Champions Trophy: ಸಖತ್ ಹೈಪ್ ಕ್ರಿಯೇಟ್ ಮಾಡಿದ್ದ ಚಾಂಪಿಯನ್ಸ್ ಟ್ರೋಫಿ ಇಂದು ಮುಕ್ತಾಯವಾಗಲಿದೆ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ vs ನ್ಯೂಜಿಲೆಂಡ್ ನಡುವೆ ಫೈನಲ್ ಫೈಟ್ ನಡೆಯಲಿದೆ. ಟೀಂ ಇಂಡಿಯಾವೇ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿದ್ದು, ಹಿಟ್‌ಮ್ಯಾನ್ ರೋಹಿತ್ ಶರ್ಮಾ ಪಡೆ ಗೆಲುವು ಸಾಧಿಸುತ್ತಾ ಅನ್ನೋದನ್ನ ಕಾದು ನೋಡಬೇಕಿದೆ. ಇಂದಿನ ಹೈವೋಲ್ಟೇಜ್ ಪಂದ್ಯದಲ್ಲಿ ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ರವೀದ್ರ ಜಡೇಜಾ ಮೇಲೆ ಹೆಚ್ಚಿನ ನಿರೀಕ್ಷೆಯನ್ನ ಇಟ್ಟುಕೊಳ್ಳಲಾಗಿದೆ. ಉಭಯ ತಂಡಗಳು ಬಲಿಷ್ಠವಾಗಿರುವ ಕಾರಣ ಗೆಲುವುಗಾಗಿ ಭರ್ಜರಿ ಸೆಣಸಾಟದ ನಿರೀಕ್ಷೆ ಇದೆ.
ಇಂದಿನ ಪಂದ್ಯದಲ್ಲಿ ಹಲವಾರು ದಾಖಲೆಗಳು ನಿರ್ಮಾಣವಾಗುವ ಸಾಧ್ಯತೆ ಇದೆ. ವಿಜಯಲಕ್ಷ್ಮಿಯಾಗಿ ಉಭಯ ತಂಡಗಳ ನಡುವಿನ ರೋಚಕ ಸೆಣಸಾಟವನ್ನು ವೀಕ್ಷಿಸಲು ಕೋಟ್ಯಂತರ ಅಭಿಮಾನಿಗಳು ತುದಿಗಾಲಿನ ಮೇಲೆ ನಿಂತು ಕಾಯುತ್ತಿದ್ದಾರೆ. ಪ್ರಮುಖವಾಗಿ ರೋಹಿತ್ ಶರ್ಮಾ ಮೇಲೆ ಅಭಿಮಾನಿಗಳು ಹೆಚ್ಚಿನ ನಿರೀಕ್ಷೆ ಇರಿಸಿದ್ದಾರೆ. ಏಕೆಂದರೆ ಚಾಂಪಿಯನ್ಸ್ ಟ್ರೋಫಿ ಬಳಿಕ ಹಿಟ್‌ಮ್ಯಾನ್ ನಿವೃತ್ತರಾಗಲಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಠಿ ನೀಡುವಂತೆ ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿದ್ದಾರೆ.
