ICC World Cup 2023: ಕೊನೆ ಕ್ಷಣದಲ್ಲಿ ಟೀಂ ಇಂಡಿಯಾಗೆ ಎಂಟ್ರಿಕೊಟ್ಟ ಮಾರಕ ಬೌಲರ್..!

ಏಕದಿನ ವಿಶ್ವಕಪ್ 2023: ವಿಶ್ವಕಪ್‌ಗಾಗಿ ಭಾರತ ತಂಡದಲ್ಲಿ ಕೊನೆಯ ಕ್ಷಣದಲ್ಲಿ ದೊಡ್ಡ ಬದಲಾವಣೆಯನ್ನು ಮಾಡಲಾಗಿದೆ. ಗಾಯಗೊಂಡಿರುವ ಅಕ್ಸರ್ ಪಟೇಲ್ ಬದಲಿಗೆ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರನ್ನು 15 ಸದಸ್ಯರ ತಂಡದಲ್ಲಿ ಸೇರಿಸಲಾಗಿದೆ.

Written by - Puttaraj K Alur | Last Updated : Sep 28, 2023, 09:03 PM IST
  • ವಿಶ್ವಕಪ್‌ಗಾಗಿ ಭಾರತ ತಂಡದಲ್ಲಿ ಕೊನೆಯ ಕ್ಷಣದಲ್ಲಿ ದೊಡ್ಡ ಬದಲಾವಣೆ ಮಾಡಲಾಗಿದೆ
  • ಗಾಯಗೊಂಡಿರುವ ಅಕ್ಸರ್ ಪಟೇಲ್ ಬದಲಿಗೆ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್‍ಗೆ ಸ್ಥಾನ
  • ಸೆಪ್ಟೆಂಬರ್ 15ರ ಬಾಂಗ್ಲಾದೇಶ ವಿರುದ್ಧದ ಏಷ್ಯಾ ಕಪ್ ಪಂದ್ಯದಲ್ಲಿ ಗಾಯಗೊಂಡಿದ್ದ ಅಕ್ಷರ್
ICC World Cup 2023: ಕೊನೆ ಕ್ಷಣದಲ್ಲಿ ಟೀಂ ಇಂಡಿಯಾಗೆ ಎಂಟ್ರಿಕೊಟ್ಟ ಮಾರಕ ಬೌಲರ್..!   title=
ಏಕದಿನ ವಿಶ್ವಕಪ್ 2023

ನವದೆಹಲಿ: ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್‍ರನ್ನು ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತೀಯ ತಂಡದಲ್ಲಿ ಸೇರಿಸಲಾಗಿದೆ. ಗಾಯಗೊಂಡಿರುವ ಅಕ್ಷರ್ ಪಟೇಲ್ ಬದಲಿಗೆ 15 ಸದಸ್ಯರ ತಂಡದಲ್ಲಿ ಅವರಿಗೆ ಅವಕಾಶ ಸಿಕ್ಕಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಗುರುವಾರ ಈ ಮಹತ್ವದ ಘೋಷಣೆ ಮಾಡಿದೆ.

ಅಕ್ಷರ್ ಪಟೇಲ್ ಕನಸು ನುಚ್ಚುನೂರು!

ಗಾಯಗೊಂಡಿರುವ ಅಕ್ಷರ್ ಪಟೇಲ್ ಬದಲಿಗೆ 37 ವರ್ಷದ ಅಶ್ವಿನ್ ಆಯ್ಕೆಯಾಗಿದ್ದಾರೆ. ಎಡ ಕ್ವಾಡ್ರೈಸ್ಪ್ಸ್ ಗಾಯದಿಂದ ಅಕ್ಷರ್ ಪಟೇಲ್ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಅವರು ಸೆಪ್ಟೆಂಬರ್ 15ರಂದು ಬಾಂಗ್ಲಾದೇಶ ವಿರುದ್ಧದ ಏಷ್ಯಾ ಕಪ್ ಪಂದ್ಯದಲ್ಲಿ ಗಾಯಗೊಂಡಿದ್ದರು. ಇದರೊಂದಿಗೆ ಏಕದಿನ ವಿಶ್ವಕಪ್ ಆಡುವ ಅಕ್ಷರ್ ಪಟೇಲ್ ಕನಸು ಕೂಡ ಭಗ್ನಗೊಂಡಿದೆ. ಅಶ್ವಿನ್ ಈಗಾಗಲೇ ತಂಡದೊಂದಿಗೆ ಗುವಾಹಟಿಗೆ ತೆರಳಿದ್ದು, ಅಲ್ಲಿ ಸೆಪ್ಟೆಂಬರ್ 30ರಂದು ಅಭ್ಯಾಸ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದ್ದಾರೆ.

