Khel Ratna: ನೀರಜ್ ಚೋಪ್ರಾ ಸೇರಿದಂತೆ 12 ಆಟಗಾರರಿಗೆ ಖೇಲ್ ರತ್ನ, ಶಿಖರ್ ಧವನ್‌ಗೆ ಅರ್ಜುನ ಪ್ರಶಸ್ತಿ

Khel Ratna: ಭಾರತೀಯ ಪುರುಷರ ಹಾಕಿ ತಂಡದ ನಾಯಕ ಮನ್‌ಪ್ರೀತ್ ಸಿಂಗ್ ಅವರನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಸೇರಿಸಲಾಗಿದೆ. ಖೇಲ್ ರತ್ನವನ್ನು ಪಡೆದ ಇತರ ಕ್ರೀಡಾಪಟುಗಳಲ್ಲಿ ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ಮತ್ತು ಒಲಿಂಪಿಕ್ ಬೆಳ್ಳಿ ಪದಕ ವಿಜೇತ ಕುಸ್ತಿಪಟು ರವಿ ದಹಿಯಾ ಸೇರಿದ್ದಾರೆ.  

Written by - Yashaswini V | Last Updated : Nov 3, 2021, 07:07 AM IST
  • ನೀರಜ್ ಚೋಪ್ರಾಗೆ ಖೇಲ್ ರತ್ನ

    ಶಿಖರ್ ಧವನ್‌ಗೆ ಸರ್ಕಾರ ಅರ್ಜುನ ಪ್ರಶಸ್ತಿ ನೀಡಲಿದೆ
  • ರವಿ ದಹಿಯಾ ಕೂಡ ಅತ್ಯುನ್ನತ ಪ್ರಶಸ್ತಿಗೆ ಭಾಜನರಾಗಿದ್ದಾರೆ
Khel Ratna: ನೀರಜ್ ಚೋಪ್ರಾ ಸೇರಿದಂತೆ 12 ಆಟಗಾರರಿಗೆ ಖೇಲ್ ರತ್ನ, ಶಿಖರ್ ಧವನ್‌ಗೆ ಅರ್ಜುನ ಪ್ರಶಸ್ತಿ title=
National Sports Awards 2021

ನವದೆಹಲಿ: ಒಲಿಂಪಿಕ್ ಕಂಚಿನ ಪದಕ ವಿಜೇತ ಭಾರತೀಯ ಪುರುಷರ ಹಾಕಿ ತಂಡದ ನಾಯಕ ಮನ್‌ಪ್ರೀತ್ ಸಿಂಗ್ ಅವರು ಮಂಗಳವಾರ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದು, ಈ ವರ್ಷದ ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿಯ ಸಂಖ್ಯೆಯನ್ನು 12 ಕ್ಕೆ ಏರಿಸಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭ ನವೆಂಬರ್ 13 ರಂದು ರಾಷ್ಟ್ರಪತಿ ಭವನದಲ್ಲಿ ನಡೆಯಲಿದೆ. ಮನ್‌ಪ್ರೀತ್ ಅವರ ಹೆಸರನ್ನು ಈ ಹಿಂದೆ ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿತ್ತು. ಆದರೆ ಇದೀಗ ಅವರು ಖೇಲ್ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಅನುಭವಿ ಗೋಲ್‌ಕೀಪರ್ ಪಿಆರ್ ಶ್ರೀಜೇಶ್ ಅವರೊಂದಿಗೆ ಎರಡನೇ ಹಾಕಿ ಆಟಗಾರರಾಗಿ ಸ್ಥಾನ ಪಡೆದಿದ್ದಾರೆ.

