IND vs AUS 2nd T20I: ಭಾರತ vs ಆಸ್ಟ್ರೇಲಿಯಾ 8 Overಗಳ ಪಂದ್ಯ: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ
ಮಹಾರಾಷ್ಟ್ರದ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಎರಡನೇ T20I ಪಂದ್ಯ ನಡೆಯಲಿದೆ. ಕಳೆದ ಕೆಲ ದಿನಗಳಿಂದ ನಾಗ್ಪುರದಲ್ಲಿ ಭಾರೀ ಮಳೆಯಾಗುತ್ತಿದೆ. ಇಂದೂ ಸಹ ಇದರ ಪರಿಣಾಮ ಪಂದ್ಯದ ಮೇಲೆ ಬಿದ್ದಿದ್ದು, ತಡವಾಗಿ ಆಟ ಶುರುವಾಗಿದೆ.
ಇಂದು ಸಂಜೆ 7ಗಂಟೆಗೆ ಪ್ರಾರಂಭವಾಗಬೇಕಿದ್ದ ಭಾರತ ಮತ್ತು ಆಸ್ಟ್ರೇಲಿಯಾ ಎರಡನೇ T20I ಪಂದ್ಯ ಇದೀಗ ಆರಂಭವಾಗಲಿದೆ. ಸದ್ಯ ಟಾಸ್ ಗೆದ್ದ ಭಾರತ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಇದನ್ನೂ ಓದಿ: Legends League 2022: ಭಿಲ್ವಾರ ಕಿಂಗ್ಸ್- ಇಂಡಿಯಾ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಗೆಲುವು ಈ ತಂಡಕ್ಕೆ ಪಕ್ಕಾ!
ಮಹಾರಾಷ್ಟ್ರದ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಎರಡನೇ T20I ಪಂದ್ಯ ನಡೆಯಲಿದೆ. ಕಳೆದ ಕೆಲ ದಿನಗಳಿಂದ ನಾಗ್ಪುರದಲ್ಲಿ ಭಾರೀ ಮಳೆಯಾಗುತ್ತಿದೆ. ಇಂದೂ ಸಹ ಇದರ ಪರಿಣಾಮ ಪಂದ್ಯದ ಮೇಲೆ ಬಿದ್ದಿದ್ದು, ತಡವಾಗಿ ಆಟ ಶುರುವಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಬಿಸಿಸಿಐ “1 ನೇ ಇನಿಂಗ್ಸ್: 9:30 -10:04 PM, ಮಧ್ಯಂತರ: 10:04 - 10:14 PM, 2ನೇ ಇನಿಂಗ್ಸ್: 10:14-10:48 PM, ಪವರ್‌ಪ್ಲೇ 2 ಓವರ್‌ಗಳು, ಪ್ರತಿ ಬೌಲರ್‌ಗೆ ಗರಿಷ್ಠ 2 ಓವರ್‌ಗಳು, ಸ್ಲೋ-ಓವರ್ ರೇಟ್‌ಗೆ ಆಟದ ಪೆನಾಲ್ಟಿ ಇಲ್ಲ, ಯಾವುದೇ ಪಾನೀಯಗಳ ವಿರಾಮವಿಲ್ಲ” ಎಂದು ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದೆ.
ಇದನ್ನೂ ಓದಿ: Pro Kabaddi League 9 : ರಾಕೇಶ್ ಗೌಡನನ್ನು ಭರ್ಜರಿಯಾಗಿ ಸ್ವಾಗತಿಸಿದ ಬೆಂಗಳೂರು ಬುಲ್ಸ್ ಟೀಂ!
ಈ ಪಂದ್ಯದಲ್ಲಿ ಕೆಎಲ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಹರ್ಷಲ್ ಪಟೇಲ್, ಜಸ್ಪ್ರೀತ್ ಬೂಮ್ರಾ, ಉಮೇಶ್ ಯಾದವ್ ಕಾಣಿಸಿಕೊಳ್ಳಲಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.