ನೂತನ ಐಸಿಸಿ ಅಧ್ಯಕ್ಷರ ಆಯ್ಕೆ: ಕೂತೂಹಲ ಕೆರಳಿಸಿದ ಗುರುವಾರದ ಸಭೆ

ನೂತನ ಐಸಿಸಿ ಅಧ್ಯಕ್ಷರ ಚುನಾವಣೆಗೆ ಸಂಬಂಧಿಸಿದಂತೆ ಮಂಗಳವಾರ ಯಾವುದೇ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ ಮತ್ತು ಐಸಿಸಿ ಮಂಡಳಿಯು ಗುರುವಾರ (ಮೇ 28) ಈ ಕುರಿತು ಹೆಚ್ಚಿನ ಚರ್ಚೆ ನಡೆಸಲಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬುಧವಾರ ಹೇಳಿದೆ.

Updated: May 27, 2020 , 11:58 PM IST
ನೂತನ ಐಸಿಸಿ ಅಧ್ಯಕ್ಷರ ಆಯ್ಕೆ: ಕೂತೂಹಲ ಕೆರಳಿಸಿದ ಗುರುವಾರದ ಸಭೆ

ನವದೆಹಲಿ: ನೂತನ ಐಸಿಸಿ ಅಧ್ಯಕ್ಷರ ಚುನಾವಣೆಗೆ ಸಂಬಂಧಿಸಿದಂತೆ ಮಂಗಳವಾರ ಯಾವುದೇ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ ಮತ್ತು ಐಸಿಸಿ ಮಂಡಳಿಯು ಗುರುವಾರ (ಮೇ 28) ಈ ಕುರಿತು ಹೆಚ್ಚಿನ ಚರ್ಚೆ ನಡೆಸಲಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬುಧವಾರ ಹೇಳಿದೆ.

ಐಸಿಸಿಯ ಮುಂದಿನ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆಯ ಬಗ್ಗೆ ಚರ್ಚಿಸಲು ಐಸಿಸಿ ಮಂಡಳಿ ನಿನ್ನೆ ಸಭೆ ಸೇರಿತು. ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಯಾವುದೇ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ ಮತ್ತು ಮುಂದಿನ ಐಸಿಸಿ ಮಂಡಳಿಯ ಸಭೆಯಲ್ಲಿ ಈ ವಿಷಯದ ಬಗ್ಗೆ ಇನ್ನಷ್ಟು ಚರ್ಚಿಸಲಾಗುವುದು ಎಂದು ಐಸಿಸಿ ಅಧಿಕೃತ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ

ಈಗಿರುವ ಅಧ್ಯಕ್ಷ ಶಶಾಂಕ್ ಮನೋಹರ್ ತಮ್ಮ ಅವಧಿಗೆ ಯಾವುದೇ ವಿಸ್ತರಣೆಯನ್ನು ಬಯಸುತ್ತಿಲ್ಲ ಎಂದು ದೃಢಪಡಿಸಿದ್ದಾರೆ.ಅವರು ಈ ಹಿಂದೆ ಎರಡು ವರ್ಷಗಳ ಅವಧಿಗೆ ಸರ್ವಾನುಮತದಿಂದ ಆಯ್ಕೆಯಾಗಿದ್ದರು.ಆದರೆ ವೈಯಕ್ತಿಕ ಕಾರಣಗಳಿಗಾಗಿ 2017 ರ ಮಾರ್ಚ್‌ನಲ್ಲಿ ರಾಜೀನಾಮೆ ನೀಡಿದರು. 2018 ರಲ್ಲಿ ಎರಡನೇ ಎರಡು ವರ್ಷಗಳ ಅವಧಿಗೆ ಅವಿರೋಧವಾಗಿ ಆಯ್ಕೆಯಾದರು.

ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯ (ಇಸಿಬಿ) ಮುಖ್ಯಸ್ಥ ಕಾಲಿನ್ ಗ್ರೇವ್ಸ್ ಈ ಹುದ್ದೆಯನ್ನು ಭರ್ತಿ ಮಾಡಲು ಸೂಕ್ತ ವ್ಯಕ್ತಿ ಎಂದು ಮಾಧ್ಯಮ ವರದಿ ಮಾಡಿದ್ದವು. ಇನ್ನೊಂದೆಡೆಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ಹೆಸರೂ ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಲ್ಲಿ ಐಸಿಸಿ ಅಧ್ಯಕ್ಷರ ಹುದ್ದೆಗೆ ಕೇಳಿಬರುತ್ತಿದೆ.