ಇದನ್ನೂ ಓದಿ: IND vs AUS: ಏಕದಿನ ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದ ಕೊಹ್ಲಿ, ರಿಕಿ ಪಾಂಟಿಂಗ್ ದಾಖಲೆ ಉಡೀಸ್

ಆಸ್ಟ್ರೇಲಿಯಾ ಸರಣಿಯಲ್ಲಿ ಅದ್ಭುತ ಪ್ರದರ್ಶನ!  

ಆಸ್ಟ್ರೇಲಿಯ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಅಶ್ವಿನ್‌ಗೆ ಅವಕಾಶ ಸಿಕ್ಕಿದ್ದು, ಅದರಲ್ಲಿ ಅವರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಇಂದೋರ್‌ನಲ್ಲಿ ನಡೆದ ಸರಣಿಯ 2ನೇ ಏಕದಿನ ಪಂದ್ಯದಲ್ಲಿ ಅವರು 3 ವಿಕೆಟ್ ಪಡೆದರೆ, ಮೊಹಾಲಿಯಲ್ಲಿ 1 ವಿಕೆಟ್ ಕೂಡ ಪಡೆದರು. ಈ ಮೂಲಕ ಸರಣಿಯಲ್ಲಿ 2 ಪಂದ್ಯ ಆಡಿ 4 ವಿಕೆಟ್ ಕಬಳಿಸಿದ್ದಾರೆ. ಕುತೂಹಲವೆಂದರೆ ಅಶ್ವಿನ್ ಸುಮಾರು 20 ತಿಂಗಳ ನಂತರ ತಂಡಕ್ಕೆ ಮರಳಿದ್ದರು. ಇದೀಗ ಅದೃಷ್ಟವೆಂಬಂತೆ ವಿಶ್ವಕಪ್‌ ಟೂರ್ನಿಗೆ ಟಿಕೆಟ್ ಪಡೆದಿದ್ದಾರೆ.

ಅನುಭವಿ ಬೌಲರ್ ಅಶ್ವಿನ್‌

ಆರ್.ಅಶ್ವಿನ್ 115 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ ಅನುಭವ ಹೊಂದಿದ್ದಾರೆ. ಏಕದಿನದಲ್ಲಿ155 ವಿಕೆಟ್ ಕಬಳಿಸಿರುವ ಅಶ್ವಿನ್, ಟೆಸ್ಟ್‌ನ 94 ಪಂದ್ಯಗಳಲ್ಲಿ 489 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದಲ್ಲದೇ 65 ಟಿ-20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 72 ವಿಕೆಟ್ ಪಡೆದಿದ್ದಾರೆ.

ಇದನ್ನೂ ಓದಿ: ಆಸ್ಟ್ರೇಲಿಯಾ ಬ್ಯಾಟರ್‌ ಮಾರ್ನಸ್ ಮುಂದೆ ವಿರಾಟ್ ಕೊಹ್ಲಿ ಡ್ಯಾನ್ಸ್‌ : ವಿಡಿಯೋ ವೈರಲ್‌

12 ವರ್ಷಗಳ ನಂತರ ದೊಡ್ಡ ಅವಕಾಶ!

12 ವರ್ಷಗಳ ನಂತರ ಭಾರತ ತಂಡಕ್ಕೆ ಏಕದಿನ ವಿಶ್ವಕಪ್ ಗೆಲ್ಲುವ ದೊಡ್ಡ ಅವಕಾಶವಿದೆ. ಟೀಂ ಇಂಡಿಯಾ 2011ರಲ್ಲಿ ತನ್ನ ಆತಿಥ್ಯದಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿ ಗೆದ್ದು ವಿಶ್ವಚಾಂಪಿಯನ್ ಎನಿಸಿಕೊಂಡಿತ್ತು. ಈ ಬಾರಿಯೂ ಭಾರತವೇ ವಿಶ್ವಕಪ್‌ಗೆ ಆತಿಥ್ಯ ವಹಿಸುತ್ತಿದೆ. ಐಸಿಸಿ ಟೂರ್ನಿಯಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News