ನವದೆಹಲಿ: ಸತತ ಸೋಲುಗಳಿಂದ ಕಂಗೆಟ್ಟಿರುವ ಪಾಕಿಸ್ತಾನ ತಂಡಕ್ಕೆ ಐಸಿಸಿ ದೊಡ್ಡ ಶಿಕ್ಷೆ ನೀಡಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ವಿಶ್ವಕಪ್ ಪಂದ್ಯದ ವೇಳೆ ನಿಧಾನಗತಿಯ ಓವರ್ ಮಾಡಿದ್ದಕ್ಕಾಗಿ ಪಾಕಿಸ್ತಾನ ಆಟಗಾರರು ತಮ್ಮ ಪಂದ್ಯ ಶುಲ್ಕದ ಶೇ.20ರಷ್ಟು ದಂಡವನ್ನು ವಿಧಿಸಿದ್ದಾರೆ. ಶುಕ್ರವಾರ ನಡೆದ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 1 ವಿಕೆಟ್‌ನಿಂದ ರೋಚಕ ಜಯ ದಾಖಲಿಸಿತ್ತು. ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪ್ರಕಾರ, ಬಾಬರ್ ಅಜಮ್ ನೇತೃತ್ವದ ಪಾಕಿಸ್ತಾನ ತಂಡವು ನಿಗದಿತ ಸಮಯದಲ್ಲಿ 4 ಓವರ್ಗಳನ್ನು ಕಡಿತಗೊಳಿಸಿತು, ನಂತರ ಮ್ಯಾಚ್ ರೆಫರಿ ರಿಚಿ ರಿಚರ್ಡ್ಸನ್ ಈ ದಂಡವನ್ನು ವಿಧಿಸಿದರು.


COMMERCIAL BREAK
SCROLL TO CONTINUE READING

PAK ತಂಡದ ಮೇಲೆ ಸಂಕಷ್ಟಗಳ ಬೆಟ್ಟ!: ಪಾಕಿಸ್ತಾನದ ಆಟಗಾರರು ಮತ್ತು ಅವರ ಸಹಾಯಕ ಸಿಬ್ಬಂದಿಗೆ ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.22ರ ಪ್ರಕಾರ, ನಿಗದಿತ ಸಮಯದಲ್ಲಿ 1 ಓವರ್ ಕಡಿಮೆ ಮಾಡಿದ ಆಟಗಾರರಿಗೆ ಅವರ ಪಂದ್ಯದ ಶುಲ್ಕದ ಶೇ.5ರಷ್ಟು ದಂಡ ವಿಧಿಸಲಾಗುತ್ತದೆ. ಪಾಕಿಸ್ತಾನದ ನಾಯಕ ಬಾಬರ್ ಅಜಮ್ ತಮ್ಮ ಈ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಈ ಪ್ರಕರಣದಲ್ಲಿ ಔಪಚಾರಿಕ ವಿಚಾರಣೆಯ ಅಗತ್ಯವಿಲ್ಲವೆಂದು ತಿಳಿದುಬಂದಿದೆ.


ಇದನ್ನೂ ಓದಿ: ಆಸ್ಟ್ರೇಲಿಯಾ vs ನ್ಯೂಜಿಲ್ಯಾಂಡ್ ಪಂದ್ಯದಲ್ಲಿ ಬರೋಬ್ಬರಿ 771 ರನ್ ದಾಖಲು: ಇದು ವಿಶ್ವಕಪ್ ಇತಿಹಾಸದಲ್ಲೇ ಅತಿ ಹೆಚ್ಚು ಸ್ಕೋರ್


