟ್ ಪಂದ್ಯವನ್ನು ಡ್ರಾ ಮಾಡಬೇಕಾಗುತ್ತದೆ.  2004 ರಿಂದ ಆಸ್ಟ್ರೇಲಿಯಾ ಭಾರತದಲ್ಲಿ ಯಾವುದೇ ಟೆಸ್ಟ್ ಸರಣಿಯನ್ನು ಗೆದ್ದಿಲ್ಲ. ಆರು ವರ್ಷಗಳ ನಂತರ ಭಾರತದ ನೆಲದಲ್ಲಿ ಉಭಯ ದೇಶಗಳ ನಡುವೆ ಟೆಸ್ಟ್ ಸರಣಿ ನಡೆಯುತ್ತಿದೆ. 2017 ರಲ್ಲಿ ಭಾರತದಲ್ಲಿ ಆಡಿದ ಕೊನೆಯ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ 2-1 ರಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿತ್ತು. ಈ ಬಾರಿ ಕೂಡಾ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯನ್ನು ಗೆಲ್ಲುವ ಉತ್ಸಾಹದಲ್ಲಿದೆ. 


ಇದನ್ನೂ ಓದಿ : IND vs AUS ಟೆಸ್ಟ್‌ನಲ್ಲಿ ಟೀಂ ಇಂಡಿಯಾ ವಿಕೆಟ್‌ಕೀಪರ್ ಇವರೇ.! ಪಂತ್‌ ಸ್ಥಾನ ತುಂಬುತ್ತಾರಾ ಈ ಆಟಗಾರ?


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.