Icc Champions Trophy: 3ನೇ ಪಂದ್ಯದಿಂದ ನಾಯಕ ಔಟ್, ಸೆಮಿಫೈನಲ್‌ಗೂ ಮುನ್ನ ತಂಡಕ್ಕೆ ಶಾಕ್‌..! ಅಸಲಿಗೆ ಆಗಿದ್ದೇನು..?

Champions trophy 2025 : ಸೆಮಿಫೈನಲ್‌ಗೆ ಮುನ್ನ ತಂಡ ದೊಡ್ಡ ಹಿನ್ನಡೆಯನ್ನು ಅನುಭವಿಸಿದೆ. ಮೂರನೇ ಮತ್ತು ಅಂತಿಮ ಪಂದ್ಯದಿಂದ ನಾಯಕನನ್ನೇ ಹೊರಗಿಡಲಾಗಿದೆ. ಸದ್ಯ ನಾಯಕತ್ವದ ಜವಾಬ್ದಾರಿ ಯಾರ ಹೆಗಲೇರಲಿದೆ..? ಬನ್ನಿ ಈ ಕುರಿತು ಸಂಪೂರ್ಣ ವಿವಿರ ತಿಳಿಯೋಣ..

Written by - Krishna N K | Last Updated : Mar 1, 2025, 05:46 PM IST
    • ಸೆಮಿಫೈನಲ್‌ಗೆ ಮುನ್ನ ತಂಡ ದೊಡ್ಡ ಹಿನ್ನಡೆಯನ್ನು ಅನುಭವಿಸಿದೆ.
    • ಮೂರನೇ ಮತ್ತು ಅಂತಿಮ ಪಂದ್ಯದಿಂದ ನಾಯಕನನ್ನೇ ಹೊರಗಿಡಲಾಗಿದೆ.
    • ಮಾರ್ಚ್ 1 ರಂದು ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ಮುಖಾಮುಖಿಯಾಗಲಿವೆ.
Icc Champions Trophy: 3ನೇ ಪಂದ್ಯದಿಂದ ನಾಯಕ ಔಟ್, ಸೆಮಿಫೈನಲ್‌ಗೂ ಮುನ್ನ ತಂಡಕ್ಕೆ ಶಾಕ್‌..! ಅಸಲಿಗೆ ಆಗಿದ್ದೇನು..?

South Africa vs England Playing 11 : 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್‌ಗೆ ಮೂರು ತಂಡಗಳನ್ನು ಅಧಿಕೃತವಾಗಿ ಎಂಟ್ರಿ ಕೊಟ್ಟಿವೆ.. ಗ್ರೂಪ್ 'ಎ' ನಿಂದ ಭಾರತ ಮತ್ತು ನ್ಯೂಜಿಲೆಂಡ್ ಸೆಮಿಫೈನಲ್‌ಗೆ ಅರ್ಹತೆ ಪಡೆದಿವೆ. ಫೆಬ್ರವರಿ 28, ಶುಕ್ರವಾರದಂದು ಆಸ್ಟ್ರೇಲಿಯಾ ಬಿ ಗುಂಪಿನಿಂದ ಸೆಮಿಫೈನಲ್‌ಗೆ ಅರ್ಹತೆ ಪಡೆಯಿತು. 

Add Zee News as a Preferred Source

ಮಾರ್ಚ್ 1 ರಂದು ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ಮುಖಾಮುಖಿಯಾಗಲಿವೆ. ಈ ಪಂದ್ಯವನ್ನು ದಕ್ಷಿಣ ಆಫ್ರಿಕಾ ಗೆದ್ದರೆ, ಸೆಮಿಫೈನಲ್ ತಲುಪುತ್ತಾರೆ. ಅಲ್ಲದೆ, ಈ ಪಂದ್ಯವನ್ನು ಇಂಗ್ಲೆಂಡ್ 200 ಕ್ಕೂ ಹೆಚ್ಚು ರನ್‌ಗಳ ಅಂತರದಿಂದ ಗೆದ್ದರೆ ಮಾತ್ರ ಅಫ್ಘಾನಿಸ್ತಾನ ಸೆಮಿಫೈನಲ್ ತಲುಪುತ್ತದೆ, ಇದು ತುಂಬಾ ಅಸಂಭವ. 