ಸೆಮಿಫೈನಲ್‌ ರೇಸ್‌ನಿಂದ ಬಹುತೇಕ ಹೊರಬಿದ್ದ ಪಾಕ್!: 2023ರ ವಿಶ್ವಕಪ್‌ನ ಸೆಮಿಫೈನಲ್‌ಗೆ ತಲುಪುವ ಪಾಕಿಸ್ತಾನದ ಕನಸು ನುಚ್ಚುನೂರಾಗಿದೆ. ಶುಕ್ರವಾರ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 1 ವಿಕೆಟ್‌ನಿಂದ ಪಾಕಿಸ್ತಾನದ ವಿರುದ್ಧ ರೋಚಕ ಜಯ ದಾಖಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ 46.4 ಓವರ್‌ಗಳಲ್ಲಿ 270 ರನ್‌ಗಳಿಗೆ ಆಲೌಟಾಯಿತು. ಇದಕ್ಕೆ ಉತ್ತರವಾಗಿ ದಕ್ಷಿಣ ಆಫ್ರಿಕಾ 47.2 ಓವರ್‌ಗಳಲ್ಲಿ 9 ವಿಕೆಟ್‌ಗೆ 271 ರನ್ ಗಳಿಸಿ ಜಯ ಸಾಧಿಸಿತು.


ದಕ್ಷಿಣ ಆಫ್ರಿಕಾಗೆ ಅಗ್ರಸ್ಥಾನ: ಈ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ 6 ಪಂದ್ಯಗಳಿಂದ 10 ಅಂಕ ಗಳಿಸಿ ಅಂಕಪಟ್ಟಿಯಲ್ಲಿ ಭಾರತವನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದೆ. ಪಾಕಿಸ್ತಾನಕ್ಕೆ ಇದು ಸತತ 4ನೇ ಸೋಲಾಗಿದ್ದು, 6 ಪಂದ್ಯಗಳಲ್ಲಿ ಕೇವಲ 4 ಅಂಕಗಳನ್ನು ಹೊಂದಿದೆ. ಇದು ಸೆಮಿಫೈನಲ್ ತಲುಪುವ ಭರವಸೆಗೆ ಭಾರಿ ಹೊಡೆತ ನೀಡಿದೆ. ಮಾರ್ಕ್ರಾಮ್ ಪಾಕಿಸ್ತಾನಕ್ಕೆ ದೊಡ್ಡ ವಿಲನ್ ಆದರು. 93 ಎಸೆತಗಳಲ್ಲಿ 7 ಬೌಂಡರಿ ಮತ್ತು 3 ಸಿಕ್ಸರ್ ಒಳಗೊಂಡ 91 ರನ್ ಗಳಿಸಿದ ಅವರು ತಂಡದ ಗೆಲುವಿಗೆ ಉತ್ತಮ ಕೊಡುಗೆ ನೀಡಿದರು. ಮಾರ್ಕ್ರಾಮ್ ಔಟಾದ ನಂತರ, ಕೇಶವ್ ಮಹಾರಾಜ್ ಹೆಚ್ಚುಹೊತ್ತು ಕ್ರೀಸ್‍ನಲ್ಲಿ ನಿಂತು ತಂಡಕ್ಕೆ ಅದ್ಭುತ ಗೆಲುವು ತಂದುಕೊಟ್ಟರು. 21 ಎಸೆತಗಳಲ್ಲಿ ಕೇವಲ 7 ರನ್ ಗಳಿಸಿದರೂ ಅವರು ಹೀರೋ ಆದರು. ಮೊಹಮ್ಮದ್ ನವಾಜ್ ಎಸೆವನ್ನು ಫೋರ್ ಹೊಡೆಯುವ ಮೂಲಕ ತಂಡದ ರೋಚಕ ಗೆಲುವಿಗೆ ಕಾರಣರಾದರು.


ಇದನ್ನೂ ಓದಿ: ನೆದರ್ಲ್ಯಾಂಡ್ಸ್-ಆಸೀಸ್ ಗೆಲುವಿನಿಂದ ಪಾಯಿಂಟ್ಸ್ ಟೇಬಲ್’ನಲ್ಲಿ ಬದಲಾವಣೆ! ಈಗ ಎಷ್ಟನೇ ಸ್ಥಾನದಲ್ಲಿದೆ ಭಾರತ?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.