ನವದೆಹಲಿ: ನ್ಯೂಜಿಲೆಂಡ್ ತಂಡವು ಬುಧವಾರ ನಡೆದ ಸೆಮಿಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ 5 ವಿಕೆಟ್‌ಗಳ ರೋಚಕ ಜಯದೊಂದಿಗೆ ತನ್ನ ಫೈನಲ್ ಸ್ಥಾನವನ್ನು ಕಾಯ್ದಿರಿಸಿದೆ.ಇದೀಗ ಇಂದು ಸಂಜೆ ನಡೆಯಲಿರುವ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ತಂಡಗಳ ಸೆಮಿಫೈನಲ್ ಕದನ ಎಲ್ಲರ ಕುತೂಹಲ ಕೆರಳಿಸಿದೆ.


COMMERCIAL BREAK
SCROLL TO CONTINUE READING

 ಇದನ್ನೂ ಓದಿ: ಹರ್ಭಜನ್ ಸಿಂಗ್ ಸಾರ್ವಕಾಲಿಕ ಶ್ರೇಷ್ಠ T20 XI ಕ್ರಿಕೆಟ್ ತಂಡದಲ್ಲಿ ಕೊಹ್ಲಿಗಿಲ್ಲ ಸ್ಥಾನ..!


ಈಗ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ವೆಸ್ಟ್ ಇಂಡೀಸ್ ನ ಮಾಜಿ ನಾಯಕ ಹಾಗೂ ಬ್ಯಾಟಿಂಗ್ ದಿಗ್ಗಜ ಬ್ರಿಯಾನ್ ಲಾರಾ ಈ ಪಂದ್ಯದ ಬಗ್ಗೆ ಭವಿಷ್ಯ ನುಡಿದಿದ್ದಾರೆ.ಅವರ ಪ್ರಕಾರ ಸೆಮಿಫೈನಲ್ ನಲ್ಲಿ ಪಾಕಿಸ್ತಾನ ತಂಡವು ಆಸಿಸ್ ವಿರುದ್ಧ ಗೆಲ್ಲಲಿದೆ ಎಂದು ಹೇಳಿದ್ದಾರೆ.


Cricketers : ಈ ಸ್ಟಾರ್ ಕ್ರಿಕೆಟಿಗರು ತಮ್ಮ ಪತ್ನಿಯರಿಗೆ 'ಪ್ರಪೋಸ್' ಮಾಡಿದ್ದು ಹೇಗೆ? ಇಲ್ಲಿದೆ ಇಂಟರಸ್ಟಿಂಗ್ ಸ್ಟೋರಿಗಳು!


"ಆಸ್ಟ್ರೇಲಿಯಾ ತುಂಬಾ ಅಪಾಯಕಾರಿ ತಂಡವಾಗಿದೆ.ಅವರು ಯಾರನ್ನಾದರೂ ಸೋಲಿಸುವ ಬಲಿಷ್ಠ ತಂಡವನ್ನು ಹೊಂದಿದ್ದಾರೆ.ಆದರೆ ಪಾಕಿಸ್ತಾನವು ಬೌಲಿಂಗ್ ಮತ್ತು ಬ್ಯಾಟಿಂಗ್ ಪರಾಕ್ರಮವನ್ನು ಹೊಂದಿದ್ದು, ಇದು ಅವರಿಗೆ ಫೈನಲ್ ತಲುಪಲು ನೆರವಾಗಲಿದೆ ಎಂದು ಅವರು ಗುರುವಾರ ಟ್ವೀಟ್ ಮಾಡಿದ್ದಾರೆ.ಒಂದು ವೇಳೆ ಈ ಪಂದ್ಯವನ್ನು ಗೆದ್ದಿದ್ದೆ ಆದಲ್ಲಿ ಪಾಕಿಸ್ತಾನವು ಮೂರನೇ ಬಾರಿಗೆ T20 ವಿಶ್ವಕಪ್‌ನ ಫೈನಲ್‌ಗೆ ಪ್ರವೇಶಿಸಿದ ಹೆಗ್ಗಳಿಕೆಗೆ ಪಾತ್ರವಾಗಲಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