ICC World Cup 2023: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ವಿಶ್ವಕಪ್ ಉದ್ಘಾಟನಾ ಸಮಾರಂಭ

ICC ODI World Cup 2023: ವಿಶ್ವಕಪ್ ಪಂದ್ಯಾವಳಿಗೂ ಒಂದು ದಿನದ ಮೊದಲು ಅಕ್ಟೋಬರ್ 4ರಂದು ಅದ್ದೂರಿ ಉದ್ಘಾಟನಾ ಸಮಾರಂಭ ನಡೆಯಲಿದೆ. 12 ವರ್ಷಗಳ ನಂತರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿ ಭಾರತದಲ್ಲಿ ನಡೆಯುತ್ತಿದೆ.

Written by - Puttaraj K Alur | Last Updated : Aug 28, 2023, 01:23 PM IST
  • ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಉದ್ಘಾಟನಾ ಸಮಾರಂಭ
  • 12 ವರ್ಷಗಳ ನಂತರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿ ಭಾರತದಲ್ಲಿ ನಡೆಯುತ್ತಿದೆ
  • ಏಕದಿನ ವಿಶ್ವಕಪ್‌ ಟೂರ್ನಿಯ 11ನೇ ಆವೃತ್ತಿಯು ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ನಡೆಯಲಿದೆ
ICC World Cup 2023: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ವಿಶ್ವಕಪ್ ಉದ್ಘಾಟನಾ ಸಮಾರಂಭ   title=
ICC ODI World Cup 2023

ನವದೆಹಲಿ: ಅಹಮದಾಬಾದ್‌ನ ಹೊರವಲಯದಲ್ಲಿರುವ ಸಾಬರಮತಿ ನದಿಯ ದಡದಲ್ಲಿ ನಿರ್ಮಿಸಲಾಗಿರುವ ವಿಶ್ವದ ಅತಿ ದೊಡ್ಡ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಉದ್ಘಾಟನಾ ಸಮಾರಂಭ ನಡೆಯಲಿದೆ. ವಿಶ್ವಕಪ್ ಪಂದ್ಯಾವಳಿಗೂ ಒಂದು ದಿನದ ಮೊದಲು ಅಕ್ಟೋಬರ್ 4ರಂದು ಅದ್ದೂರಿ ಉದ್ಘಾಟನಾ ಸಮಾರಂಭ ನಡೆಯಲಿದೆ. 12 ವರ್ಷಗಳ ನಂತರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿ ಭಾರತದಲ್ಲಿ ನಡೆಯುತ್ತಿದೆ.

ಅಕ್ಟೋಬರ್-ನವೆಂಬರ್​ನಲ್ಲಿ ನಡೆಯಲಿರುವ ವಿಶ್ವಕಪ್ ಟೂರ್ನಿಗೆ ಇದೇ ಮೊದಲ ಬಾರಿ ಭಾರತ ಸಂಪೂರ್ಣ ಆತಿಥ್ಯ ವಹಿಸುತ್ತಿದೆ. 2011ರಲ್ಲಿ ಬಾಂಗ್ಲಾದೇಶ ಮತ್ತು ಶ್ರೀಲಂಕಾದೊಂದಿಗೆ ಭಾರತ ಆತಿಥ್ಯ ವಹಿಸಿತ್ತು. 1996 ಮತ್ತು 1987ರಲ್ಲಿ ಸಹ ಭಾರತ ಜಂಟಿ ಆತಿಥ್ಯವನ್ನು ವಹಿಸಿಕೊಂಡಿತ್ತು.   

ಇದನ್ನೂ ಓದಿ: WACಯಲ್ಲಿ ಚಿನ್ನ ಗೆದ್ದು ಇತಿಹಾಸ ಸೃಷ್ಟಿಸಿದ ನೀರಜ್ ಚೋಪ್ರಾ 88.17 ಮೀಟರ್ ದೂರ ಜಾವೆಲಿನ್ ಎಸೆದ ವಿಡಿಯೋ

ಏಕದಿನ ವಿಶ್ವಕಪ್‌ ಟೂರ್ನಿಯ 11ನೇ ಆವೃತ್ತಿಯು ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ದೇಶದ ವಿವಿಧ ಮೈದಾನಗಳಲ್ಲಿ ನಡೆಯಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣವು ಅಕ್ಟೋಬರ್ 14ರಂದು ಭಾರತ ಮತ್ತು ಪಾಕಿಸ್ತಾನ ನಡುವಿನ ಆರಂಭಿಕ ಪಂದ್ಯ ಮತ್ತು ಫೈನಲ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ.

ಟೀಂ ಇಂಡಿಯಾ ಅಕ್ಟೋಬರ್ 8ರಂದು ಆಸ್ಟ್ರೇಲಿಯಾ ವಿರುದ್ಧ ವಿರುದ್ಧ ಮೊದಲ ಪಂದ್ಯವನ್ನು ಆಡುವ ಮೂಲಕ ವಿಶ್ವಕಪ್ ಅಭಿಯಾನ ಪ್ರಾರಂಭಿಸಲಿದೆ. ಅ.11ರಂದು ಅಫ್ಘಾನಿಸ್ತಾನ, ಅ.14ರಂದು ಪಾಕಿಸ್ತಾನ, ಅ.19ರಂದು ಬಾಂಗ್ಲಾದೇಶ, ಅ.29ರಂದು ನ್ಯೂಜಿಲೆಂಡ್, ಅ.29ರಂದು ಇಂಗ್ಲೆಂಡ್, ನವೆಂಬರ್ 2ರಂದು ಶ್ರೀಲಂಕಾ, ನ.5ರಂದು ದಕ್ಷಿಣ ಆಫ್ರಿಕಾ ಮತ್ತು ನ.12ರಂದು ನೆದರ್ಲ್ಯಾಂಡ್ಸ್ ವಿರುದ್ಧ ಸೆಣಸಾಡಲಿದೆ.

ಇದನ್ನೂ ಓದಿ: ಕ್ರಿಕೆಟ್ ಇತಿಹಾಸದಲ್ಲಿ Team India ಪರ ಅತೀ ಹೆಚ್ಚು ‘ಪಂದ್ಯ ಶ್ರೇಷ್ಠ’ ಪ್ರಶಸ್ತಿ ಪಡೆದ ಆಟಗಾರ ಯಾರು?

ನ.15ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಮೊದಲ ಸೆಮಿಫೈನಲ್ ಪಂದ್ಯ ನಡೆಯಲಿದೆ. ನ.16ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‍ ಮೈದಾನದಲ್ಲಿ 2ನೇ ಸೆಮಿಫೈನಲ್ ಪಂದ್ಯವನ್ನು ಆಯೋಜಿಸಲಾಗಿದೆ. ನ.19ರಂದು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ನಡೆಯಲಿದೆ.  

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News