India vs Afghanistan 3rd T20 Highlights : ಬೆಂಗಳೂರಿನಲ್ಲಿ ಬುಧವಾರ ನಡೆದ ಅಫ್ಘಾನಿಸ್ತಾನ ವಿರುದ್ಧದ ಸರಣಿಯ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತ ತಂಡ ಸೂಪರ್ ಓವರ್‌ನಲ್ಲಿ ಗೆಲುವು ಸಾಧಿಸಿದೆ. ಪಂದ್ಯವನ್ನು 2 ಸೂಪರ್ ಓವರ್‌ಗಳಲ್ಲಿ ನಿರ್ಧರಿಸಲಾಯಿತು. ಎರಡನೇ ಸೂಪರ್ ಓವರ್‌ನಲ್ಲಿ ಭಾರತ ತಂಡ ಗೆಲುವು ಸಾಧಿಸಿತು. ಈ ಮೂಲಕ ಸರಣಿಯನ್ನು 3-0 ಅಂತರದಲ್ಲಿ ವಶಪಡಿಸಿಕೊಂಡಿರು.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಈ ಮೂರನೇ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಅವರ ಅಜೇಯ ಶತಕ ಮತ್ತು ರಿಂಕು ಸಿಂಗ್ (ನಾಟ್ ಔಟ್ 69) ತಂಡವನ್ನು ಗೆಲುವಿನ ದಡ ಸೇರಿಸಿದೆ. ರೋಹಿತ್ ಶರ್ಮಾ ಮತ್ತು ರಿಂಕು ಸಿಂಗ್ 190 ರನ್‌ಗಳ ಜೊತೆಯಾಟದಿಂದಾಗಿ ಭಾರತ 4 ವಿಕೆಟ್‌ಗೆ 212 ರನ್ ಗಳಿಸಿತು.
ಇದನ್ನೂ ಓದಿ:Sania Mirza Divorce: ಸಾನಿಯಾ ಮಿರ್ಜಾ ವಿಚ್ಛೇದನದ ಬಗ್ಗೆ ಕೊಟ್ಟರು ಬಿಗ್ ಅಪ್ಡೇಟ್!
ಮೊದಲ ಸೂಪರ್ ಓವರ್‌ನಲ್ಲಿ ಎರಡೂ ತಂಡಗಳು 16-16 ರನ್ ಹೊಡೆದವು. ಎರಡನೇ ಸೂಪರ್ ಓವರ್‌ನಲ್ಲಿ ಭಾರತ 11 ರನ್‌ಗಳನ್ನು ಬಾರಿಸಿತು, ಈ ಓವರ್‌ನಲ್ಲಿ ಅಫ್ಘಾನಿಸ್ತಾನ ಕೇವಲ 1 ರನ್‌ಗೆ 2 ವಿಕೆಟ್ ಕಳೆದುಕೊಂಡಿತು. ಈ ಮೂಲಕ ಎರಡು ಸೂಪರ್ ಓವರ್‌ಗಳ ಈ ಪಂದ್ಯದಲ್ಲಿ ಭಾರತ ಗೆಲುವು ದಾಖಲಿಸಿತು.
ಇದಕ್ಕೂ ಮೊದಲು ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 212 ರನ್ ಗಳಿಸಿತು. ನಾಯಕ ರೋಹಿತ್ ಶರ್ಮಾ ಹಾಗೂ ರಿಂಕು ಸಿಂಗ್ ಭರ್ಜರಿ ಜೊತೆಯಾಟ ಆಡಿದರು. ರೋಹಿತ್ 121 ರನ್ ಗಳಿಸಿದರೆ, ರಿಂಕು 69 ರನ್ ಗಳಿಸಿದರು. ಇವರಿಬ್ಬರು 190 ರನ್‌ಗಳ ಅಜೇಯ ಜೊತೆಯಾಟ ಆಡಿದರು. ಇದು ಟಿ20ಯಲ್ಲಿ ಭಾರತದ ಅತ್ಯುತ್ತಮ ಜೊತೆಯಾಟವಾಗಿದೆ. ರೋಹಿತ್ 69 ಎಸೆತಗಳಲ್ಲಿ 11 ಬೌಂಡರಿ ಹಾಗೂ 8 ಸಿಕ್ಸರ್ ಸಿಡಿಸಿದರೆ, ರಿಂಕು 39 ಎಸೆತಗಳಲ್ಲಿ 2 ಬೌಂಡರಿ ಹಾಗೂ 6 ಸಿಕ್ಸರ್ ಸಿಡಿಸಿದರು. ಅಫ್ಘಾನಿಸ್ತಾನ ಪರ ಫರೀದ್ ಅಹ್ಮದ್ ಗರಿಷ್ಠ 3 ವಿಕೆಟ್ ಪಡೆದರು.
