South Africa vs Netherlands: ಹರಿಣಗಳ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಿದ ನೆದರ್ಲ್ಯಾಂಡ್ಸ್

 ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಆಸೋಶಿಯನ್ಸ್ ಕ್ರೀಡಾಂಗಣದಲ್ಲಿ  ನಡೆದ ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ 38 ರನ್ ಗಳ ಗೆಲುವು ಸಾಧಿಸಿದೆ.

Written by - Manjunath N | Last Updated : Oct 17, 2023, 11:37 PM IST
  • ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು,
  • ನೆದರ್ಲ್ಯಾಂಡ್ಸ್ ತಂಡವನ್ನು 43 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 245 ರನ್ ಗಳಿಗೆ ಕಟ್ಟಿ ಹಾಕಿತು.
  • ಎಡ್ವರ್ಡ್ಸ್ 69 ಎಸೆತಗಳಲ್ಲಿ ಹತ್ತು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 78 ರನ್ ಗಳನ್ನು ಗಳಿಸಿ ತಂಡಕ್ಕೆ ನೆರವಾದರು.
South Africa vs Netherlands: ಹರಿಣಗಳ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಿದ ನೆದರ್ಲ್ಯಾಂಡ್ಸ್  title=

ಧರ್ಮಾಶಾಲಾ:  ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಆಸೋಶಿಯನ್ಸ್ ಕ್ರೀಡಾಂಗಣದಲ್ಲಿ  ನಡೆದ ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ 38 ರನ್ ಗಳ ಗೆಲುವು ಸಾಧಿಸಿದೆ.

ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡವು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು, ಅಲ್ಲದೆ ನೆದರ್ಲ್ಯಾಂಡ್ಸ್ ತಂಡವನ್ನು 43 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 245 ರನ್ ಗಳಿಗೆ ಕಟ್ಟಿ ಹಾಕಿತು.ನೆದರ್ಲ್ಯಾಂಡ್ಸ್ ತಂಡದ ಪರವಾಗಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ನಾಯಕ ಎಡ್ವರ್ಡ್ಸ್ 69 ಎಸೆತಗಳಲ್ಲಿ ಹತ್ತು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 78 ರನ್ ಗಳನ್ನು ಗಳಿಸಿ ತಂಡಕ್ಕೆ ನೆರವಾದರು.

ಇದೆ ವೇಳೆ 246 ರನ್ ಗಳ ಗುರಿಯನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡವು ನೆದರ್ಲ್ಯಾಂಡ್ಸ್ ತಂಡದ ಕರಾರುವಕ್ಕಾದ ಬೌಲಿಂಗ್ ದಾಳಿಗೆ 42.5 ಓವರ್ ಗಳಲ್ಲಿ ಎಲ್ಲ ವಿಕೆಟ್ ಗಳನ್ನು ಕಳೆದುಕೊಂಡು 207 ರನ್ ಗಳನ್ನು ಮಾತ್ರ ಗಳಿಸುವಲ್ಲಿ ಯಶಸ್ವಿಯಾಯಿತು.

ದಕ್ಷಿಣ ಆಫ್ರಿಕಾದ ಪರವಾಗಿ ಡೇವಿಡ್ ಮಿಲ್ಲರ್ 43, ಕೇಶವ್ ಮಹಾರಾಜ್ 40 ರನ್ ಗಳನ್ನು ಗಳಿಸುವ ಮೂಲಕ ತಂಡಕ್ಕೆ ನೆರವಾದರೂ ಕೂಡ  ಗೆಲುವಿನ ತಡಕ್ಕೆ ಮುಟ್ಟಿಸುವಲ್ಲಿ ವಿಫಲರಾದರು. ಆ ಮೂಲಕ ನೆದರ್ಲ್ಯಾಂಡ್ಸ್ ತಂಡವು 38 ರನ್ ಗಳಿಗೆ ಆಲೌಟ್ ಆಯಿತು.

ನೆದರ್ಲ್ಯಾಂಡ್ಸ್ ತಂಡದ ಪರವಾಗಿ ಶಿಸ್ತಿನ ಬೌಲಿಂಗ್ ದಾಳಿ ನಡೆಸಿದ ಲೋಗನ್ ವ್ಯಾನ್ ಬೇಕ್ 3,ಹಾಗೂ ಪಾಲ್ ವಾನ್ ಮೀಕೆರನ್, ಮರ್ವೆ ಲೀಡೆ ತಲಾ ಎರಡು ವಿಕೆಟ್ ಗಳನ್ನು ಕಬಳಿಸುವ ಮೂಲಕ ಹರಿಣಗಳ ಬ್ಯಾಟಿಂಗ್ ಬೆನ್ನೆಲುಬು ಮುರಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

 

Trending News