ICC World Cup 2023: 20 ವರ್ಷಗಳ ನಂತರ ವಿಶ್ವಕಪ್ ಫೈನಲ್‌ನಲ್ಲಿ ಭಾರತ vs ಆಸ್ಟ್ರೇಲಿಯಾ ಮುಖಾಮುಖಿ!

India vs Australia World Cup final 2023: ವಿಶ್ವಕಪ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮುಖಾಮುಖಿ ದಾಖಲೆಯ ಕುರಿತು ಹೇಳುವುದಾದರೆ, ಉಭಯ ತಂಡಗಳ ನಡುವೆ ಇದುವರೆಗೆ ಒಟ್ಟು 13 ಪಂದ್ಯಗಳು ನಡೆದಿವೆ. ವಿಶ್ವಕಪ್‌ನಲ್ಲಿ ಭಾರತ ವಿರುದ್ಧ ಆಸ್ಟ್ರೇಲಿಯಾ ಒಟ್ಟು 8 ಪಂದ್ಯಗಳನ್ನು ಗೆದ್ದಿದೆ. ಅದೇ ರೀತಿ ವಿಶ್ವಕಪ್ ಇತಿಹಾಸದಲ್ಲಿ ಭಾರತವು ಆಸ್ಟ್ರೇಲಿಯಾ ವಿರುದ್ಧ ಒಟ್ಟು 5 ಪಂದ್ಯಗಳನ್ನು ಗೆದ್ದಿದೆ.

Written by - Puttaraj K Alur | Last Updated : Nov 17, 2023, 11:43 AM IST
  • 20 ವರ್ಷಗಳ ನಂತರ ವಿಶ್ವಕಪ್ ಫೈನಲ್‍ನಲ್ಲಿ ಮುಖಾಮುಖಿಯಾಗುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ
  • ವಿಶ್ವಕಪ್‌ನಲ್ಲಿ ಭಾರತ ವಿರುದ್ಧ ಆಸ್ಟ್ರೇಲಿಯಾ 8 ಪಂದ್ಯ ಗೆದ್ದರೆ, ಭಾರತ 5 ಪಂದ್ಯ ಗೆದ್ದಿದೆ..?
  • ವಿಶ್ವಕಪ್ ಟ್ರೋಫಿ ಎತ್ತಿಹಿಡಿದು 2003ರ ಸೋಲಿನ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಟೀಂ ಇಂಡಿಯಾ
ICC World Cup 2023: 20 ವರ್ಷಗಳ ನಂತರ ವಿಶ್ವಕಪ್ ಫೈನಲ್‌ನಲ್ಲಿ ಭಾರತ vs ಆಸ್ಟ್ರೇಲಿಯಾ ಮುಖಾಮುಖಿ! title=
ವಿಶ್ವಕಪ್ 2023

ನವದೆಹಲಿ: 5 ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ಗುರುವಾರ ನಡೆದ 2ನೇ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು 3 ವಿಕೆಟ್‌ಗಳಿಂದ ಸೋಲಿಸಿ 8ನೇ ಬಾರಿಗೆ ವಿಶ್ವಕಪ್ ಫೈನಲ್ ತಲುಪಿತು. ನವೆಂಬರ್ 19ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಆಸೀಸ್ ತಂಡವು ಆತಿಥೇಯ ಭಾರತವನ್ನು ಎದುರಿಸಲಿದೆ. 20 ವರ್ಷಗಳ ನಂತರ ಭಾರತ ಮತ್ತೊಮ್ಮೆ ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಎದುರಿಸುತ್ತಿದೆ. 2003ರ ಮಾರ್ಚ್ 23ರ ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ತಂಡವು ಭಾರತವನ್ನು 125 ರನ್‌ಗಳಿಂದ ಸೋಲಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು. ಅಂದಿನ ಸೋಲಿನಿಂದ ಕೋಟ್ಯಂತರ ಭಾರತೀಯರ ಕನಸು ನುಚ್ಚುನೂರಾಗಿತ್ತು.   

20 ವರ್ಷಗಳ ಬಳಿಕ ಮತ್ತೆ ಮುಖಾಮುಖಿ!

2003ರಲ್ಲಿ ಸೌರವ್ ಗಂಗೂಲಿ ಟೀಂ ಇಂಡಿಯಾದ ನಾಯಕರಾಗಿದ್ದರು. ವಿಶ್ವಕಪ್‌ನ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋಲು ಕಂಡಿತು. ಆ ವಿಶ್ವಕಪ್‌ನಲ್ಲಿ ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಗರಿಷ್ಠ 673 ರನ್ ಗಳಿಸಿದ್ದರು. ತೆಂಡೂಲ್ಕರ್ ಅವರ 673 ರನ್‌ಗಳ ಹೊರತಾಗಿಯೂ ಪ್ರಶಸ್ತಿ ಗೆಲ್ಲುವಲ್ಲಿ ಭಾರತ ಯಶಸ್ವಿಯಾಗಲಿಲ್ಲ. 2003ರ ವಿಶ್ವಕಪ್ ಫೈನಲ್‌ನ ಸೋಲು ಸಚಿನ್ ತೆಂಡೂಲ್ಕರ್ ಸೇರಿದಂತೆ ಭಾರತದ ಎಲ್ಲಾ ಕ್ರಿಕೆಟ್ ಅಭಿಮಾನಿಗಳನ್ನು ಎದೆಗುಂದುವಂತೆ ಮಾಡಿತು. ಆದರೆ ಈಗ ಅದೇ ಸೋಲಿಗೆ ಸೇಡು ತೀರಿಸಿಕೊಳ್ಳಲು ಭಾರತಕ್ಕೆ ಸುವರ್ಣಾವಕಾಶವಿದೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು 20 ವರ್ಷಗಳ ನಂತರ ವಿಶ್ವಕಪ್ ಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದರೆ ಆಸೀಸ್ ವಿರುದ್ಧ ಸೇಡು ತೀರಿಸಿಕೊಂಡಂತಾಗುತ್ತದೆ.

