ICC T20I Rankings : ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ನಂತರ, ಟೀಂ ಇಂಡಿಯಾದ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್‌ಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಅವರು ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ನ ಇತ್ತೀಚಿನ ಟಿ20 ಶ್ರೇಯಾಂಕದಲ್ಲಿ ವಿಶ್ವದ ನಂಬರ್ -1 ಬ್ಯಾಟ್ಸ್‌ಮನ್ ಆಗಿ ಹೊರಹೊಮ್ಮಿದ್ದಾರೆ. ಸೂರ್ಯಕುಮಾರ್ ಯಾದವ್ ಅಗ್ರ ಬ್ಯಾಟ್ಸ್‌ಮನ್ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಟಿ20 ಬ್ಯಾಟ್ಸ್‌ಮನ್‌ಗಳ ರ್ಯಾಂಕಿಂಗ್‌ನಲ್ಲಿ 50ನೇ ಸ್ಥಾನಕ್ಕೆ ತಲುಪಿದ್ದಾರೆ.


COMMERCIAL BREAK
SCROLL TO CONTINUE READING

ಸೂರ್ಯಕುಮಾರ್ ಯಾದವ್‌ಗೆ ಗುಡ್ ನ್ಯೂಸ್!


ಸೂರ್ಯಕುಮಾರ್ ಯಾದವ್ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಅಜೇಯ 111 ರನ್ ಗಳಿಸುವ ಮೂಲಕ ಶ್ರೇಯಾಂಕದಲ್ಲಿ ನಂಬರ್-1 ಸ್ಥಾನವನ್ನು ಮತ್ತಷ್ಟು ಬಲಪಡಿಸಿದ್ದಾರೆ. ಸೂರ್ಯಕುಮಾರ್ ಯಾದವ್ ಮೂರು ಪಂದ್ಯಗಳ ಸರಣಿಯಿಂದ 31 ರೇಟಿಂಗ್ ಅಂಕಗಳನ್ನು ಪಡೆದಿದ್ದಾರೆ. 890 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಅವರು ಎರಡನೇ ಸ್ಥಾನದಲ್ಲಿರುವ ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್‌ಗಿಂತ 54 ರೇಟಿಂಗ್ ಪಾಯಿಂಟ್‌ಗಳ ಮುಂದಿದ್ದಾರೆ.


ಇದನ್ನೂ ಓದಿ : Team India : ಟೀಂ ಇಂಡಿಯಾದ ಈ ಆಟಗಾರನ ಪಾಲಿಗೆ ವಿಲನ್ ಆದ ಹಾರ್ದಿಕ್ ಪಾಂಡ್ಯ


50ನೇ ಸ್ಥಾನಕ್ಕೆ ತಲುಪಿದ ಹಾರ್ದಿಕ್ 


ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಭಾರತವನ್ನು ಮುನ್ನಡೆಸಿದ್ದ ಹಾರ್ದಿಕ್, ಸರಣಿಯ ಕೊನೆಯ ಪಂದ್ಯದಲ್ಲಿ ಅಜೇಯ 30 ರನ್ ಗಳಿಸಿದ ನಂತರ ಬ್ಯಾಟ್ಸ್‌ಮನ್‌ಗಳ ನಡುವೆ ಜಂಟಿ 50 ನೇ ಸ್ಥಾನವನ್ನು ತಲುಪಿದರು. ಬೌಲರ್‌ಗಳ ಪಟ್ಟಿಯಲ್ಲಿ ಅನುಭವಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಎರಡು ಸ್ಥಾನ ಮೇಲೇರಿ 11ನೇ ಸ್ಥಾನದಲ್ಲಿದ್ದರೆ, ಎಡಗೈ ವೇಗಿ ಅರ್ಷದೀಪ್ ಸಿಂಗ್ ಒಂದು ಸ್ಥಾನ ಮೇಲೇರಿ 21ನೇ ಸ್ಥಾನಕ್ಕೆ ತಲುಪಿದ್ದಾರೆ.


