ICC World Cup 2023: ಲಾರಾ ದಾಖಲೆ ಮುರಿಯುವ ಹೊಸ್ತಿಲಿನಲ್ಲಿ ಕಿಂಗ್ ಕೊಹ್ಲಿ..!
ICC World Cup 2023: ಭಾರತ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಐಸಿಸಿ ವಿಶ್ವಕಪ್ ಟೂರ್ನಿಯ ಮುಂದಿನ ಪಂದ್ಯದಲ್ಲಿ ಹೊಸ ದಾಖಲೆ ನಿರ್ಮಿಸಲಿದ್ದಾರೆ. ಅಕ್ಟೋಬರ್ 19ರ ಗುರುವಾರ ಬಾಂಗ್ಲಾದೇಶದ ವಿರುದ್ಧ ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಕೊಹ್ಲಿ ಶ್ರೇಷ್ಠ ಬ್ಯಾಟ್ಸ್‌ಮನ್ ಬ್ರಿಯಾನ್ ಲಾರಾ ಹೆಸರಿನಲ್ಲಿರುವ ಶ್ರೇಷ್ಠ ದಾಖಲೆ ಮುರಿಯುವ ಸಾಧ್ಯತೆಯಿದೆ.
ನವದೆಹಲಿ: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಹೊಸದೊಂದು ದಾಖಲೆ ನಿರ್ಮಿಸುವ ತವಕದಲ್ಲಿದ್ದಾರೆ. ಅಕ್ಟೋಬರ್ 19ರ ಗುರುವಾರ ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಈ ಸಾಧನೆ ಮಾಡುವ ಸಾಧ್ಯತೆ ಇದೆ. ವಿರಾಟ್ ಕೊಹ್ಲಿ ಅವರು ವಿಶ್ವಕಪ್‌ನಲ್ಲಿ ವೆಸ್ಟ್ ಇಂಡೀಸ್ ಶ್ರೇಷ್ಠ ಬ್ಯಾಟ್ಸ್‌ಮನ್ ಬ್ರಿಯಾನ್ ಲಾರಾರ ದೊಡ್ಡ ದಾಖಲೆಯನ್ನು ಮುರಿಯಲಿದ್ದಾರೆ. ಈ ಮೂಲಕ ಸ್ಟಾರ್ ಬ್ಯಾಟ್ಸ್‌ಮನ್ ಕಿಂಗ್ ಕೊಹ್ಲಿ ವಿಶೇಷ ಹಾಗೂ ದೊಡ್ಡ ಸಾಧನೆ ಮಾಡಲಿದ್ದಾರೆ.
ಲಾರಾ ದಾಖಲೆ ಮುರಿಯುವ ತವಕದಲ್ಲಿ ಕೊಹ್ಲಿ
ಅ.19ರಂದು ಬಾಂಗ್ಲಾದೇಶ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 40 ರನ್ ಗಳಿಸಿದರೆ ದೊಡ್ಡ ದಾಖಲೆ ನಿರ್ಮಿಸಲಿದ್ದಾರೆ. ಭಾರತ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯವು ಅ.19ರ ಗುರುವಾರ ಪುಣೆಯ MCA ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಕೊಹ್ಲಿ 40 ರನ್ ಗಳಿಸಿದರೆ ಏಕದಿನ ವಿಶ್ವಕಪ್ನಲ್ಲಿ ಅತಿಹೆಚ್ಚು ರನ್ ಗಳಿಸಿದ ಆಟಗಾರರಲ್ಲಿ 4ನೇ ಸ್ಥಾನಕ್ಕೆ ತಲುಪುತ್ತಾರೆ.