ಈ ಆಟಗಾರರಿಗೆ ಖೇಲ್ ರತ್ನ :
ಖೇಲ್ ರತ್ನವನ್ನು (Khel Ratna) ಪಡೆದ ಇತರ ಕ್ರೀಡಾಪಟುಗಳಲ್ಲಿ ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ಮತ್ತು ಒಲಿಂಪಿಕ್ ಬೆಳ್ಳಿ ಪದಕ ವಿಜೇತ ಕುಸ್ತಿಪಟು ರವಿ ದಹಿಯಾ ಸೇರಿದ್ದಾರೆ. ಮಹಿಳಾ ಕ್ರಿಕೆಟಿಗರಾದ ಮಿಥಾಲಿ ರಾಜ್ ಕೂಡ ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅರ್ಜುನ ಪ್ರಶಸ್ತಿ ಪುರಸ್ಕೃತರಲ್ಲಿ ಹೆಚ್ಚಿನವರು ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ವಿಜೇತರಾಗಿದ್ದಾರೆ. ಇವರಲ್ಲಿ ಕ್ರಿಕೆಟಿಗ ಶಿಖರ್ ಧವನ್ ಕೂಡ ಸೇರಿದ್ದಾರೆ.

ಕ್ರೀಡಾ ಸಚಿವಾಲಯದ ಪ್ರಕಾರ, 'ಭಾರತದ ರಾಷ್ಟ್ರಪತಿಗಳು ನವೆಂಬರ್ 13, 2021 ರಂದು (ಶನಿವಾರ) ಸಂಜೆ 4.30 ರಿಂದ ರಾಷ್ಟ್ರಪತಿ ಭವನದ ದರ್ಬಾರ್ ಹಾಲ್‌ನಲ್ಲಿ ವಿಶೇಷವಾಗಿ ಆಯೋಜಿಸಲಾದ ಸಮಾರಂಭದಲ್ಲಿ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. COVID-19 ಸಾಂಕ್ರಾಮಿಕ ರೋಗದಿಂದಾಗಿ ಕಳೆದ ವರ್ಷ ಸಮಾರಂಭವನ್ನು ಆನ್‌ಲೈನ್‌ನಲ್ಲಿ ನಡೆಸಲಾಯಿತು. 

ಇದನ್ನೂ ಓದಿ- IPL 2022 Update - CSK ತೊರೆಯುವ ನಿರ್ಧಾರ ಕೈಗೊಂಡ MS Dhoni! ಮುಂದಿನ ಸೀಜನ್ ನಲ್ಲಿ ಈ ಆಟಗಾರ CSK ನಾಯಕ

