Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ಪಂದ್ಯಾವಳಿಯ ನಿರ್ವಹಣೆಗೆ ಸಂಬಂಧಿಸಿದಂತೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಟೂರ್ನಿಯ ನಿರ್ವಹಣೆಗೆ ಸಂಬಂಧಿಸಿದಂತೆ ಶುಕ್ರವಾರ ಐಸಿಸಿ ಮಂಡಳಿ ಸದಸ್ಯರು ಸಭೆ ನಡೆಸಿದ್ದು, ಐಸಿಸಿ ಪ್ರಮುಖ ನಿರ್ಧಾವರನ್ನು ತೆಗೆದುಕೊಂಡಿದೆ.


COMMERCIAL BREAK
SCROLL TO CONTINUE READING

ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಆದೇಶಿಸಲಾಗಿದೆ ಎಂದು ವರದಿಯಾಗಿದೆ. ಅಂತಿಮ ನಿರ್ಧಾರವನ್ನು ಬಹಿರಂಗಪಡಿಸಲು ಒಂದು ದಿನದ ಸಮಯ ನೀಡಲಾಗಿದ್ದು, ಶನಿವಾರ ನಡೆಯಲಿರುವ ಮತ್ತೊಂದು ಸಭೆಯಲ್ಲಿ ಟೂರ್ನಿಯ ಅಂತಿಮ ನಿರ್ಧಾರ ಪ್ರಕಟಿಸುವಂತೆ ಪಿಸಿಬಿಗೆ ಆದೇಶಿಸಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. 


ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸುವ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲು ಐಸಿಸಿ ಒಂದು ದಿನ ಕಾಲಾವಕಾಶ ನೀಡಿದೆ. ಒಂದು ವೇಳೆ ಈ ರೀತಿ ಟೂರ್ನಿ ಆಯೋಜಿಸಲು ಪಿಸಿಬಿ ಒಪ್ಪದಿದ್ದರೆ, ಬೇರೆ ದೇಶದಲ್ಲಿ ಟೂರ್ನಿ ಆಯೋಜಿಸಲು ಐಸಿಸಿ ನಿರ್ಧರಿಸಿದೆ. 


ವೇಳಾಪಟ್ಟಿಯ ಪ್ರಕಾರ, ಮುಂದಿನ ವರ್ಷದ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ಈ ಪಂದ್ಯಾವಳಿಯನ್ನು ಪಾಕಿಸ್ತಾನದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಆದರೆ, ಭದ್ರತಾ ಸಮಸ್ಯೆಗಳ ಕಾರಣ  ಭಾರತ ತಂಡ ಪಾಕಿಸ್ತಾನಕ್ಕೆ ಹೋಗಲು ನಿರಾಕರಿಸುತ್ತಿದೆ. ತಮ್ಮ ಪಂದ್ಯಗಳನ್ನು ತಟಸ್ಥ ಸ್ಥಳವಾಗಿ ಆಯೋಜಿಸುವಂತೆ ಬಿಸಿಸಿಐ ಈಗಾಗಲೇ ಐಸಿಸಿಗೆ ಸೂಚಿಸಿದೆ. ಹೀಗಾಗಿ ಹೈಬ್ರಿಡ್ ಮಾದರಿಯಲ್ಲಿ ಚಾಂಪಿಯನ್ಸ್ ಟ್ರೋಫಿ ಆಯೋಜಿಸುವಂತೆ ಪಿಸಿಬಿಗೆ ಐಸಿಸಿ ಸೂಚಿದ್ದು, ಮತ್ತೊಂದೆಡೆ, ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಗಾಗಿ ಟೀಮ್ ಇಂಡಿಯಾ ಪಾಕಿಸ್ತಾನಕ್ಕೆ ಪ್ರವಾಸ ಮಾಡುವುದಿಲ್ಲ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಘೋಷಿಸಿದೆ.


ಚಾಂಪಿಯನ್ಸ್ ಟ್ರೋಫಿಗಾಗಿ ಪಾಕಿಸ್ತಾನಕ್ಕೆ ಪ್ರವಾಸ ಮಾಡುವ ವಿಷಯದ ಬಗ್ಗೆ ಬಿಸಿಸಿಐ ಈಗಾಗಲೇ ತಮ್ಮ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಅಲ್ಲಿ ಭದ್ರತಾ ಸಮಸ್ಯೆಗಳು ಉದ್ಭವಿಸುತ್ತವೆ ಎಂದು ಆತಂಕ ವ್ಯಕ್ತಪಡಿಸಿದ್ದು, ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಲು ಸಾಧ್ಯವಿಲ್ಲ ಎಂದು ಬಿಸಿಸಿಐ ಹೇಳಿದೆ, ಇನ್ನು ಮುಂದೆ ನಡೆಯಲಿರುವ ಸಭೆಗಳಲ್ಲಿ ಯಾವ ಯಾವ ಪ್ರಮುಖ ಬೆಳವಣಿಗೆ ನಡೆಯಲಿದೆ, ಪಿಸಿಬಿ ಹೈಬ್ರಿಡ್‌ ಮಾದರಿಯ ಪಂದ್ಯವನ್ನು ನಡೆಸಲು ಒಪ್ಪುತ್ತಾ ಎಲ್ವಾ ಎಂಬುದನ್ನು ಇನ್ನು ಮುಂದೆಯಷ್ಟೆ ಕಾದು ನೋಡಬೇಕಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.