ICC ODI Rankings : ಐಸಿಸಿ ODI ರಾಂಕಿಂಗ್ ಪಟ್ಟಿ ಪ್ರಕಟ : ಭರ್ಜರಿಯಾಗಿ ಮಿಂಚಿದ ಶುಭಮನ್ ಗಿಲ್!

ಹರಾರೆಯಲ್ಲಿ ನಡೆದ ಕೊನೆಯ ಏಕದಿನ ಪಂದ್ಯದಲ್ಲಿ ಶುಭಮನ್ ಗಿಲ್ ಈ ಮಾದರಿಯಲ್ಲಿ ತಮ್ಮ ಮೊದಲ ಶತಕ (97 ಎಸೆತಗಳಲ್ಲಿ 130 ರನ್) ಗಳಿಸಿದರು.

Written by - Channabasava A Kashinakunti | Last Updated : Aug 24, 2022, 06:07 PM IST
  • ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಇಂದು ರಾಂಕಿಂಗ್ ಪಟ್ಟಿ ಬಿಡುಗಡೆ
  • ಏಕದಿನ ರಾಂಕಿಂಗ್ ನಲ್ಲಿ ಮಿಂಚಿದ ಶುಭಮನ್ ಗಿಲ್
  • ಶ್ರೇಯಾಂಕದಲ್ಲಿ ಬಾಬರ್ ಅಜಮ್ ಅಗ್ರಸ್ಥಾನ
ICC ODI Rankings : ಐಸಿಸಿ ODI ರಾಂಕಿಂಗ್ ಪಟ್ಟಿ ಪ್ರಕಟ : ಭರ್ಜರಿಯಾಗಿ ಮಿಂಚಿದ ಶುಭಮನ್ ಗಿಲ್! title=

ICC ODI Rankings : ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಇಂದು ರಾಂಕಿಂಗ್ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಏಕದಿನ ರ‍್ಯಾಂಕಿಂಗ್‌ನಲ್ಲಿ ಭಾರತದ ಆರಂಭಿಕ ಆಟಗಾರ ಶುಭಮನ್ ಗಿಲ್ 45 ಸ್ಥಾನದಿಂದ 38ನೇ ಸ್ಥಾನಕ್ಕೆ ತಲುಪಿದ್ದಾರೆ. ಬ್ಯಾಟ್ಸ್‌ಮನ್ ಶುಭಮನ್ ಇತ್ತೀಚೆಗೆ ಮುಕ್ತಾಯಗೊಂಡ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಹರಾರೆಯಲ್ಲಿ ನಡೆದ ಕೊನೆಯ ಏಕದಿನ ಪಂದ್ಯದಲ್ಲಿ ಶುಭಮನ್ ಗಿಲ್ ಈ ಮಾದರಿಯಲ್ಲಿ ತಮ್ಮ ಮೊದಲ ಶತಕ (97 ಎಸೆತಗಳಲ್ಲಿ 130 ರನ್) ಗಳಿಸಿದರು.

ಏಕದಿನ ರಾಂಕಿಂಗ್ ನಲ್ಲಿ ಮಿಂಚಿದ ಶುಭಮನ್ ಗಿಲ್ 

ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ 744 ರೇಟಿಂಗ್ ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ. ಜಿಂಬಾಬ್ವೆ ಪ್ರವಾಸದಲ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿತ್ತು. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಕೂಡ ಆರನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಜಿಂಬಾಬ್ವೆ ಪ್ರವಾಸದಿಂದಲೂ ಅವರಿಗೆ ವಿಶ್ರಾಂತಿ ನೀಡಲಾಗಿತ್ತು. ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳಲ್ಲಿ 154 ರನ್ ಗಳಿಸಿದ ಹೊರತಾಗಿಯೂ ಅನುಭವಿ ಆರಂಭಿಕ ಆಟಗಾರ ಶಿಖರ್ ಧವನ್ ಒಂದು ಸ್ಥಾನ ಕುಸಿದು 12ನೇ ಸ್ಥಾನಕ್ಕೆ ತಲುಪಿದ್ದಾರೆ. ಅವರು ಮೊದಲ ಮತ್ತು ಮೂರನೇ ODIಗಳಲ್ಲಿ ಅರ್ಧಶತಕಗಳನ್ನು ಗಳಿಸಿದರು.

ಇದನ್ನೂ ಓದಿ : ವಿರಾಟ್ ಮತ್ತು ಬಾಬರ್ ಇಬ್ಬರಲ್ಲಿ ಏಷ್ಯಾದ ಶ್ರೇಷ್ಠ ಬ್ಯಾಟ್ಸ್‌ಮನ್ ಯಾರು? ಅಂಕಿ-ಅಂಶಗಳು ಏನು ಹೇಳುತ್ತೆ?

ಶ್ರೇಯಾಂಕದಲ್ಲಿ ಬಾಬರ್ ಅಜಮ್ ಅಗ್ರಸ್ಥಾನ

ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಒಟ್ಟು 891 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. 789 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿರುವ ದಕ್ಷಿಣ ಆಫ್ರಿಕಾದ ರಾಸಿ ವಾನ್ ಡೆರ್ ಡಸ್ಸೆನ್ ನಂತರದ ಸ್ಥಾನದಲ್ಲಿದ್ದಾರೆ. ಬೌಲರ್‌ಗಳ ಪಟ್ಟಿಯಲ್ಲಿ ನ್ಯೂಜಿಲೆಂಡ್‌ನ ವೇಗದ ಬೌಲರ್ ಟ್ರೆಂಟ್ ಬೌಲ್ಟ್ ಅಗ್ರಸ್ಥಾನದಲ್ಲಿದ್ದರೆ, ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News