ಇದನ್ನೂ ಓದಿ: ವಿರಾಟ್ ಮಣಿಕಟ್ಟಿನಲ್ಲಿರುವ ಈ ಸಾಧನವೇ 50ನೇ ಶತಕದ ದಾಖಲೆಗೆ ಕಾರಣ! ಏನಿದು ಅಂತಾ ತಿಳಿದರೆ ಶಾಕ್ ಆಗೋದು ಖಚಿತ

ಭಾರತ ಮತ್ತು ಆಸ್ಟ್ರೇಲಿಯಾ ಪೈಕಿ ಯಾರ ಪ್ರಬಲರು?

ವಿಶ್ವಕಪ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮುಖಾಮುಖಿ ದಾಖಲೆಯ ಕುರಿತು ಹೇಳುವುದಾದರೆ, ಉಭಯ ತಂಡಗಳ ನಡುವೆ ಇದುವರೆಗೆ ಒಟ್ಟು 13 ಪಂದ್ಯಗಳು ನಡೆದಿವೆ. ವಿಶ್ವಕಪ್‌ನಲ್ಲಿ ಭಾರತ ವಿರುದ್ಧ ಆಸ್ಟ್ರೇಲಿಯಾ ಒಟ್ಟು 8 ಪಂದ್ಯಗಳನ್ನು ಗೆದ್ದಿದೆ. ಅದೇ ರೀತಿ ವಿಶ್ವಕಪ್ ಇತಿಹಾಸದಲ್ಲಿ ಭಾರತವು ಆಸ್ಟ್ರೇಲಿಯಾ ವಿರುದ್ಧ ಒಟ್ಟು 5 ಪಂದ್ಯಗಳನ್ನು ಗೆದ್ದಿದೆ. ಭಾರತ 1983ರಲ್ಲಿ ಆಸ್ಟ್ರೇಲಿಯಾ ವಿರುದ್ಧ ವಿಶ್ವಕಪ್‌ನಲ್ಲಿ ತನ್ನ ಮೊದಲ ಪಂದ್ಯವನ್ನು ಗೆದ್ದುಕೊಂಡಿತು. ಆಗ ಕಪಿಲ್ ದೇವ್ ನಾಯಕತ್ವದ ಟೀಂ ಇಂಡಿಯಾ ಕಾಂಗರೂ ತಂಡವನ್ನು 118 ರನ್‌ಗಳಿಂದ ಸೋಲಿಸಿತ್ತು.

ಪ್ರಶಸ್ತಿ ಮೇಲೆ ಭಾರತದ ಕಣ್ಣು!

1987ರಲ್ಲಿ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ 2ನೇ ಪಂದ್ಯದಲ್ಲಿ ಭಾರತ 56 ರನ್‌ಗಳಿಂದ ಗೆದ್ದಿತ್ತು. 2011ರ ವಿಶ್ವಕಪ್‌ನಲ್ಲಿ ಭಾರತ ಕ್ವಾರ್ಟರ್ ಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು 5 ವಿಕೆಟ್‌ಗಳಿಂದ ಸೋಲಿಸಿತ್ತು. 2019ರ ವಿಶ್ವಕಪ್‌ನಲ್ಲಿ ಭಾರತ ಆಸ್ಟ್ರೇಲಿಯಾವನ್ನು 36 ರನ್‌ಗಳಿಂದ ಸೋಲಿಸಿತ್ತು. 2023ರ ಅಂದರೆ ಪ್ರಸಕ್ತ ವಿಶ್ವಕಪ್‌ನಲ್ಲಿ ಚೆನ್ನೈನಲ್ಲಿ ನಡೆದ ಲೀಗ್ ಪಂದ್ಯದಲ್ಲಿ ಭಾರತ 6 ವಿಕೆಟ್‌ಗಳಿಂದ ಆಸ್ಟ್ರೇಲಿಯಾವನ್ನು ಸೋಲಿಸಿತು. ಇದೀಗ 2023ರ ವಿಶ್ವಕಪ್‌ನ ಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿ ಪ್ರಶಸ್ತಿ ಗೆಲ್ಲುವತ್ತ ಭಾರತದ ಕಣ್ಣು ನೆಟ್ಟಿದೆ.

ಇದನ್ನೂ ಓದಿ: ಟೀಂ ಇಂಡಿಯಾದ ಈ ಆಟಗಾರನೇ ಜಗತ್ತಿನ ಅತ್ಯುತ್ತಮ ಬೌಲರ್: ಕೀವೀಸ್ ನಾಯಕ ಕೇನ್ ವಿಲಿಯಮ್ಸನ್ ಶ್ಲಾಘಿಸಿದ್ದು ಯಾರನ್ನು?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News