ನವದೆಹಲಿ: ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಮತ್ತೊಮ್ಮೆ ಬಹುದೊಡ್ಡ ಮುಖಭಂಗ ಅನುಭವಿಸಿದೆ. ಭಾರತದ ವಿರುದ್ಧ ಹೀನಾಯ ಸೋಲಿನಿಂದ ಕಂಗೆಟ್ಟು ಹೋಗಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಐಸಿಸಿಗೆ ದೂರು ನೀಡಿದೆ. ಹೌದು, ವಿಶ್ವಕಪ್ ಟೂರ್ನಿಯಲ್ಲಿ ಭಾರತವನ್ನು ಸೋಲಿಸುವ ಪಾಕ್ ಆಸೆ ನೆರವೇರಿಲ್ಲ. ಸತತ 8ನೇ ಸೋಲು ಕಂಡಿರುವ ಪಾಕಿಸ್ತಾನ ತಂಡವು ಹತಾಶೆಗೊಳಗಾಗಿದೆ. ಹೀಗಾಗಿ ಅದು ಐಸಿಸಿಗೆ ದೂರು ಸಲ್ಲಿಸಿದೆ.
ಭಾರತ ಸರ್ಕಾರದಿಂದ ಪಾಕಿಸ್ತಾನಿ ಪತ್ರಕರ್ತರಿಗೆ ವೀಸಾ ವಿಳಂಬ ಮತ್ತು ವಿಶ್ವಕಪ್ ಟೂರ್ನಿಗಾಗಿ ಪಾಕಿಸ್ತಾನ ಅಭಿಮಾನಿಗಳಿಗೆ ವೀಸಾ ನೀತಿಯ ಅನುಪಸ್ಥಿತಿಯ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಐಸಿಸಿಗೆ ಮತ್ತೊಂದು ಔಪಚಾರಿಕ ದೂರು ಸಲ್ಲಿಸಿದೆ. ಅಕ್ಟೋಬರ್ 14ರಂದು ನಡೆದ ಭಾರತ ಮತ್ತು ಪಾಕಿಸ್ತಾನ ಪಂದ್ಯದ ವೇಳೆ ಪಾಕಿಸ್ತಾನ ತಂಡವನ್ನು ಗುರಿಯಾಗಿಟ್ಟುಕೊಂಡು ಅನುಚಿತ ವರ್ತನೆಯ ಬಗ್ಗೆ ಪಿಸಿಬಿ ದೂರು ದಾಖಲಿಸಿದೆ. PCB Media ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ.
The Pakistan Cricket Board (PCB) has lodged another formal protest with the ICC over delays in visas for Pakistani journalists and the absence of a visa policy for Pakistan fans for the ongoing World Cup 2023.
The PCB has also filed a complaint regarding inappropriate conduct…
— PCB Media (@TheRealPCBMedia) October 17, 2023
ಇದನ್ನೂ ಓದಿ: ವಿಶ್ವಕಪ್’ನಲ್ಲಿ ಇತಿಹಾಸ ಸೃಷ್ಟಿಸುವತ್ತ ರೋಹಿತ್ ಹೆಜ್ಜೆ! ಈ ದಾಖಲೆ ಬರೆಯಲಿರುವ ಮೊದಲ ಭಾರತೀಯ ಕ್ರಿಕೆಟಿಗ ಇವರೇ
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕಳೆದ ಶನಿವಾರ(ಅ.14) ನಡೆದ ಭಾರತ-ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡವು 7 ವಿಕೆಟ್‌ಗಳಿಂದ ಪಾಕಿಸ್ತಾನಕ್ಕೆ ಮಣ್ಣುಮುಕ್ಕಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಪಾಕ್ ಕೇವಲ 191 ರನ್ಗಳಿಗೆ ಆಲೌಟ್ ಆಗಿತ್ತು. ನಂತರ ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಕೇವಲ 31 ಓವರ್‌ಗಳಲ್ಲಿ ಗೆಲುವಿನ ಗುರಿ ಮುಟ್ಟಿ ಅಜೇಯ ಜಯದ ಓಟವನ್ನು ಮುಂದುವರೆಸಿದೆ. ಟೀಂ ಇಂಡಿಯಾದ ಗೆಲುವಿನ ನಂತರ ಹತಾಶೆಗೊಳಗಾಗಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಐಸಿಸಿಗೆ ದೂರು ನೀಡಿದೆ.
ವಿಶ್ವಕಪ್ ಪಂದ್ಯಾವಳಿ ವೀಕ್ಷಿಸಲು ಪಾಕ್ ತಂಡದ ಅಭಿಮಾನಿಗಳಿಗೆ ಹಾಗೂ ಪಾಕ್ ಪತ್ರಕರ್ತರಿಗೆ ಭಾರತದ ವೀಸಾ ನೀಡಿಲ್ಲ. ಹೀಗಾಗಿ ಭಾರತ ಸರ್ಕಾರದಿಂದ ಆಗುತ್ತಿರುವ ವೀಸಾ ವಿಳಂಬ ಮತ್ತು ವೀಸಾ ನೀತಿಯ ಅನುಪಸ್ಥಿತಿಯ ಬಗ್ಗೆ ಹಾಗೂ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಾಕಿಸ್ತಾನ ತಂಡದ ವಿರುದ್ಧ ಭಾರತದ ಅಭಿಮಾನಿಗಳು ತೋರಿದ ಅನುಚಿತ ವರ್ತನೆಯ ಬಗ್ಗೆ ಪಿಸಿಬಿಯು ಐಸಿಸಿಗೆ ದೂರು ನೀಡಿದೆ. ಇದಲ್ಲದೇ ಪಾಕಿಸ್ತಾನದ ತಂಡದ ನಿರ್ದೇಶಕ ಮಿಕ್ಕಿ ಆರ್ಥರ್ ಕೂಡ ಬೇಸರ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ: ICC World Cup 2023: ಲಾರಾ ದಾಖಲೆ ಮುರಿಯುವ ಹೊಸ್ತಿಲಿನಲ್ಲಿ ಕಿಂಗ್ ಕೊಹ್ಲಿ..!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.