213 ರನ್‌ಗಳ ದೊಡ್ಡ ಗುರಿ ಬೆನ್ನತ್ತಿದ ಅಫ್ಘಾನಿಸ್ತಾನ ಬಿರುಸಿನ ಆರಂಭ ನೀಡಿತು. ರಹಮಾನುಲ್ಲಾ ಗುರ್ಬಾಜ್ ಮತ್ತು ನಾಯಕ ಇಬ್ರಾಹಿಂ ಝದ್ರಾನ್ ಒಟ್ಟಾಗಿ ಸ್ಕೋರ್ ಅನ್ನು ಕೇವಲ 5.5 ಓವರ್‌ಗಳಲ್ಲಿ 50 ರನ್‌ಗಳಿಗೆ ಕೊಂಡೊಯ್ದರು. ಇಬ್ಬರೂ ಅರ್ಧಶತಕಗಳನ್ನು ಗಳಿಸಿದರು ಮತ್ತು 11 ಓವರ್‌ಗಳಲ್ಲಿ 93 ರನ್‌ಗಳ ಆರಂಭಿಕ ಜೊತೆಯಾಟವನ್ನು ನೀಡಿದರು. ಕುಲದೀಪ್ ಯಾದವ್ ಗುರ್ಬಾಜ್ ಅವರ ವಿಕೆಟ್ ಪಡೆಯುವ ಮೂಲಕ ಈ ಜೊತೆಯಾಟವನ್ನು ಮುರಿದರು. ಗುರ್ಬಾಜ್ 32 ಎಸೆತಗಳಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್‌ಗಳ ನೆರವಿನಿಂದ 50 ರನ್ ಗಳಿಸಿದರು. ಝದ್ರಾನ್ (50) ಅವರ 41 ಎಸೆತಗಳಲ್ಲಿ 4 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ ಔಟಾದರು. ಮೊಹಮ್ಮದ್ ನಬಿ 16 ಎಸೆತಗಳಲ್ಲಿ 2 ಬೌಂಡರಿ ಹಾಗೂ 3 ಸಿಕ್ಸರ್‌ಗಳ ನೆರವಿನಿಂದ 34 ರನ್ ಗಳಿಸಿದರು. ಭಾರತದ ಪರ ವಾಷಿಂಗ್ಟನ್ ಸುಂದರ್ 3 ಓವರ್ ಗಳಲ್ಲಿ 18 ರನ್ ನೀಡಿ 3 ವಿಕೆಟ್ ಪಡೆದರು. ಇವರಲ್ಲದೆ ವೇಗಿ ಅವೇಶ್ ಖಾನ್ ಮತ್ತು ಕುಲದೀಪ್ ಯಾದವ್ ತಲಾ 1 ವಿಕೆಟ್ ಪಡೆದರು.
ಇದನ್ನೂ ಓದಿ:ಐಫೋನ್ ಬಳಕೆ ಮಾಡಿದನೆಂದು ಸ್ಟಾರ್ ಕ್ರಿಕೆಟಿಗನಿಗೆ 2 ವರ್ಷ ನಿಷೇಧ ಹೇರಿದ ಐಸಿಸಿ! ಶಾಕ್ ಆದ್ರೂ ಇದು ನಿಜ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.