ICC T20 World Cup 2021: ಭಾರತದ ಬೌಲಿಂಗ್ ಪರಾಕ್ರಮಕ್ಕೆ ಬೆಚ್ಚಿದ ಸ್ಕಾಟ್ಲೆಂಡ್, ಕೆ.ಎಲ್ ರಾಹುಲ್ ಸ್ಪೋಟಕ ಅರ್ಧಶತಕ

 ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸ್ಕಾಟ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ತಂಡವು ಎಂಟು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

Last Updated : Nov 5, 2021, 10:25 PM IST
  • ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸ್ಕಾಟ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ತಂಡವು ಎಂಟು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ICC T20 World Cup 2021: ಭಾರತದ ಬೌಲಿಂಗ್ ಪರಾಕ್ರಮಕ್ಕೆ ಬೆಚ್ಚಿದ ಸ್ಕಾಟ್ಲೆಂಡ್, ಕೆ.ಎಲ್ ರಾಹುಲ್ ಸ್ಪೋಟಕ ಅರ್ಧಶತಕ  title=

ನವದೆಹಲಿ:  ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸ್ಕಾಟ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ತಂಡವು ಎಂಟು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಕೊಹ್ಲಿ ನೇತೃತ್ವದ ಭಾರತ ತಂಡವು ತನ್ನ ಮಾರಕ ಬೌಲಿಂಗ್ ದಾಳಿಯಿಂದಾಗಿ  ಸ್ಕಾಟ್ಲೆಂಡ್ ತಂಡವನ್ನು ಕೇವಲ 85 ರನ್ ಗಳಿಗೆ ಆಲ್ ಔಟ್ ಮಾಡಿತು. ಭಾರತದ ಪರವಾಗಿ ಮೊಹಮ್ಮದ್ ಶಮಿ ಹಾಗೂ ರವೀಂದ್ರ ಜಡೇಜಾ ತಲಾ ಮೂರು ವಿಕೆಟ್ ಗಳನ್ನು ಪಡೆಯುವ ಮೂಲಕ ಸ್ಕಾಟ್ಲೆಂಡ್ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದರು.

86 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಭಾರತ ತಂಡಕ್ಕೆ ಈ ಪಂದ್ಯದಲ್ಲಿ ಉತ್ತಮ ಸರಾಸರಿಯನ್ನು ಕಾಯ್ದುಕೊಳ್ಳುವುದು ಅಗತ್ಯವಾಗಿತ್ತು, ಈ ಹಿನ್ನಲೆಯಲ್ಲಿ ಆರಂಭದಲ್ಲಿ ಭಾರತದ ಆರಂಭಿಕ ಆಟಗಾರರಾದ ಕೆ.ಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಸ್ಪೋಟಕ ಬ್ಯಾಟಿಂಗ್ ಗೆ ಮುಂದಾದರು.

ಕೆ.ಎಲ್.ರಾಹುಲ್ ಕೇವಲ 18 ಎಸೆತಗಳಲ್ಲಿ ಆರು ಭರ್ಜರಿ ಬೌಂಡರಿ ಹಾಗೂ ಮೂರು ಸಿಕ್ಸರ್ ಗಳ ನೆರವಿನಿಂದ ಈ ವಿಶ್ವಕಪ್ ಟೂರ್ನಿಯಲ್ಲಿ ವೇಗದ ಅರ್ಧಶತಕ ದಾಖಲಿಸಿದ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು. ಇನ್ನೊಂದೆಡೆಗೆ ಇವರಿಗೆ ಸಾಥ್ ನೀಡಿದ ರೋಹಿತ್ ಶರ್ಮಾ ಕೂಡ ಕೇವಲ 16 ಎಸೆತಗಳಲ್ಲಿ ಐದು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದಾಗಿ 30 ರನ್ ಗಳಿಸಿ ವಿಲ್ ಅವರ ಎಸೆತದಲ್ಲಿ ಎಲ್ಬಿಡಬ್ಲ್ಯು ಗೆ ಬಲಿಯಾದರು.ತದನಂತರ ಬಂದಂತಹ ಸೂರ್ಯಕುಮಾರ್ ಯಾದವ್ ಸಿಕ್ಸರ್ ಹೊಡೆಯುವ ಮೂಲಕ ಗೆಲುವಿನ ಗುರಿಯನ್ನು ತಲುಪಿತು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News