IND vs AUS 2nd ODI Match : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ODI ಸರಣಿಯ (IND vs AUS) ಎರಡನೇ ಪಂದ್ಯವು ಮಾರ್ಚ್ 19 ರಂದು ವಿಶಾಖಪಟ್ಟಣದ ವೈ.ಎಸ್. ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಸದ್ಯ ಈ ಸರಣಿಯಲ್ಲಿ ಟೀಂ ಇಂಡಿಯಾ 1-0 ಮುನ್ನಡೆಯಲ್ಲಿದೆ, ಆದರೆ ಎರಡನೇ ಪಂದ್ಯಕ್ಕೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. 


COMMERCIAL BREAK
SCROLL TO CONTINUE READING

ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಬಿಗ್ ಶಾಕ್


ಭಾರತ-ಆಸ್ಟ್ರೇಲಿಯಾ ನಡುವಿನ ಈ ಪಂದ್ಯಕ್ಕೆ ಮಳೆಯ ಭೀತಿ ಎದುರಾಗಿದೆ. ಭಾನುವಾರ ವಿಶಾಖಪಟ್ಟಣದಲ್ಲಿ ಎರಡೂವರೆ ಮೂರು ಗಂಟೆಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಹಾಗೆ, ಮಳೆಯ ಜೊತೆಗೆ, ಚಂಡಮಾರುತ ಮತ್ತು ಭಾರಿ ಗಾಳಿಯ ಎಚ್ಚರಿಕೆಯನ್ನು ಸಹ ನೀಡಲಾಗಿದೆ. ಇಂದು ಕೂಡ ಇಲ್ಲಿ 5 ಗಂಟೆಗಳ ಕಾಲ ಮಳೆಯಾಗುವ ನಿರೀಕ್ಷೆ ಇದೆ. ಭಾರತೀಯ ಕಾಲಮಾನದ ಪ್ರಕಾರ ಈ ಪಂದ್ಯದ ಟಾಸ್ ಮಧ್ಯಾಹ್ನ 1 ಗಂಟೆಗೆ ನಡೆಯಲಿದ್ದು, ಪಂದ್ಯ ಮಧ್ಯಾಹ್ನ 1.30 ರಿಂದ ನಡೆಯಲಿದೆ. ಆದರೆ ಈ ಪಂದ್ಯದಲ್ಲಿ ಮಳೆ ವಿಲನ್ ಆಗಿ ಕಾಡಬಹುದು ಎಂದು ಹೇಳಲಾಗುತ್ತಿದೆ.


ಸರಣಿ ಗೆಲುವಿನ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ 


ಈ ಪಂದ್ಯ ಭಾರತ ಕ್ರಿಕೆಟ್ ತಂಡಕ್ಕೆ ಅತ್ಯಂತ ಮಹತ್ವದ್ದಾಗಿದೆ. ಈ ಪಂದ್ಯವನ್ನು ಗೆದ್ದರೆ ಟೀಂ ಇಂಡಿಯಾ ಸರಣಿಯನ್ನೂ ವಶಪಡಿಸಿಕೊಳ್ಳಲಿದೆ. ಉಭಯ ತಂಡಗಳ ನಡುವಿನ ಸರಣಿಯ ಮೊದಲ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ 35.4 ಓವರ್‌ಗಳಲ್ಲಿ 188 ರನ್‌ಗಳಿಗೆ ಆಲೌಟಾಯಿತು. 189 ರನ್‌ಗಳ ಗುರಿಯನ್ನು ಟೀಂ ಇಂಡಿಯಾ ಕೇವಲ 5 ವಿಕೆಟ್ ನಷ್ಟದಲ್ಲಿ ಸಾಧಿಸಿತ್ತು.


ಕ್ಯಾಮೆರಾನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲ್ಯಾಬುಸ್‌ಚಾಗ್ನೆ, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.