ದ್ರೋಣಾಚಾರ್ಯ ಪ್ರಶಸ್ತಿಗೆ ಒಟ್ಟು 10 ಕೋಚ್‌ಗಳನ್ನು ಆಯ್ಕೆ ಮಾಡಲಾಗಿದೆ:
ಜೀವಮಾನ ಸಾಧನೆ ವಿಭಾಗದಲ್ಲಿ ಟಿಪಿ ಒಸೆಫ್ (ಅಥ್ಲೆಟಿಕ್ಸ್), ಸರ್ಕಾರ್ ತಲ್ವಾರ್ (ಕ್ರಿಕೆಟ್), ಸರ್ಪಾಲ್ ಸಿಂಗ್ (ಹಾಕಿ), ಅಶನ್ ಕುಮಾರ್ (ಕಬಡ್ಡಿ) ಮತ್ತು ತಪನ್ ಕುಮಾರ್ ಪಾಣಿಗ್ರಾಹಿ (ಈಜು) ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸಾಮಾನ್ಯ ದ್ರೋಣಾಚಾರ್ಯ ವಿಭಾಗದಲ್ಲಿ ರಾಧಾಕೃಷ್ಣನ್ ನಾಯರ್ ಪಿ (ಅಥ್ಲೆಟಿಕ್ಸ್), ಸಂಧ್ಯಾ ಗುರುಂಗ್ (ಬಾಕ್ಸಿಂಗ್), ಪ್ರೀತಮ್ ಸಿವಾಚ್ (ಹಾಕಿ), ಜೈ ಪ್ರಕಾಶ್ ನೌಟಿಯಾಲ್ (ಪ್ಯಾರಾ ಶೂಟಿಂಗ್) ಮತ್ತು ಸುಬ್ರಮಣ್ಯಂ ರಾಮನ್ (ಟೇಬಲ್ ಟೆನಿಸ್) ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಸಜ್ಜನ್ ಸಿಂಗ್ (ಕುಸ್ತಿ), ಮಾಜಿ ವಿಶ್ವ ಮತ್ತು ಏಷ್ಯನ್ ಚಾಂಪಿಯನ್ ಬಾಕ್ಸರ್‌ಗಳಾದ ಲೇಖಾ ಕೆಸಿ, ಅಭಿಜಿತ್ ಕುಂಟೆ (ಚೆಸ್), ದವೀಂದರ್ ಸಿಂಗ್ ಗರ್ಚಾ (ಹಾಕಿ) ಮತ್ತು ವಿಕಾಸ್ ಕುಮಾರ್ (ಕಬಡ್ಡಿ) ಅವರನ್ನು ಜೀವಮಾನ ಸಾಧನೆಗಾಗಿ ಧ್ಯಾನಚಂದ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ವಿಜೇತ ಆಟಗಾರರ ಪಟ್ಟಿ ಕೆಳಕಂಡಂತಿದೆ:
ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ: ನೀರಜ್ ಚೋಪ್ರಾ (Neeraj Chopra) (ಅಥ್ಲೆಟಿಕ್ಸ್), ರವಿಕುಮಾರ್ (ಕುಸ್ತಿ), ಲೊವ್ಲಿನಾ ಬೊರ್ಗೊಹೈನ್ (ಬಾಕ್ಸಿಂಗ್), ಪಿಆರ್ ಶ್ರೀಜೇಶ್ (ಹಾಕಿ), ಅವನಿ ಲೆಖರಾ (ಪ್ಯಾರಾ ಶೂಟಿಂಗ್), ಸುಮಿತ್ ಆಂಟಿಲ್ (ಪ್ಯಾರಾ ಅಥ್ಲೆಟಿಕ್ಸ್), ಪ್ರಮೋದ್ ಭಗತ್ (ಪ್ಯಾರಾ ಬ್ಯಾಡ್ಮಿಂಟನ್ ) , ಕೃಷ್ಣ ನಗರ (ಪ್ಯಾರಾ ಬ್ಯಾಡ್ಮಿಂಟನ್), ಮನೀಶ್ ನರ್ವಾಲ್ (ಪ್ಯಾರಾ ಶೂಟಿಂಗ್), ಮಿಥಾಲಿ ರಾಜ್ (ಕ್ರಿಕೆಟ್), ಸುನಿಲ್ ಛೆಟ್ರಿ (ಫುಟ್ಬಾಲ್), ಮನ್ಪ್ರೀತ್ ಸಿಂಗ್ (ಹಾಕಿ).

ಇದನ್ನೂ ಓದಿ- World Boxing Championship: ಸೆಮಿಫೈನಲ್ ತಲುಪಿದ ಆಕಾಶ್ ಕುಮಾರ್, ಮೆಡಲ್ ಪಕ್ಕಾ

