IMD Forecast of 11 September 2023: ದೆಹಲಿ-ಎನ್‌’ಸಿಆರ್ ಸೇರಿದಂತೆ ದೇಶದಲ್ಲಿ ಮಾನ್ಸೂನ್ ಮತ್ತೆ ಸಕ್ರಿಯವಾಗಿದೆ. ಶನಿವಾರ ಮತ್ತು ಭಾನುವಾರ ಉತ್ತರ ಭಾರತದಲ್ಲಿ ನಿರಂತರವಾಗಿ ಮೋಡ ಕವಿದ ವಾತಾವರಣವಿದ್ದು, ಧಾರಾಕಾರವಾಗಿ ಮಳೆ ಸುರಿದಿದೆ.


COMMERCIAL BREAK
SCROLL TO CONTINUE READING

ಹವಾಮಾನ ಇಲಾಖೆಯ (IMD) ಇತ್ತೀಚಿನ ವರದಿ ಪ್ರಕಾರ, ಪ್ರಸ್ತುತ ದೆಹಲಿ-NCRನಲ್ಲಿ ಮೋಡ ಕವಿದ ವಾತಾವರಣವಿದ್ದು, ಸೋಮವಾರವೂ ಮಳೆಯಾಗುವ ಸಾಧ್ಯತೆಯಿದೆ. ಆದರೆ, ಶನಿವಾರ-ಭಾನುವಾರದಷ್ಟು ಇಲ್ಲದಿದ್ದರೂ ತುಂತುರು ಮಳೆಯಾಗಲಿದೆ. ಈ ಅವಧಿಯಲ್ಲಿ, ಗರಿಷ್ಠ ತಾಪಮಾನವು ಸುಮಾರು 35 ಡಿಗ್ರಿ ಮತ್ತು ಕನಿಷ್ಠ ತಾಪಮಾನವು ಸುಮಾರು 25 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆ ಇದೆ.


ಇದನ್ನೂ ಓದಿ: 'ಭಾರತದ ಅಳಿಯ' ಬ್ರಿಟನ್ ಪ್ರಧಾನಿ ರಿಷಿ ಸುನಕ್’ರನ್ನು ಪ್ರೀತಿಯಿಂದ ತಬ್ಬಿಕೊಂಡ ಪಿಎಂ ಮೋದಿ: ವಿಡಿಯೋ ನೋಡಿ


ಈ ರಾಜ್ಯಗಳಲ್ಲೂ ಮಳೆಯಾಗುವ ಸಾಧ್ಯತೆ:


ಹವಾಮಾನ ಇಲಾಖೆಯ ಪ್ರಕಾರ, ಇಂದು ಪೂರ್ವ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಾನ್ಸೂನ್ ಮಾರುತಗಳು ಜೈಸಲ್ಮೇರ್, ಕೋಟಾ, ಸಿಧಿ, ಜಮ್ಶೆಡ್‌’ಪುರ, ದಿಘಾ ಮತ್ತು ನಂತರ ಪೂರ್ವ-ಆಗ್ನೇಯ ದಿಕ್ಕಿನಿಂದ ಈಶಾನ್ಯ ಬಂಗಾಳ ಕೊಲ್ಲಿಯ ಮೂಲಕ ಹಾದು ಹೋಗುತ್ತಿವೆ. ಇಲಾಖೆ ಪ್ರಕಾರ ಮುಂದಿನ 3-4 ದಿನಗಳಲ್ಲಿ ಇಡೀ ಈಶಾನ್ಯ ಭಾರತದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.


ಹವಾಮಾನ ಇಲಾಖೆಯ ಪ್ರಕಾರ, ಸೆಪ್ಟೆಂಬರ್ 12 ರ ಸುಮಾರಿಗೆ ವಾಯುವ್ಯ ಮತ್ತು ಪಕ್ಕದ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ಹೊಸ ಚಂಡಮಾರುತದ ಪರಿಚಲನೆ ರೂಪುಗೊಳ್ಳುವ ಸಾಧ್ಯತೆಯಿದೆ. ಈ ಕಾರಣದಿಂದಾಗಿ ಹೆಚ್ಚಿನ ಮಳೆ ಇರುತ್ತದೆ. ಮಾನ್ಸೂನ್‌’ನ ಈ ಚಟುವಟಿಕೆಯಿಂದಾಗಿ, ಒಡಿಶಾ ಮತ್ತು ಛತ್ತೀಸ್‌’ಗಢದಲ್ಲಿ ಮಳೆ ಚಟುವಟಿಕೆಗಳು ಹೆಚ್ಚಾಗುವ ನಿರೀಕ್ಷೆಯಿದೆ. ಇದರೊಂದಿಗೆ ಮುಂದಿನ ದಿನಗಳಲ್ಲಿ ಕೇರಳ, ಮಾಹೆ, ಕರಾವಳಿ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲೂ ಭಾರೀ ಮಳೆಯಾಗುವ ನಿರೀಕ್ಷೆಯಿದೆ.


ಇದನ್ನೂ ಓದಿ: ರಾಜ್ಯದ 19 ಜಿಲ್ಲೆಗಳಲ್ಲಿ ಮುಂದಿನ 4 ದಿನ ಧಾರಾಕಾರ ಮಳೆ: ಮಿಂಚು, ಗುಡುಗು, ಗಾಳಿ ಸಹಿತ ಜಲಪ್ರವಾಹದ ಮುನ್ನೆಚ್ಚರಿಕೆ


ಕರ್ನಾಟಕದ ಹವಾಮಾನ ವರದಿ:


ಇಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಸೇರಿದಂತೆ ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 4 ದಿನ ಧಾರಾಕಾರ ಮಳೆ ಸುರಿಯಲಿದೆ. ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ತುಂತರು ಮಳೆಯಾಗುವ ಸಾಧ್ಯತೆಯಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