IND vs AUS : ಎರಡನೇ ODIಗೂ ಮುನ್ನ ಭಾರತೀಯ ಅಭಿಮಾನಿಗಳಿಗೆ ಬಿಗ್ ಶಾಕ್..!

ಸದ್ಯ ಈ ಸರಣಿಯಲ್ಲಿ ಟೀಂ ಇಂಡಿಯಾ 1-0 ಮುನ್ನಡೆಯಲ್ಲಿದೆ, ಆದರೆ ಎರಡನೇ ಪಂದ್ಯಕ್ಕೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. 

Written by - Channabasava A Kashinakunti | Last Updated : Mar 18, 2023, 02:21 PM IST
  • ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಬಿಗ್ ಶಾಕ್
  • ಸರಣಿ ಗೆಲುವಿನ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ
  • ಭಾರತ vs ಆಸ್ಟ್ರೇಲಿಯಾ ಏಕದಿನ ಸರಣಿ
IND vs AUS : ಎರಡನೇ ODIಗೂ ಮುನ್ನ ಭಾರತೀಯ ಅಭಿಮಾನಿಗಳಿಗೆ ಬಿಗ್ ಶಾಕ್..! title=

IND vs AUS 2nd ODI Match : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ODI ಸರಣಿಯ (IND vs AUS) ಎರಡನೇ ಪಂದ್ಯವು ಮಾರ್ಚ್ 19 ರಂದು ವಿಶಾಖಪಟ್ಟಣದ ವೈ.ಎಸ್. ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಸದ್ಯ ಈ ಸರಣಿಯಲ್ಲಿ ಟೀಂ ಇಂಡಿಯಾ 1-0 ಮುನ್ನಡೆಯಲ್ಲಿದೆ, ಆದರೆ ಎರಡನೇ ಪಂದ್ಯಕ್ಕೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. 

ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಬಿಗ್ ಶಾಕ್

ಭಾರತ-ಆಸ್ಟ್ರೇಲಿಯಾ ನಡುವಿನ ಈ ಪಂದ್ಯಕ್ಕೆ ಮಳೆಯ ಭೀತಿ ಎದುರಾಗಿದೆ. ಭಾನುವಾರ ವಿಶಾಖಪಟ್ಟಣದಲ್ಲಿ ಎರಡೂವರೆ ಮೂರು ಗಂಟೆಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಹಾಗೆ, ಮಳೆಯ ಜೊತೆಗೆ, ಚಂಡಮಾರುತ ಮತ್ತು ಭಾರಿ ಗಾಳಿಯ ಎಚ್ಚರಿಕೆಯನ್ನು ಸಹ ನೀಡಲಾಗಿದೆ. ಇಂದು ಕೂಡ ಇಲ್ಲಿ 5 ಗಂಟೆಗಳ ಕಾಲ ಮಳೆಯಾಗುವ ನಿರೀಕ್ಷೆ ಇದೆ. ಭಾರತೀಯ ಕಾಲಮಾನದ ಪ್ರಕಾರ ಈ ಪಂದ್ಯದ ಟಾಸ್ ಮಧ್ಯಾಹ್ನ 1 ಗಂಟೆಗೆ ನಡೆಯಲಿದ್ದು, ಪಂದ್ಯ ಮಧ್ಯಾಹ್ನ 1.30 ರಿಂದ ನಡೆಯಲಿದೆ. ಆದರೆ ಈ ಪಂದ್ಯದಲ್ಲಿ ಮಳೆ ವಿಲನ್ ಆಗಿ ಕಾಡಬಹುದು ಎಂದು ಹೇಳಲಾಗುತ್ತಿದೆ.

ಸರಣಿ ಗೆಲುವಿನ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ 

ಈ ಪಂದ್ಯ ಭಾರತ ಕ್ರಿಕೆಟ್ ತಂಡಕ್ಕೆ ಅತ್ಯಂತ ಮಹತ್ವದ್ದಾಗಿದೆ. ಈ ಪಂದ್ಯವನ್ನು ಗೆದ್ದರೆ ಟೀಂ ಇಂಡಿಯಾ ಸರಣಿಯನ್ನೂ ವಶಪಡಿಸಿಕೊಳ್ಳಲಿದೆ. ಉಭಯ ತಂಡಗಳ ನಡುವಿನ ಸರಣಿಯ ಮೊದಲ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ 35.4 ಓವರ್‌ಗಳಲ್ಲಿ 188 ರನ್‌ಗಳಿಗೆ ಆಲೌಟಾಯಿತು. 189 ರನ್‌ಗಳ ಗುರಿಯನ್ನು ಟೀಂ ಇಂಡಿಯಾ ಕೇವಲ 5 ವಿಕೆಟ್ ನಷ್ಟದಲ್ಲಿ ಸಾಧಿಸಿತ್ತು.

 

ಭಾರತ vs ಆಸ್ಟ್ರೇಲಿಯಾ ಏಕದಿನ ಸರಣಿ

1ನೇ ODI ಮಾರ್ಚ್ 17 ಭಾರತ 5 ವಿಕೆಟ್‌ಗಳಿಂದ ಗೆದ್ದಿತು

2ನೇ ODI ಮಾರ್ಚ್ 19 ವಿಶಾಖಪಟ್ಟಣ

3ನೇ ODI ಮಾರ್ಚ್ 22 ಚೆನ್ನೈ

ಏಕದಿನ ಸರಣಿಗೆ ಟೀಂ ಇಂಡಿಯಾ:

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಜಯದೇವ್ ಉನದ್ಕತ್.

ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡ:

ಸ್ಟೀವ್ ಸ್ಮಿತ್ (ನಾಯಕ), ಸೀನ್ ಅಬಾಟ್, ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲ್ಯಾಬುಸ್‌ಚಾಗ್ನೆ, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News