ಅರ್ಜುನ ಪ್ರಶಸ್ತಿ ವಿಜೇತರ ಪಟ್ಟಿ:
ಅರ್ಪಿಂದರ್ ಸಿಂಗ್ (ಅಥ್ಲೆಟಿಕ್ಸ್), ಸಿಮ್ರಂಜಿತ್ ಕೌರ್ (ಬಾಕ್ಸಿಂಗ್), ಶಿಖರ್ ಧವನ್ (ಕ್ರಿಕೆಟ್), ಸಿಎ ಭವಾನಿ ದೇವಿ (ಫೆನ್ಸಿಂಗ್), ಮೋನಿಕಾ (ಹಾಕಿ), ವಂದನಾ ಕಟಾರಿಯಾ (ಹಾಕಿ), ಸಂದೀಪ್ ನರ್ವಾಲ್ (ಕಬಡ್ಡಿ), ಹಿಮಾನಿ ಉತ್ತಮ್ ಪರಬ್ (ಮಲ್ಲಖಾಂಬ್), ಅಭಿಷೇಕ್ ವರ್ಮಾ (ಶೂಟಿಂಗ್), ಅಂಕಿತಾ ರೈನಾ (ಟೆನಿಸ್), ದೀಪಕ್ ಪೂನಿಯಾ (ಕುಸ್ತಿ), ದಿಲ್‌ಪ್ರೀತ್ ಸಿಂಗ್ (ಹಾಕಿ), ಹರ್ಮನ್‌ಪ್ರೀತ್ ಸಿಂಗ್ (ಹಾಕಿ), ರೂಪಿಂದರ್ ಪಾಲ್ ಸಿಂಗ್ (ಹಾಕಿ), ಸುರೇಂದ್ರ ಕುಮಾರ್ (ಹಾಕಿ), ಅಮಿತ್ ರೋಹಿದಾಸ್ (ಹಾಕಿ), ಬಿರೇಂದರ್ ಲಾಕ್ರಾ (ಹಾಕಿ), ಸುಮಿತ್ (ಹಾಕಿ), ನೀಲಕಾಂತ್ ಶರ್ಮಾ (ಹಾಕಿ), ಹಾರ್ದಿಕ್ ಸಿಂಗ್ (ಹಾಕಿ), ವಿವೇಕ್ ಸಾಗರ್ ಪ್ರಸಾದ್ (ಹಾಕಿ), ಗುರ್ಜಂತ್ ಸಿಂಗ್ (ಹಾಕಿ), ಮಂದೀಪ್ ಸಿಂಗ್ (ಹಾಕಿ), ಶಂಶೇರ್ ಸಿಂಗ್ (ಹಾಕಿ), ಲಲಿತ್ ಕುಮಾರ್ ಉಪಾಧ್ಯಾಯ ( ಹಾಕಿ), ವರುಣ್ ಕುಮಾರ್ (ಹಾಕಿ), ಸಿಮ್ರಂಜಿತ್ ಸಿಂಗ್ (ಹಾಕಿ), ಯೋಗೇಶ್ ಕಥುನಿಯಾ (ಪ್ಯಾರಾ ಅಥ್ಲೆಟಿಕ್ಸ್), ನಿಶಾದ್ ಕುಮಾರ್ (ಪ್ಯಾರಾ ಅಥ್ಲೆಟಿಕ್ಸ್), ಪ್ರವೀಣ್ ಕುಮಾರ್ (ಪ್ಯಾರಾ ಅಥ್ಲೆಟಿಕ್ಸ್), ಸುಹಾಶ್ ಯತಿರಾಜ್ (ಪ್ಯಾರಾ ಬ್ಯಾಡ್ಮಿಂಟನ್), ಸಿಂಗ್ರಾಜ್ ಅಧಾನ (ಪ್ಯಾರಾ ಶೂಟಿಂಗ್) ಭಾವನಾ ಪಟೇಲ್ (ಪ್ಯಾರಾ ಟೇಬಲ್ ಟೆನಿಸ್), ಹರ್ವಿಂದರ್ ಸಿಂಗ್ (ಪ್ಯಾರಾ ಆರ್ಚರಿ) ಮತ್ತು ಶರದ್ ಕುಮಾರ್ (ಪ್ಯಾರಾ ಅಥ್ಲೆಟಿಕ್ಸ್).

ರಾಷ್ಟ್ರೀಯ ಖೇಲ್ ಪ್ರೋತ್ಸಾಹನ್ ಪುರಸ್ಕಾರ್: ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿಯ ಮೂಲಕ ಕ್ರೀಡೆಯನ್ನು ಉತ್ತೇಜಿಸಲು ಮಾನವ ರಚನಾ ಶಿಕ್ಷಣ ಸಂಸ್ಥೆ ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್.

ಮೌಲಾನಾ ಅಬುಲ್ ಕಲಾಂ ಆಜಾದ್ (MACA) ಟ್ರೋಫಿ: ಪಂಜಾಬ್ ವಿಶ್ವವಿದ್ಯಾಲಯ, ಚಂಡೀಗಢ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News