Ind vs Aus: ಟೀಂ ಇಂಡಿಯಾಗೆ 265 ರನ್‌ಗಳ ಟಾರ್ಗೆಟ್‌ ನೀಡಿದ ಆಸ್ಟ್ರೇಲಿಯಾ

ICC Champions Trophy 2025: ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ ಪಂದ್ಯದಲ್ಲಿ ಟೀಂ ಇಂಡಿಯಾಗೆ ಆಸ್ಟ್ರೇಲಿಯಾ ತಂಡವು 265 ರನ್‌ಗಳ ಟಾರ್ಗೆಟ್‌ ನೀಡಿದೆ.  

Written by - Puttaraj K Alur | Last Updated : Mar 5, 2025, 12:04 AM IST
  • ನಾಯಕ ಸ್ಟೀವ್ ಸ್ಮಿತ್ ಮತ್ತು ಅಲೆಕ್ಸ್ ಕ್ಯಾರಿ ಆಕರ್ಷಕ ಅರ್ಧಶತಕ
  • ಟೀಂ ಇಂಡಿಯಾಗೆ 265 ರನ್‌ಗಳ ಟಾರ್ಗೆಟ್‌ ನೀಡಿದ ಆಸ್ಟ್ರೇಲಿಯಾ
  • ಗೆಲುವು ಸಾಧಿಸುತ್ತಾ ರೋಹಿತ್‌ ಶರ್ಮಾ ಪಡೆ?
Ind vs Aus: ಟೀಂ ಇಂಡಿಯಾಗೆ 265 ರನ್‌ಗಳ ಟಾರ್ಗೆಟ್‌ ನೀಡಿದ ಆಸ್ಟ್ರೇಲಿಯಾ
ಭಾರತಕ್ಕೆ 265 ರನ್‌ ಟಾರ್ಗೆಟ್‌!

ICC Champions Trophy 2025: ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ ಪಂದ್ಯದಲ್ಲಿ ಟೀಂ ಇಂಡಿಯಾಗೆ ಆಸ್ಟ್ರೇಲಿಯಾ ತಂಡವು 265 ರನ್‌ಗಳ ಟಾರ್ಗೆಟ್‌ ನೀಡಿದೆ. ಟಾಸ್‌ ಗೆದ್ದ ಆಸೀಸ್‌ ನಾಯಕ ಸ್ಟೀವನ್ ಸ್ಮಿತ್ ಬ್ಯಾಟಿಂಗ್‌ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ 49.3 ಓವರ್‌ಗಳಲ್ಲಿ 264 ರನ್‌ಗಳಿಗೆ ಆಲೌಟ್ ಆಯಿತು. ಸ್ಟೀವ್ ಸ್ಮಿತ್ ಮತ್ತು ಅಲೆಕ್ಸ್ ಕ್ಯಾರಿ ಆಕರ್ಷಕ ಅರ್ಧಶತಕ ಸಿಡಿಸುವ ಮೂಲಕ ತಂಡಕ್ಕೆ ನೆರವಾದರು.

Add Zee News as a Preferred Source

ಆರಂಭಕರಾಗಿ ಕಣ್ಣಕ್ಕಿಳಿದ ಕೂಪರ್ ಕೊನೊಲಿ ಶೂನ್ಯಕ್ಕೆ ಔಟಾದರು. ಮೊಹಮ್ಮದ್‌ ಶಮಿ ಆಸೀಸ್‌ಗೆ ಆರಂಭಿಕ ಆಘಾತ ನೀಡಿದರು. ಬಳಿಕ ಟ್ರಾವಿಡ ಹೆಡ್‌ ಸ್ಫೋಟಕ ಬ್ಯಾಟಿಂಗ್‌ ಮಾಡಿ ತಂಡಕ್ಕೆ ನೆರವಾದರು. 33 ಎಸೆತಗಳಲ್ಲಿ 5 ಬೌಂಡರಿ 2 ಭರ್ಜರಿ ಸಿಕ್ಸರ್ ಇದ್ದ 39 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ಹೆಡ್, ವರುಣ್ ಚಕ್ರವರ್ತಿ ಬೌಲಿಂಗ್‌ನಲ್ಲಿ ಶುಭಮನ್‌ ಗಿಲ್‌ಗೆ ಕ್ಯಾಚ್‌ ನೀಡಿ ನಿರ್ಗಮಿಸಿದರು.   

