ನವದೆಹಲಿ: ಕೂಲ್ ಕ್ಯಾಪ್ಟನ್ ಖ್ಯಾತಿಯ ಎಂ.ಎಸ್.ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದು ಇಂದಿಗೆ ಬರೋಬ್ಬರಿ 10 ವರ್ಷ ಕಳೆದಿವೆ. 2013ರ ಜೂನ್ 23ರಂದು ಬ್ರಿಟನ್ನ ಎಡ್ಜ್ಬಾಸ್ಟನ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಭರ್ಜರಿ ಜಯಭೇರಿ ಭಾರಿಸಿತ್ತು.
ಈ ಮಹತ್ವದ ಪಂದ್ಯದಲ್ಲಿ ಭಾರತದ ವಿರುದ್ಧ ಟಾಸ್ ಗೆದ್ದಿದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ದುಕೊಂಡಿತ್ತು. ಅದರಂತೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 129 ರನ್ಗಳ ಸಾಧಾರಣ ಮೊತ್ತ ಗಳಿಸಿತ್ತು.
ಇದನ್ನೂ ಓದಿ: ಶುಭ್ಮನ್ ಅಲ್ಲ… ಟೆಸ್ಟ್’ನಲ್ಲಿ 7 ಶತಕ ಸಿಡಿಸಿದ ಈ ಆಟಗಾರನೇ ರೋಹಿತ್ ಜೊತೆ ಆರಂಭಿಕರಾಗಿ ಕಣಕ್ಕಿಳಿಯೋದು!
#OnThisDay in 2️⃣0️⃣1️⃣3️⃣
The @msdhoni-led #TeamIndia, beat England to lift the ICC Champions Trophy. 🏆
MS Dhoni became the first Captain (in Men's cricket) to win all three ICC trophies in limited-overs cricket 👏🏻👏🏻 pic.twitter.com/x4le09coFM
— BCCI (@BCCI) June 23, 2023
ಭಾರತದ ಪರ ವಿರಾಟ್ ಕೊಹ್ಲಿ (43), ರವೀಂದ್ರ ಜಡೇಜಾ (ಅಜೇಯ 33) ಮತ್ತು ಶಿಖರ್ ಧವನ್ (31) ರನ್ ಗಳಿಸಿದ್ದರು. ಇಂಗ್ಲೆಂಡ್ ಪರ ಬೌಲಿಂಗ್ನಲ್ಲಿ ರವಿ ಬೋಪಾರ 3 ವಿಕೆಟ್ ಕಬಳಿಸಿ ಮಿಂಚಿದ್ದರು. ಜೇಮ್ಸ್ ಆಂಡರ್ಸನ್, ಸ್ಟುವರ್ಟ್ ಬ್ರಾಡ್ ಮತ್ತು ಜೇಮ್ಸ್ ಟ್ರೆಡ್ವೆಲ್ ತಲಾ ಒಂದೊಂದು ವಿಕೆಟ್ ಗಳಿಸಿದ್ದರು.
130 ರನ್ಗಳ ಗುರಿ ಬೆನ್ನತ್ತಿದ್ದ ಇಂಗ್ಲೆಂಡ್ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 124 ರನ್ ಗಳಿಸಿ 5 ರನ್ ಅಂತರದಿಂದ ಸೋಲು ಕಂಡಿತ್ತು. ಇಂಗ್ಲೆಂಡ್ ಪರ ಇಯಾನ್ ಮಾರ್ಗನ್ (33), ರವಿ ಬೋಪಾರ (30) ಮತ್ತು ಜೊನಾಥನ್ ಟ್ರಾಟ್ (20) ರನ್ ಗಳಿಸಿದ್ದರು. ಭಾರತದ ಪರ ಬೌಲಿಂಗ್ನಲ್ಲಿ ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್ ಮತ್ತು ಇಶಾಂತ್ ಶರ್ಮಾ ತಲಾ 2 ವಿಕೆಟ್ ಗಳಿಸಿ ಮಿಂಚಿದ್ದರು. ಉತ್ತಮ ಆಲ್ರೌಡಂರ್ ಪ್ರದರ್ಶನ ನೀಡಿದ ರವೀಂದ್ರ ಜಡೇಜಾ ಪಂದ್ಯಶ್ರೇಷ್ಠ ಪಶಸ್ತಿ ಪಡೆದುಕೊಂಡರೆ, ಶಿಖರ್ ಧವನ್ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನಾಗಿದ್ದರು.
ಇದನ್ನೂ ಓದಿ: ಶುಭ್ಮನ್ ಅಲ್ಲ… ಟೆಸ್ಟ್’ನಲ್ಲಿ 7 ಶತಕ ಸಿಡಿಸಿದ ಈ ಆಟಗಾರನೇ ರೋಹಿತ್ ಜೊತೆ ಆರಂಭಿಕರಾಗಿ ಕಣಕ್ಕಿಳಿಯೋದು!
On this Day, MS Dhoni become the only captain & player to have all 3 white ball ICC trophies❤️🔥pic.twitter.com/ysvxiMeU0P
— msd_stan (@bdrijalab) June 23, 2023
ಇನ್ನು ಈ ಪಂದ್ಯಕ್ಕೆ ಮಳೆ ಅಡಚಣೆಯಾಗಿತ್ತು. ಹೀಗಾಗಿ 6 ತಾಸು ವಿಳಂಬವಾಗಿ ಆರಂಭವಾದ ಪಂದ್ಯವನ್ನು 20 ಓವರ್ಗಳಿಗೆ ಸೀಮಿತಗೊಳಿಸಲಾಗಿತ್ತು. ಟೀಂ ಇಂಡಿಯಾ ಚಾಂಪಿಯನ್ ಟ್ರೋಫಿ ಗೆದ್ದ 10 ವರ್ಷಗಳ ಸವಿ ನೆನಪುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಕ್ರೀಡಾಭಿಮಾನಿಗಳು ಮೆಲಕು ಹಾಕಿದ್ದಾರೆ. 'ಕೂಲ್ ಕ್ಯಾಪ್ಟನ್' ಧೋನಿ ನಾಯಕತ್ವ ಮತ್ತು ಟೀಂ ಇಂಡಿಯಾ ಆಟಗಾರರ ಅತ್ಯುತ್ತಮ ಪ್ರದರ್ಶನವನ್ನು ಸ್ಮರಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.