ಇದನ್ನೂ ಓದಿ: Rohit Sharma : ಇಂದು ಫೈನಲ್ ಪಂದ್ಯ ಮುಗಿಯುತ್ತಲೇ ರೋಹಿತ್ ಶರ್ಮಾ ನಿವೃತ್ತಿ..!? ಶುಭಮನ್ ಗಿಲ್ ಪ್ರಮುಖ ಹೇಳಿಕೆ
ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಸೋಲಿನ ಬಳಿಕ ರೋಹಿತ್ ಶರ್ಮ ನಿವೃತ್ತರಾಗಲಿದ್ದಾರೆ ಅಂತಾ ಹೇಳಲಾಗಿತ್ತು. ಗೌತಮ್ ಗಂಭೀರ್ ಕೋಚ್ ಆಗುವುದಕ್ಕೂ ಮುನ್ನ ಟಿ-20 ಮಾದರಿಗೆ ನಿವೃತ್ತಿ ಘೋಷಿಸಿದ್ದ ಹಿಟ್‌ಮ್ಯಾನ್ ರೋಹಿತ್ ಶರ್ಮಾ ನಂತರ ಏಕದಿನ ಹಾಗೂ ಟೆಸ್ಟ್ ಮಾದರಿಗೂ ನಿವೃತ್ತಿ ಘೋಷಿಸಲಿದ್ದಾರೆ ಅಂತಾ ಸುದ್ದಿಯಾಗಿತ್ತು. ಒಂದು ವೇಳೆ ಟೀಂ ಇಂಡಿಯಾ ಚಾಂಪಿಯನ್ಸ್ ಟ್ರೋಫಿಯಲ್ಲಿ ಗೆದ್ದರೆ ರೋಹಿತ್ ಶರ್ಮ ಸೇಫ್ ಎಂದು ಹೇಳಲಾಗಿದ್ದು, ಒಂದು ವೇಳೆ ಸೋತರೆ ನಿವೃತ್ತಿ ಘೋಷಿಸುವುದು ಅನಿವಾರ್ಯವಾಗಲಿದೆಯಂತೆ.
ಒಂದು ವೇಳೆ ರೋಹಿತ್ ಶರ್ಮಾ ಏಕದಿನ ಮಾದರಿಗೆ ನಿವೃತ್ತಿ ಘೋಷಿಸಿದ್ರೆ ಅವರ ಉತ್ತರಾಧಿಕಾರಿ ಯಾರು ಅನ್ನೋ ಗುಸುಗುಸು ಈಗಾಗಲೇ ಶುರುವಾಗಿದೆ. ಅವರ ಸ್ಥಾನಕ್ಕೆ ಪ್ರಮುಖವಾಗಿ ಕೇಳಿಬರುತ್ತಿರುವ ಹೆಸರುಗಳೆಂದರೆ ಹಾರ್ದಿಕ್ ಪಾಂಡ್ಯ ಹಾಗೂ ಶುಭಮನ್ ಗಿಲ್. ಹೌದು, ಒಂದು ವೇಳೆ ರೋಹಿತ್ ನಿವೃತ್ತಿ ಘೋಷಿಸದಿದ್ದರೆ ಅವರನ್ನ ಆಟಗಾರನನ್ನಾಗಿ ತಂಡದಲ್ಲಿ ಉಳಿಸಿಕೊಂಡು, ನಾಯಕತ್ವಕ್ಕೆ ಈ ಇಬ್ಬರ ಪೈಕಿ ಒಬ್ಬರಿಗೆ ಬಿಸಿಸಿಐ ಮಣೆ ಹಾಕಬಹುದು ಅಂತಾ ಹೇಳಲಾಗುತ್ತಿದೆ.
ಈ ಬಗ್ಗೆ ಮಾತನಾಡಿರುವ ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು, ʼರೋಹಿತ್ ಶರ್ಮ ನಿವೃತ್ತಿ ಕುರಿತು ನಮಗೆ ಹೆಚ್ಚಿನ ಮಾಹಿತಿ ತಿಳಿದಿಲ್ಲ. ಅವರ ನಾಯಕತ್ವದಲ್ಲಿ ತಂಡವು ಉತ್ತಮ ಪ್ರದರ್ಶನ ನೀಡುತ್ತಿದ್ದು, ಸದ್ಯಕ್ಕೆ ಅವರು ನಿವೃತ್ತರಾಗುತ್ತಾರೆಂಬ ಯಾವ ಪ್ರಸ್ತಾವನೆಯೂ ನಮ್ಮ ಮುಂದೆ ಬಂದಿಲ್ಲ. ಚಾಂಪಿಯನ್ಸ್ ಟ್ರೋಫಿ ಟೂರ್ನಿ ಮುಗಿದ ಬಳಿಕವೇ ಈ ಬಗ್ಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ. ಆ ನಂತರ ನಾವು ಪ್ರತಿಕ್ರಿಯಿಸುತ್ತೇವೆ ಅಂತಾ ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.









