ICC World Test Championship : ಇಂಗ್ಲೆಂಡ್ ವಿರುದ್ಧದ 5ನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಮತ್ತು 64 ರನ್ ಗಳ ಭರ್ಜರಿ ಗೆಲುವು ಸಾಧಿಸಿದ ಭಾರತ ತಂಡ ಟೆಸ್ಟ್ ಸರಣಿಯನ್ನು 4-1 ಅಂತರದಲ್ಲಿ ಕೈವಶ ಮಾಡಿಕೊಂಡಿದ್ದು ಮಾತ್ರವಲ್ಲದೇ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಅಂಕ ಪಟ್ಟಿಯಲ್ಲೂ ಅಗ್ರ ಸ್ಥಾನಕ್ಕೇರಿದೆ.


COMMERCIAL BREAK
SCROLL TO CONTINUE READING

 ಹೈದರಾಬಾದ್​ನಲ್ಲಿ ನಡೆದ ಆರಂಭಿಕ ಟೆಸ್ಟ್​ನಲ್ಲಿ ಸೋತ ನಂತರ ಭಾರತವು ಮುಂದಿನ ನಾಲ್ಕು ಪಂದ್ಯಗಳನ್ನು ನಿರಾಯಸವಾಗಿ ಗೆದ್ದುಕೊಂಡಿತು ಇವತ್ತು ಧರ್ಮಶಾಲಾದಲ್ಲಿ ನಡೆದ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ ಇನ್ನಿಂಗ್ಸ್ ಮತ್ತು 64 ರನ್​ಗಳ ಭರ್ಜರಿ ಜಯದೊಂದಿಗೆ ಸರಣಿಯನ್ನು 4-1 ಅಂತರದಿಂದ ಗೆದ್ದುಕೊಂಡಿತು 


ಇಂಗ್ಲೆಂಡ್ ವಿರುದ್ಧದ 5ನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಮತ್ತು 64 ರನ್ ಗಳ ಭರ್ಜರಿ ಗೆಲುವು ಸಾಧಿಸಿದ ಭಾರತ ತಂಡ ಟೆಸ್ಟ್ ಸರಣಿಯನ್ನು 4-1 ಅಂತರದಲ್ಲಿ ಕೈವಶ ಮಾಡಿಕೊಂಡಿದೆ. 


ಈ ಗೆಲುವಿನೊಂದಿಗೆ ಭಾರತವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನ ಪಾಯಿಂಟ್ಸ್ ಟೇಬಲ್​​ನಲ್ಲಿ (WTC Point Table) ಅಗ್ರಸ್ಥಾನಕ್ಕೇರಿದೆ. ಮಾತ್ರವಲ್ಲದೇ ಭರ್ಜರಿ ಗೆಲುವಿನೊಂದಿಗೆ ಪಟ್ಟಿಯಲ್ಲಿನ ಅಂಕಗಳ ಶೇಕಡಾವಾರು ಅನುಪಾತವನ್ನು ಸುಧಾರಿಸಿಕೊಂಡಿದೆ.


ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನ


ಇಂಗ್ಲೆಂಡ್ ವಿರುದ್ಧದ ಗೆಲುವಿನ ನಂತರ ಭಾರತ ಪ್ರಸ್ತುತ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದು, ಭಾರತ ಒಟ್ಟು 12 ನಿರ್ಣಾಯಕ ಅಂಕಗಳನ್ನು ತನ್ನ ಖಾತೆಗೆ ಸೇರಿಕೊಂಡಿದೆ. ಒಟ್ಟಾರೆ 74 ಅಂಕಗಳೊಂದಿಗೆ ಅಗ್ರ ಸ್ಥಾನಕ್ಕೇರಿದೆ. ಭಾರತ ತಂಡ ಆಡಿರುವ 9 ಪಂದ್ಯಗಳಲ್ಲಿ 6 ಗೆಲುವು, 2 ಸೋಲು ಹಾಗೂ 1 ಡ್ರಾ ಸಾಧಿಸಿರುವ ರೋಹಿತ್ ಶರ್ಮಾ ಪಡೆ 68.51ರ ಸರಾಸರಿಯಲ್ಲಿ ಅಗ್ರಸ್ಥಾನದಲ್ಲಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.