ಇದನ್ನೂ ಓದಿ:Viral Video: ನಡುರಸ್ತೆಯಲ್ಲೇ ಬೈಕ್‌ ವ್ಹೀಲಿಂಗ್‌ ಮಾಡುತ್ತಿದ್ದ ಜೋಡಿಗೆ ಇದೇನಾಯ್ತು ನೋಡಿ!!

ಸೆಮಿಫೈನಲ್ ತಲುಪಿದ್ದ ದಕ್ಷಿಣ ಆಫ್ರಿಕಾ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ. ದಕ್ಷಿಣ ಆಫ್ರಿಕಾ ನಾಯಕ ಟೆಂಬಾ ಬವುಮಾ ಅನಾರೋಗ್ಯದ ಕಾರಣ ಇಂಗ್ಲೆಂಡ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದಾರೆ. ಆದ್ದರಿಂದ, ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಟೆಂಬಾ ಬವುಮಾ ಬದಲಿಗೆ ಐಡೆನ್ ಮಾರ್ಕ್ರಾಮ್ ತಂಡವನ್ನು ಮುನ್ನಡೆಸಲಿದ್ದಾರೆ..  

ಅಲ್ಲದೆ, ದಕ್ಷಿಣ ಆಫ್ರಿಕಾ ಟೀಂ ತನ್ನ 3ನೇ ಮತ್ತು ಅಂತಿಮ ಪಂದ್ಯಕ್ಕಾಗಿ ಆಡುವ XI ನಲ್ಲಿ 2 ಬದಲಾವಣೆಗಳನ್ನು ಮಾಡಿದೆ. ಟೆಂಬಾ ಬವುಮಾ ಮತ್ತು ಟೋನಿ ಡಿ ಜಾರ್ಜಿ ಇಬ್ಬರೂ ಅನಾರೋಗ್ಯದ ಕಾರಣದಿಂದ ಹಿಂದೆ ಸರಿಯಬೇಕಾಯಿತು. 0ರ ಸ್ಥಾನದಲ್ಲಿ ಟ್ರಿಸ್ಟಾನ್ ಸ್ಟಬ್ಸ್ ಮತ್ತು ಹೆನ್ರಿಕ್ ಕ್ಲಾಸೆನ್ ತುಂಬಲಿದ್ದಾರೆ.

ಇದನ್ನೂ ಓದಿ:ಮುಸ್ಲಿಂ ಧರ್ಮದವರಾದ್ರೂ ಹನುಮಾನ್ ಭಕ್ತ ಎಂದೇ ಪ್ರಸಿದ್ಧಿ ಪಡೆದ ಖ್ಯಾತ ಬಾಲಿವುಡ್‌ ನಟ! ಬೆಂಗಳೂರಿನವ್ರೇ ಗುರು ಇವ್ರು.. 

England playing XI: ಜೋಸ್ ಬಟ್ಲರ್ (ನಾಯಕ), ಫಿಲಿಪ್ ಸಾಲ್ಟ್, ಬೆನ್ ಡಕೆಟ್, ಜೇಮೀ ಸ್ಮಿತ್ (ವಿಕೆಟ್ ಕೀಪರ್), ಜೋ ರೂಟ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಜೇಮೀ ಓವರ್ಟನ್, ಜೋಫ್ರಾ ಆರ್ಚರ್, ಆದಿಲ್ ರಶೀದ್ ಮತ್ತು ಸಾಕಿಬ್ ಮಹಮೂದ್.

South Africa XI : ಐಡೆನ್ ಮಾರ್ಕ್ರಾಮ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ರಯಾನ್ ರಿಕಲ್ಟನ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಾಗಿಸೊ ರಬಾಡ ಮತ್ತು ಲುಂಗಿ ಎನ್‌ಗಿಡಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

...Read More

Trending News