ICC World Test Championship: ಇಂಗ್ಲೆಂಡ್ ವಿರುದ್ಧ 4-1 ಅಂತರದಲ್ಲಿ ಗೆದ್ದು, ಅಗ್ರ ಸ್ಥಾನಕ್ಕೇರಿದ ಭಾರತ

ಭಾರತ ತಂಡ ಇಂಗ್ಲೆಂಡ್ ವಿರುದ್ಧದ 5ನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ  64 ರನ್ ಗಳ ಭರ್ಜರಿ ಗೆಲುವು ಸಾಧಿಸಿ,  4-1 ಅಂತರದಲ್ಲಿ ಗೆದ್ದಿತು ಮತ್ತು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಅಂಕ ಪಟ್ಟಿಯಲ್ಲೂ ಅಗ್ರ ಸ್ಥಾನಕ್ಕೇರಿದೆ.  

Written by - Zee Kannada News Desk | Last Updated : Mar 9, 2024, 09:33 PM IST
  • ಇಂಗ್ಲೆಂಡ್ ವಿರುದ್ಧದ 5ನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಮತ್ತು 64 ರನ್ ಗಳ ಭರ್ಜರಿ ಗೆಲುವು ಸಾಧಿಸಿದ ಭಾರತ ತಂಡ ಟೆಸ್ಟ್ ಸರಣಿಯನ್ನು 4-1 ಅಂತರದಲ್ಲಿ ಕೈವಶ ಮಾಡಿಕೊಂಡಿದೆ.
  • ಈ ಗೆಲುವಿನೊಂದಿಗೆ ಭಾರತವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನ ಪಾಯಿಂಟ್ಸ್ ಟೇಬಲ್​​ನಲ್ಲಿ (WTC Point Table) ಅಗ್ರಸ್ಥಾನಕ್ಕೇರಿದೆ.
  • ಭಾರತ ತಂಡ ಆಡಿರುವ 9 ಪಂದ್ಯಗಳಲ್ಲಿ 6 ಗೆಲುವು, 2 ಸೋಲು ಹಾಗೂ 1 ಡ್ರಾ ಸಾಧಿಸಿರುವ ರೋಹಿತ್ ಶರ್ಮಾ ಪಡೆ 68.51ರ ಸರಾಸರಿಯಲ್ಲಿ ಅಗ್ರಸ್ಥಾನದಲ್ಲಿದೆ.
ICC World Test Championship: ಇಂಗ್ಲೆಂಡ್ ವಿರುದ್ಧ 4-1 ಅಂತರದಲ್ಲಿ ಗೆದ್ದು, ಅಗ್ರ ಸ್ಥಾನಕ್ಕೇರಿದ ಭಾರತ title=

ICC World Test Championship : ಇಂಗ್ಲೆಂಡ್ ವಿರುದ್ಧದ 5ನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಮತ್ತು 64 ರನ್ ಗಳ ಭರ್ಜರಿ ಗೆಲುವು ಸಾಧಿಸಿದ ಭಾರತ ತಂಡ ಟೆಸ್ಟ್ ಸರಣಿಯನ್ನು 4-1 ಅಂತರದಲ್ಲಿ ಕೈವಶ ಮಾಡಿಕೊಂಡಿದ್ದು ಮಾತ್ರವಲ್ಲದೇ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಅಂಕ ಪಟ್ಟಿಯಲ್ಲೂ ಅಗ್ರ ಸ್ಥಾನಕ್ಕೇರಿದೆ.

 ಹೈದರಾಬಾದ್​ನಲ್ಲಿ ನಡೆದ ಆರಂಭಿಕ ಟೆಸ್ಟ್​ನಲ್ಲಿ ಸೋತ ನಂತರ ಭಾರತವು ಮುಂದಿನ ನಾಲ್ಕು ಪಂದ್ಯಗಳನ್ನು ನಿರಾಯಸವಾಗಿ ಗೆದ್ದುಕೊಂಡಿತು ಇವತ್ತು ಧರ್ಮಶಾಲಾದಲ್ಲಿ ನಡೆದ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ ಇನ್ನಿಂಗ್ಸ್ ಮತ್ತು 64 ರನ್​ಗಳ ಭರ್ಜರಿ ಜಯದೊಂದಿಗೆ ಸರಣಿಯನ್ನು 4-1 ಅಂತರದಿಂದ ಗೆದ್ದುಕೊಂಡಿತು 

ಇಂಗ್ಲೆಂಡ್ ವಿರುದ್ಧದ 5ನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಮತ್ತು 64 ರನ್ ಗಳ ಭರ್ಜರಿ ಗೆಲುವು ಸಾಧಿಸಿದ ಭಾರತ ತಂಡ ಟೆಸ್ಟ್ ಸರಣಿಯನ್ನು 4-1 ಅಂತರದಲ್ಲಿ ಕೈವಶ ಮಾಡಿಕೊಂಡಿದೆ. 

