ನವದೆಹಲಿ: ರೋಹಿತ್ ಶರ್ಮಾ ಸೋಮವಾರದಂದು  3000 T20I ರನ್ ಪೂರೈಸುವ ಮೂಲಕ ಈ ಸಾಧನೆ ಮಾಡಿದ ವಿಶ್ವದ ಮೂರನೇ ಕ್ರಿಕೆಟಿಗ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.


COMMERCIAL BREAK
SCROLL TO CONTINUE READING

ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಸೋಮವಾರ ನಡೆದ ಐಸಿಸಿ ಪುರುಷರ ಟಿ20 ವಿಶ್ವಕಪ್‌ (ICC T20 World Cup 2021)ನಲ್ಲಿ ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ರೋಹಿತ್ 3000 ರನ್ ಗಡಿಯನ್ನು ತಲುಪಿದರು.ಟೀಮ್ ಇಂಡಿಯಾದ ಚೇಸ್‌ನ 10 ನೇ ಓವರ್‌ನಲ್ಲಿ ಔಟಾಗುವ ಮೊದಲು ಅವರು 37 ಎಸೆತಗಳಲ್ಲಿ 56 ರನ್ ಗಳಿಸಿದರು.


India vs Namibia: ನಮೀಬಿಯಾ ವಿರುದ್ಧದ ಗೆಲುವಿನೊಂದಿಗೆ T20I ನಾಯಕತ್ವಕ್ಕೆ ಕೊಹ್ಲಿ ವಿದಾಯ


ಭಾರತದ ನಾಯಕ ವಿರಾಟ್ ಕೊಹ್ಲಿ 3227 ರನ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದು, ನ್ಯೂಜಿಲೆಂಡ್‌ನ ಮಾರ್ಟಿನ್ ಗಪ್ಟಿಲ್ ಮತ್ತು ಭಾರತದ ರೋಹಿತ್ ಶರ್ಮಾ ಕ್ರಮವಾಗಿ 3115 ಮತ್ತು 3038 ರನ್‌ಗಳೊಂದಿಗೆ ನಂತರದ ಸ್ಥಾನದಲ್ಲಿದ್ದಾರೆ.


ಗ್ರೂಪ್ 2 ಪಂದ್ಯದಲ್ಲಿ ಭಾರತವು ನಮೀಬಿಯಾವನ್ನು 132/8ಕ್ಕೆ ಸೀಮಿತಗೊಳಿಸಿತು. ಭಾರತದ ಪರ ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ತಲಾ ಮೂರು ವಿಕೆಟ್ ಕಬಳಿಸುವ ಮೂಲಕ ನಮೀಬಿಯಾ ತಂಡದ ರನ್ ಗತಿಗೆ ಕಡಿವಾಣ ಹಾಕಿದರು.


ಇದನ್ನೂ ಓದಿ:"ವಿರಾಟ್ ಕೊಹ್ಲಿ ಭಾರತ ತಂಡಕ್ಕೆ ಹೋರಾಟದ ಮನೋಭಾವ ಮತ್ತು ಉತ್ಸಾಹವನ್ನು ತಂದಿದ್ದಾರೆ"


ನಮೀಬಿಯಾ ಪರ, ಡೇವಿಡ್ ವೈಸ್ ಮತ್ತು ಸ್ಟೀಫನ್ ಬಾರ್ಡ್ ಕ್ರಮವಾಗಿ 26 ಮತ್ತು 21 ರನ್ ಗಳಿಸಿದರು ಮತ್ತು ಅವರ ಕಡೆಯಿಂದ ಯಾವುದೇ ಬ್ಯಾಟ್ಸಮನ್ ಕೂಡ 30 ರನ್ ಗಡಿ ದಾಟಲಿಲ್ಲ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