ಇದನ್ನೂ ಓದಿ: “ಕ್ರಿಕೆಟ್ ಕೇವಲ ಕ್ರೀಡೆಯಲ್ಲ, ಅದೊಂದು ಧರ್ಮ”: 2028ರ ಒಲಿಂಪಿಕ್ಸ್’ಗೆ ಕ್ರಿಕೆಟ್ ಸೇರ್ಪಡೆ ಸ್ವಾಗತಿಸಿದ ನೀತಾ ಅಂಬಾನಿ
ಬಾಂಗ್ಲಾದೇಶ ವಿರುದ್ಧ ಈ ಸಾಧನೆ ಮಾಡಬೇಕಿದೆ
ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ 40 ರನ್ ಗಳಿಸಿದ್ರೆ ವಿಶ್ವಕಪ್ ಟೂರ್ನಿಯಲ್ಲಿ 1226 ರನ್ ಪೂರೈಸುತ್ತಾರೆ. ಈ ಮೂಲಕ ಕೊಹ್ಲಿ ಅವರು ಲಾರಾರನ್ನು ಹಿಂದಿಕ್ಕಿ ಏಕದಿನ ವಿಶ್ವಕಪ್ನಲ್ಲಿ ಅತಿಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ತಲುಪಲಿದ್ದಾರೆ. ಭಾರತದ ಶ್ರೇಷ್ಠ ಬ್ಯಾಟ್ಸ್‌ಮನ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಏಕದಿನ ವಿಶ್ವಕಪ್ನಲ್ಲಿ ಅತಿಹೆಚ್ಚು ರನ್ ಗಳಿಸಿದವರಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
2278 ರನ್ ಗಳಿಸಿರುವ ಸಚಿನ್ ತೆಂಡೂಲ್ಕರ್!
ಸಚಿನ್ ತೆಂಡೂಲ್ಕರ್ ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಗರಿಷ್ಠ 2278 ರನ್ ಗಳಿಸಿದ್ದಾರೆ. 1743 ರನ್ ಗಳಿಸಿರುವ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಏಕದಿನ ವಿಶ್ವಕಪ್ನಲ್ಲಿ ಅತಿಹೆಚ್ಚು ರನ್ ಗಳಿಸಿದವರಲ್ಲಿ 2ನೇ ಸ್ಥಾನದಲ್ಲಿದ್ದಾರೆ. 1532 ರನ್ ಗಳಿಸಿರುವ ಶ್ರೀಲಂಕಾದ ಮಾಜಿ ಬ್ಯಾಟ್ಸ್‌ಮನ್ ಕುಮಾರ್ ಸಂಗಕ್ಕಾರ ಈ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ.
ಇದನ್ನೂ ಓದಿ: ವಿಶ್ವಕಪ್ ಬಳಿಕ ನಿವೃತ್ತಿ ಘೋಷಣೆಗೆ ಮುಂದಾದ ನಾಯಕ! 23ರ ಹರೆಯದ ಬಲಗೈ ಲೆಗ್ ಸ್ಪಿನ್ನರ್ ಮುಂದಿನ ಕ್ಯಾಪ್ಟನ್..!
ವಿಶ್ವಕಪ್‌ನಲ್ಲಿ ಅತಿಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‍ಗಳು
1. ಸಚಿನ್ ತೆಂಡೂಲ್ಕರ್ (ಭಾರತ) - 2278 ರನ್
2. ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ) - 1743 ರನ್
3. ಕುಮಾರ್ ಸಂಗಕ್ಕಾರ (ಶ್ರೀಲಂಕಾ) – 1532 ರನ್
4. ಬ್ರಿಯಾನ್ ಲಾರಾ (ವೆಸ್ಟ್ ಇಂಡೀಸ್) - 1225 ರನ್
5. ಎಬಿ ಡಿವಿಲಿಯರ್ಸ್ (ದಕ್ಷಿಣ ಆಫ್ರಿಕಾ) - 1207 ರನ್
6. ಶಕೀಬ್ ಅಲ್ ಹಸನ್ (ಬಾಂಗ್ಲಾದೇಶ) - 1201 ರನ್
7. ರೋಹಿತ್ ಶರ್ಮಾ (ಭಾರತ) - 1195 ರನ್
8. ವಿರಾಟ್ ಕೊಹ್ಲಿ (ಭಾರತ) - 1186 ರನ್
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.