ಏಕದಿನ ಶ್ರೇಯಾಂಕದಲ್ಲಿ ಕೊಹ್ಲಿ ಆರನೇ ಸ್ಥಾನ


ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಎಂಟು ಸ್ಥಾನ ಮೇಲೇರಿ 40ನೇ ಸ್ಥಾನಕ್ಕೆ ತಲುಪಿದ್ದಾರೆ. ಭಾರತದ ದಿಗ್ಗಜ ವಿರಾಟ್ ಕೊಹ್ಲಿ ಏಕದಿನ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಆರನೇ ಸ್ಥಾನದೊಂದಿಗೆ ಅಗ್ರ ಭಾರತೀಯರಾಗಿದ್ದಾರೆ. ನಾಯಕ ರೋಹಿತ್ ಶರ್ಮಾ ಎಂಟನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಗಾಯಗೊಂಡಿರುವ ಜಸ್ಪ್ರೀತ್ ಬುಮ್ರಾ ಬೌಲರ್‌ಗಳ ಪಟ್ಟಿಯಲ್ಲಿ 11ನೇ ಸ್ಥಾನದಲ್ಲಿದ್ದಾರೆ.


ಅತ್ಯುತ್ತಮ ಶ್ರೇಯಾಂಕದಲ್ಲಿ ಸ್ಟೀವ್ ಸ್ಮಿತ್


ಆಸ್ಟ್ರೇಲಿಯಾದ ಆರಂಭಿಕರಾದ ಡೇವಿಡ್ ವಾರ್ನರ್ ಮತ್ತು ಟ್ರಾವಿಸ್ ಹೆಡ್ ಅವರು ಇಂಗ್ಲೆಂಡ್ ವಿರುದ್ಧದ ಸ್ವದೇಶಿ ಸರಣಿಯಲ್ಲಿ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ (MCG) ನಲ್ಲಿ 269 ರನ್‌ಗಳ ಜೊತೆಯಾಟದ ನಂತರ ಬ್ಯಾಟ್ಸ್‌ಮನ್‌ಗಳಿಗೆ ತಮ್ಮ ಶ್ರೇಯಾಂಕವನ್ನು ಸುಧಾರಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಸ್ವದೇಶಿ ಸರಣಿಯಲ್ಲಿ ಪ್ರಬಲ ಪ್ರದರ್ಶನ ನೀಡಿದ ಸ್ಟೀವ್ ಸ್ಮಿತ್ ಅವರು ತಮ್ಮ ವೃತ್ತಿಜೀವನದ ಏಳನೇ ಶ್ರೇಯಾಂಕವನ್ನು ಸರಿಗಟ್ಟುವಲ್ಲಿ ಯಶಸ್ವಿಯಾದರು.


ಇದನ್ನೂ ಓದಿ : KL Rahul: ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಕೆ.ಎಲ್.ರಾಹುಲ್


ಏಳನೇ ಸ್ಥಾನದಲ್ಲಿ ಆಡಮ್ ಜಂಪಾ


ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 106 ರನ್ ಗಳಿಸಿದ್ದ ವಾರ್ನರ್ ಒಂದು ಸ್ಥಾನ ಮೇಲೇರಿ ಐದನೇ ಸ್ಥಾನ ಪಡೆದರೆ, ಅದರಲ್ಲಿ 152 ರನ್ ಗಳಿಸಿದ್ದ ಹೆಡ್ 12 ಸ್ಥಾನ ಮೇಲೇರಿ 30ನೇ ಸ್ಥಾನಕ್ಕೆ ತಲುಪಿದ್ದಾರೆ. ಬೌಲರ್‌ಗಳ ಪಟ್ಟಿಯಲ್ಲಿ ಮಿಚೆಲ್ ಸ್ಟಾರ್ಕ್ ನಾಲ್ಕನೇ ಸ್ಥಾನಕ್ಕೆ ತಲುಪಿದ್ದರೆ, ಆಡಮ್ ಝಂಪಾ ಏಳನೇ ಸ್ಥಾನಕ್ಕೆ ತಲುಪಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.