ಇದನ್ನೂ ಓದಿ: India vs Australia LIVE SCORE, Champions Trophy 2025 semifinal: ಇಂದಿನ ಸೆಮಿಫೈನಲ್ ಪಂದ್ಯ ಮಳೆಯಿಂದಾಗಿ ರದ್ದಾದರೆ, ಯಾವ ತಂಡ ಫೈನಲ್ ಪ್ರವೇಶಿಸುತ್ತದೆ?

ಹೆಡ್  ನಿರ್ಗಮಿಸಿದ ಬಳಿಕ ನಾಯಕ ಸ್ಟೀವ್ ಸ್ಮಿತ್ ತಾಳ್ಮೆಯ ಬ್ಯಾಟಿಂಗ್ ಪ್ರದರ್ಶಿಸಿದರು. ಸ್ಮಿತ್‌ 4 ಬೌಂಡರಿ ಮತ್ತು 1 ಸಿಕ್ಸರ್‌ ಇದ್ದ 73 ರನ್ ಗಳಿಸಿದರೆ, ಮಾರ್ನಸ್ ಲ್ಯಾಬುಸ್ಚಾಗ್ನೆ 29 ರನ್ ಗಳಿಸಿದರು. ಜೋಸ್ ಇಂಗ್ಲಿಸ್ 11 ರನ್ ಗಳಿಸಿ ಔಟಾದರು. ನಂತರ ಬಂದ ಅಲೆಕ್ಸ್ ಕ್ಯಾರಿ 57 ಎಸೆತಗಳಲ್ಲಿ 8 ಬೌಂಡರಿ ಮತ್ತು 1 ಸಿಕ್ಸರ್‌ ಇದ್ದ 61 ರನ್ ಗಳಿಸುವ ಮೂಲಕ ಆಸ್ಟ್ರೇಲಿಯಾ ಸ್ಪರ್ಧಾತ್ಮಕ ಮೊತ್ತ ಕಲೆ ಹಾಕಲು ನೆರವಾದರು. ಕೊನೆಯಲ್ಲಿ ಬೆನ್ ದ್ವಾರ್ಶುಯಿಸ್ (19) ರನ್‌ ಗಳಿಸಿದರು. 

ಟೀಂ ಇಂಡಿಯಾ ಪರ ಮೊಹಮ್ಮದ್ ಶಮಿ 3 ವಿಕೆಟ್ ಪಡೆದು ಮಿಂಚಿದರೆ, ವರುಣ್ ಚಕ್ರವರ್ತಿ ಮತ್ತು ರವೀಂದ್ರ ಜಡೇಜಾ ತಲಾ 2 ವಿಕೆಟ್ ಕಬಳಿಸಿದರು. ಅಕ್ಷರ್ ಪಟೇಲ್ ಮತ್ತು ಹಾರ್ದಿಕ್ ಪಾಂಡ್ಯ ತಲಾ ಒಂದೊಂದು ವಿಕೆಟ್‌ ಪಡೆದರು.   

ಇದನ್ನೂ ಓದಿ: ಯಾವ ಅರಮನೆಗೂ ಕಡಿಮೆಯಿಲ್ಲ ಮಹಮ್ಮದ್ ಶಮಿ ಫಾರ್ಮ್ ಹೌಸ್ ! ಇಲ್ಲಿರುವ ಒಂದೊಂದು ಸವಲತ್ತು ಕೂಡಾ ಐಶಾರಾಮಿ

ಎರಡೂ ತಂಡಗಳ ಸ್ಕ್ವಾಡ್‌ ಈ ರೀತಿ ಇದೆ:

ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ.

ಆಸ್ಟ್ರೇಲಿಯಾ: ಸ್ಟೀವನ್ ಸ್ಮಿತ್ (ನಾಯಕ), ಕೂಪರ್ ಕಾನೊಲಿ, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಅಲೆಕ್ಸ್ ಕ್ಯಾರಿ, ಗ್ಲೆನ್ ಮ್ಯಾಕ್ಸ್‌ವೆಲ್, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಆಡಮ್ ಜಂಪಾ, ತನ್ವೀರ್ ಸಂಘ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News