ಈ ಗೆಲುವಿನೊಂದಿಗೆ ಭಾರತವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನ ಪಾಯಿಂಟ್ಸ್ ಟೇಬಲ್​​ನಲ್ಲಿ (WTC Point Table) ಅಗ್ರಸ್ಥಾನಕ್ಕೇರಿದೆ. ಮಾತ್ರವಲ್ಲದೇ ಭರ್ಜರಿ ಗೆಲುವಿನೊಂದಿಗೆ ಪಟ್ಟಿಯಲ್ಲಿನ ಅಂಕಗಳ ಶೇಕಡಾವಾರು ಅನುಪಾತವನ್ನು ಸುಧಾರಿಸಿಕೊಂಡಿದೆ.

ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನ

ಇಂಗ್ಲೆಂಡ್ ವಿರುದ್ಧದ ಗೆಲುವಿನ ನಂತರ ಭಾರತ ಪ್ರಸ್ತುತ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದು, ಭಾರತ ಒಟ್ಟು 12 ನಿರ್ಣಾಯಕ ಅಂಕಗಳನ್ನು ತನ್ನ ಖಾತೆಗೆ ಸೇರಿಕೊಂಡಿದೆ. ಒಟ್ಟಾರೆ 74 ಅಂಕಗಳೊಂದಿಗೆ ಅಗ್ರ ಸ್ಥಾನಕ್ಕೇರಿದೆ. ಭಾರತ ತಂಡ ಆಡಿರುವ 9 ಪಂದ್ಯಗಳಲ್ಲಿ 6 ಗೆಲುವು, 2 ಸೋಲು ಹಾಗೂ 1 ಡ್ರಾ ಸಾಧಿಸಿರುವ ರೋಹಿತ್ ಶರ್ಮಾ ಪಡೆ 68.51ರ ಸರಾಸರಿಯಲ್ಲಿ ಅಗ್ರಸ್ಥಾನದಲ್ಲಿದೆ.

17.50 ಪಾಯಿಂಟ್​ನೊಂದಿಗೆ ಎಂಟನೇ ಸ್ಥಾನಕ್ಕೆ ಕುಸಿದ ಇಂಗ್ಲೆಂಡ್ ಇದುವರೆಗೆ ಆಡಿದ 10 ಟೆಸ್ಟ್ ಪಂದ್ಯಗಳಲ್ಲಿ ಆರು ಮುಖಾಮುಖಿಗಳಲ್ಲಿ ಸೋಲುಗಳನ್ನು ಎದುರಿಸಿದೆ. ಭಾರತ ತಂಡಕ್ಕಿಂತ ಸ್ವಲ್ಪ ಕೆಳಗಿರುವ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಪ್ರಸ್ತುತ ನಡೆಯುತ್ತಿರುವ ಸರಣಿಯ ಅಂತ್ಯದ ವೇಳೆಗೆ ಡಬ್ಲ್ಯುಟಿಸಿ ಪಾಯಿಂಟ್ಸ್ ಟೇಬಲ್​ನಲ್ಲಿ ತಮ್ಮ ಸ್ಥಾನವನ್ನು ಬಲಪಡಿಸಲು ಎದುರು ನೋಡುತ್ತಿವೆ.

WTC ಅಂಕ ಪಟ್ಟಿಯ ಪ್ರಕಾರ, ಭಾರತ ತಂಡ 64.58 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ನ್ಯೂಜಿಲೆಂಡ್ (60) 2ನೇ ಸ್ಥಾನ, ಆಸ್ಟ್ರೇಲಿಯಾ (59.09) 3ನೇ ಸ್ಥಾನದಲ್ಲಿದೆ.

ಭಾರತದ ಮುಂದಿನ ಸರಣಿಗಳು

ಭಾರತಕ್ಕೆ ಮುಂಬರುವ ಟೆಸ್ಟ್​​ ಸವಾಲುಗಳು ಈ ವರ್ಷದ ಕೊನೆಯಲ್ಲಿ ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ಎದುರಾಗಲಿದೆ. ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಕೂಡ ರೋಹಿತ್ ಶರ್ಮಾ ಪಡೆಗೆ ನಿರ್ಣಾಯಕವಾಗಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News